ವಕೀಲರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ

ಉಡುಪಿ, ಸೆ.15: ಉಡುಪಿ ವಕೀಲರ ಸಂಘ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಾಯಕ್ಸ್ ಗ್ರೂಪ್ ಸಹಯೋಗದಲ್ಲಿ ವಕೀಲರ ಸಂಘದ ಸದಸ್ಯರು ಮತ್ತು ಕುಟುಂಬ ಸದಸ್ಯರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ವಿವಿಧ ಸೇವೆಗಳನ್ನು ಒದಗಿಸುವ ಕಾರ್ಯಕ್ರಮವು ಉಡುಪಿ ವಕೀಲರ ಸಂಘದ ಭಾಂಗಣದಲ್ಲಿ ಬುಧವಾರ ನಡೆಯಿತು.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಅಧ್ಯಕ್ಷ ಸುಬ್ರಹ್ಮಣ್ಯ ಜೆ.ಎನ್. ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸೇವಾ ಸಿಂಧು ಯೋಜನಾ ವ್ಯವಸ್ಥಾಪಕ ಅರುಣ್ ಕುಮಾರ್ ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಸ್ವಾಗತಿಸಿದರು. ನ್ಯಾಯವಾದಿ ರಾಜಶೇಖರ ಶ್ಯಾಮರಾವ್ ಕಾರ್ಯಕ್ರಮ ನಿರೂಪಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು.
Next Story





