Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರಕಾರವನ್ನು ಒತ್ತಾಯಿಸಿ...

ಕೇಂದ್ರ ಸರಕಾರವನ್ನು ಒತ್ತಾಯಿಸಿ ವಿಧಾನಮಂಡಲದಲ್ಲಿ ಗೊತ್ತುವಳಿ ಅಂಗೀಕರಿಸೋಣ: ಸಿದ್ದರಾಮಯ್ಯ

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತ ವಿಚಾರ

ವಾರ್ತಾಭಾರತಿವಾರ್ತಾಭಾರತಿ15 Sept 2021 10:16 PM IST
share
ಕೇಂದ್ರ ಸರಕಾರವನ್ನು ಒತ್ತಾಯಿಸಿ ವಿಧಾನಮಂಡಲದಲ್ಲಿ ಗೊತ್ತುವಳಿ ಅಂಗೀಕರಿಸೋಣ: ಸಿದ್ದರಾಮಯ್ಯ

ಬೆಂಗಳೂರು, ಸೆ.15: ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ವಿಧಾನಮಂಡಲದ ಉಭಯ ಸದನಗಳು ಸರ್ವಾನುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಕಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ನಿಯಮ 69ರ ಮೇರೆಗೆ ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಿ ನೀಡಿದ್ದ ಸೂಚನೆ ಮೇಲೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಎಲ್ಲ ಪಕ್ಷಗಳ ನಾಯಕರು ಒಪ್ಪಿದರೆ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡುವ ಹೊಣೆಯನ್ನು ನಾನು ಹೊರಲು ಸಿದ್ಧನಿದ್ದೇನೆ. ತಮಿಳುನಾಡಿನ ಸ್ಟಾಲಿನ್ ಸರಕಾರ ಈಗಾಗಲೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಮಾರಾಟ ತೆರಿಗೆ ಕಡಿತ ಮಾಡಿದಂತೆ ರಾಜ್ಯ ಸರಕಾರ ಮಾರಾಟ ತೆರಿಗೆಯನ್ನು ಶೇ.50ರಷ್ಟು ಕಡಿತಗೊಳಿಸಬೇಕು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಅಗತ್ಯ ವಸ್ತುಗಳ ಬೆಲೆ ಇಂದು ಗಗನ ಮುಟ್ಟಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ, ಔಷಧ, ಪ್ರಯಾಣ ದರ ಹೀಗೆ ಎಲ್ಲಾ ಜೀವನಾವಶ್ಯಕ ವಸ್ತುಗಳ, ಸೇವೆಗಳ ಬೆಲೆ ಮಿತಿಮೀರಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ಮಾಡಲು ಕಷ್ಟಪಡಬೇಕಾಗಿದೆ. ಇದನ್ನೇ ನೀವು ಅಚ್ಚೇದಿನ್ ಎಂದು ಕರೆಯುತ್ತೀರ? ಎಂದು ಅವರು ಪ್ರಶ್ನಿಸಿದರು.

ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಕ್ಕೆ ತೈಲ ಕಂಪನಿಗಳು ಅಂತರ್‍ರಾಷ್ಟ್ರೀಯ ಮಾರುಕಟ್ಟೆಯ ಸ್ಥಿತಿಗೆ ಅನುಗುಣವಾಗಿ ಬೆಲೆ ಏರಿಕೆ ಮಾಡುತ್ತಿವೆ, ಬೆಲೆ ನಿಯಂತ್ರಣ ನಮ್ಮ ಕೈಲಿ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳುತ್ತಾರೆ. ಬೆಲೆಯೇರಿಕೆಗೆ ಉತ್ತರ ನೀಡಬೇಕಾದವರು ತೈಲ ಕಂಪನಿಗಳ ಎಂ.ಡಿಗಳೋ ಅಥವಾ ಕೇಂದ್ರ ಸರಕಾರವೋ? ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಬಿಜೆಪಿಯವರು ಪೆಟ್ರೋಲ್ ಬೆಲೆ ಏರಿಕೆಯಾದಾಗ ಪ್ರತಿಭಟನೆ ಮಾಡುತ್ತಿದ್ದುದ್ದು ತೈಲ ಕಂಪನಿಯ ವಿರುದ್ಧವೋ ಅಥವಾ ಕೇಂದ್ರ ಸರಕಾರದ ವಿರುದ್ಧವೋ ಎಂದು ನೆನಪಿಸಿಕೊಳ್ಳಲಿ ಎಂದು ಅವರು ಹೇಳಿದರು.

ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಬೇಕಾಬಿಟ್ಟಿ ಏರಿಕೆ ಮಾಡಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಡೀಸೆಲ್ ಮೇಲೆ ರೂ.3.45 ತೆರಿಗೆ ಇತ್ತು, ಇಂದು ರೂ.31.84 ಆಗಿದೆ. ಅಂದರೆ ಸುಮಾರು ಒಂಭತ್ತು ಪಟ್ಟು ಹೆಚ್ಚಾಗಿದೆ. ಅದೇ ರೀತಿ ಪೆಟ್ರೋಲ್ ಮೇಲೆ ರೂ.9.21 ಅಬಕಾರಿ ಸುಂಕ ಇತ್ತು, ಇಂದು ರೂ.32.98 ಆಗಿದೆ. ಅಂದರೆ ಮೂರು ಪಟ್ಟು ಹೆಚ್ಚಾಗಿದೆ. ಇದರಿಂದ ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಾಗಿ, ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಏರಿಕೆಯಾದ ಕಾರಣ ವಸ್ತುಗಳ ಬೆಲೆ ಏರಿಕೆಯಾಗಿದೆ. ಅದರಲ್ಲೂ ಡೀಸೆಲ್ ಬೆಲೆ ಏರಿಕೆಯಾದರೆ ನಮ್ಮ ಮನೆಗೆ ಬರುವ ಪ್ರತಿ ಕಾಳು ಅಕ್ಕಿ, ಬೇಳೆಗಳ ಬೆಲೆ ಹೆಚ್ಚಾಗುತ್ತವೆ. ವಸ್ತುಗಳ ಉತ್ಪಾದನಾ ವೆಚ್ಚ ಮತ್ತು ಸಾಗಣೆಯ ವೆಚ್ಚಗಳು ಹೆಚ್ಚುತ್ತವೆ. ಈ ಸತ್ಯ ತಿಳಿದಿದ್ದ ಕಾರಣಕ್ಕಾಗಿಯೆ ಮನಮೋಹನ ಸಿಂಗ್ ಅವರು ಡೀಸೆಲ್ ಬೆಲೆಯನ್ನು 46 ರೂಪಾಯಿಗಳ ಒಳಗೆ ಇರಿಸಿದ್ದರು. ಪೆಟ್ರೋಲ್ ಮೇಲೆ 9.21 ರೂಗಳಷ್ಟು ತೆರಿಗೆ ವಿಧಿಸಿದರೆ, ಡೀಸೆಲ್ ಮೇಲೆ ಕೇವಲ 3.45 ರೂಗಳಷ್ಟು ಹೆಚ್ಚುವರಿ ಅಬಕಾರಿ ಸುಂಕ ವಿಧಿಸಿದ್ದರು ಎಂದು ಅವರು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಪೆಟ್ರೋಲ್ ದರ ರೂ.105 ದಾಟಿದೆ. 2012 ರಲ್ಲಿ ಕಚ್ಚಾ ತೈಲದ ಬೆಲೆ 125.45 ಡಾಲರ್ ಇದ್ದಾಗ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.41.91, ಪ್ರತಿ ಲೀಟರ್ ಪೆಟ್ರೋಲ್ ರೂ.78.5 ಇತ್ತು. 2014 ರಲ್ಲಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ಪ್ರತಿ ಬ್ಯಾರಲ್ ಕಚ್ಚಾ ತೈಲಕ್ಕೆ 105.52 ಡಾಲರ್‍ಗೆ ಇಳಿಯಿತು. ಆಗ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.55.48, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.80.11ಗೆ ಮಾರಾಟ ಮಾಡಿದರು ಎಂದು ಸಿದ್ದರಾಮಯ್ಯ ಹೇಳಿದರು.

2017 ರಲ್ಲಿ ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ 47.56 ಡಾಲರ್‍ಗೆ ಇಳಿಯಿತು. ಆದರೆ ನರೇಂದ್ರ ಮೋದಿ ಕೇಂದ್ರ ಸರಕಾರ ವಿಧಿಸುವ ಹೆಚ್ಚುವರಿ ಅಬಕಾರಿ ಸುಂಕವನ್ನು ಡೀಸೆಲ್ ಮೇಲೆ ರೂ.15.83 ಏರಿಸಿದರು, ಪೆಟ್ರೋಲ್ ಮೇಲೆ ರೂ.19.98ಗೆ ಏರಿಸಿದರು. ಅದಕ್ಕೂ ಮೊದಲು 2013 ರಲ್ಲಿ ಡೀಸೆಲ್ ಮೇಲೆ ರೂ.3.45, ಪೆಟ್ರೋಲ್ ಮೇಲೆ ರೂ.9.21ಗಳನ್ನು ಹೆಚ್ಚುವರಿ ಅಬಕಾರಿ ಸುಂಕ ಎಂದು ಸಂಗ್ರಹ ಮಾಡಲಾಗುತ್ತಿತ್ತು ಎಂದು ಅವರು ತಿಳಿಸಿದರು.

ಕಚ್ಚಾತೈಲ ಬೆಲೆ ಆಧರಿಸಿ ಪೆಟ್ರೋಲ್‍ನ ಇಂದಿನ ಮೂಲ ಬೆಲೆ ರೂ.38, ರಾಜ್ಯ ಹಾಗೂ ಕೇಂದ್ರ ಸರಕಾರದ ತೆರಿಗೆ ಒಟ್ಟು ರೂ.67. ಹೀಗಾಗಿ ಪೆಟ್ರೋಲ್ ಬೆಲೆ ಲೀಟರ್‍ಗೆ 105 ದಾಟಿದೆ. ಇದಕ್ಕೆ ಅಂತರ್‍ರಾಷ್ಟ್ರೀಯ ಮಾರುಕಟ್ಟೆ, ತಾಲಿಬಾನ್ ಕಾರಣ ಅಂದರೆ ಹೇಗೆ? ಗ್ಯಾಸ್ ಬೆಲೆ ಹಿಂದೆ ರೂ.414 ಇವತ್ತು 980 ಆಗಿದೆ. ಸಬ್ಸಿಡಿ ಹಣವನ್ನು ನಿಲ್ಲಿಸಲಾಗಿದೆ. ಇದರಿಂದ ಸಾಮಾನ್ಯ ಜನ ಗ್ಯಾಸ್ ಖರೀದಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ಉಜ್ವಲ ಯೋಜನೆಯಡಿ ಗ್ಯಾಸ್ ಬಳಕೆ ಮಾಡುತ್ತಿದ್ದ ಶೇ.36ರಷ್ಟು ಜನ ಕಟ್ಟಿಗೆ ಒಲೆ ಬಳಕೆಗೆ ಮರಳಿದ್ದಾರೆ. ದೇಶದಲ್ಲಿ ಎಂಟು ಕೋಟಿ ಉಜ್ವಲ ಯೋಜನೆ ಬಳಕೆದಾರರು ಸೇರಿ ಒಟ್ಟು 28 ಕೋಟಿ ಗ್ಯಾಸ್ ಬಳಕೆದಾರರು ಇದ್ದಾರೆ, ನಮ್ಮ ರಾಜ್ಯದಲ್ಲಿ 1 ಕೋಟಿ 78 ಲಕ್ಷ ಗ್ಯಾಸ್ ಬಳಕೆದಾರರಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಲೆ ಏರಿಕೆ; ಸುಡುತ್ತಿದೆ ಜನರ ಬದುಕನ್ನು

ಬೆಲೆ ಏರಿಕೆ ಕುರಿತು ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಇದೇ ವೇಳೆ ಕವಿ ಕುಮಾರವ್ಯಾಸನ ಪದ್ಯ ‘ಅರಸು ರಾಕ್ಷಸ ಮಂತ್ರಿಯೆಂಬುವ, ಮೊರೆವ ಹುಲಿ ಪರಿವಾರ ಹದ್ದಿನ, ನೆರವಿ ಬಡವರ ಭಿನ್ನಪವನಿನ್ನಾರು ಕೇಳುವರು, ಉರಿ ಉರಿವುತಿದೆ ದೇಶ ನಾವಿನ್ನಿರಲು ಬಾರದೆನ್ನುತ ಜನ ಬೇಸರದ ಬೇಗೆಯಲಿರದಲೆ ಭೂಪಾಲ ಕೇಳೆಂದ’ ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X