ಉಡುಪಿ: ಸೆ.17ರಂದು ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ
ಉಡುಪಿ, ಸೆ.15: ಉಡುಪಿ ಲೋಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಸೆ.17ರಂದು ಬೆಳಗ್ಗೆ 10ಗಂಟೆಯಿಂದ ಸಂಜೆ 4ಗಂಟೆಯವರೆಗೆ ಆಸ್ಪತ್ರೆ ಯಲ್ಲಿ ಹಮ್ಮಿಕೊಳ್ಳ ಲಾಗಿದೆ.
18ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಹಾಗೂ ಪ್ರಥಮ ಡೋಸ್ ಪಡೆದು 84 ದಿನ ಪೂರೈಸಿದವರಿಗೆ ದ್ವಿತೀಯ ಡೋಸ್ ಲಸಿಕೆ ನೀಡ ಲಾಗುವುದು. ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳ ಬೇಕು ಎಂದು ಪ್ರಕಟಣೆ ತಿಳಿಸಿದೆ.
Next Story





