Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷ್ಣಾ ಮೇಲ್ದಂಡೆ-3 ಪೂರ್ಣಗೊಳಿಸಲು...

ಕೃಷ್ಣಾ ಮೇಲ್ದಂಡೆ-3 ಪೂರ್ಣಗೊಳಿಸಲು ಸರಕಾರ ಬದ್ಧ: ಸಚಿವ ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ15 Sept 2021 11:33 PM IST
share
ಕೃಷ್ಣಾ ಮೇಲ್ದಂಡೆ-3 ಪೂರ್ಣಗೊಳಿಸಲು ಸರಕಾರ ಬದ್ಧ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು, ಸೆ.15: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಅನುಕೂಲ ಕಲ್ಪಿಸುವ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ, ಸಾಕಾರಗೊಳಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ಬುಧವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ನಿಯಮ 68ರ ಅಡಿ ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಅನುμÁ್ಠನ ವಿಳಂಬ ಕುರಿತು ಚರ್ಚೆಯಲ್ಲಿ ಅವರು, ಅಂತಾರಾಜ್ಯ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಎಲ್ಲ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದ ಅವರು, 2013 ರಿಂದ 2018ರವರೆಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 7728.80 ಕೋಟಿ ರೂ.ಮಾತ್ರ ವೆಚ್ಚ ಮಾಡಲಾಗಿದೆ. 2018 ರಿಂದ 2019ರ ಜುಲೈವರೆಗಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ 1295.50 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಜುಲೈ 2019ರಿಂದ ಪ್ರಸಕ್ತ ಸರಕಾರದ ಅವಧಿಯಲ್ಲಿ 3326.70 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ ಎಂದು ವಿವರಗಳನ್ನು ನೀಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಒಂದು ಸವಾಲಾಗಿದೆ. ಏಕೆಂದರೆ ಇಲ್ಲಿ ಬಹುದೊಡ್ಡ ಪ್ರಮಾಣದ ಭೂಸ್ವಾಧೀನವಾಗಬೇಕಾಗಿದೆ. 2013ರ ಹೊಸ ಭೂಸ್ವಾಧೀನ ಕಾಯಿದೆಯಿಂದ ಭೂಸ್ವಾಧೀನದ ದರ ಹೆಚ್ಚಾಗಿದೆ. 1,34,000 ಎಕರೆ ಭೂಮಿ ಭೂಸ್ವಾಧೀನವಾಗಬೇಕಾಗಿದೆ. ಇದರಿಂದಾಗಿ ಒಟ್ಟು 78,000 ಕೋಟಿ ರೂಪಾಯಿಗಳ ಒಟ್ಟು ವೆಚ್ಚವಾಗಲಿದೆ ಎಂದು ತಿಳಿಸಿದರು.

ಬ್ರಿಟೀಷರ ಕಾಲದಲ್ಲೇ ಕೃಷ್ಣಾ ಮೇಲ್ದಂಡೆ ಯೋಜನೆಗೆ ಹೋರಾಟ ಆರಂಭವಾಗಿದ್ದು ಅಂದು ನಮ್ಮ ರಾಜ್ಯದಿಂದ ಮುಂಬೈ ಸರಕಾರದಲ್ಲಿ ಶಾಸಕರಾಗಿದ್ದ ಬಾಬು ಹುಜರೆಯವರು ಸಹ ಹೋರಾಟ ಮಾಡಿ ಜೈಲಿಗೆ ಹೋದವರು. ಮುಂಬೈ ಪ್ರಾಂತದ ಅಧಿಕಾರದ ಸಂದರ್ಭದಲ್ಲಿಯೇ ಕೊಯ್ನಾ ಅಣೆಕಟ್ಟು ಕಟ್ಟಿ 37 ಟಿಎಂಸಿಯಷ್ಟು ನೀರನ್ನು ತಾಳಿಕೋಟಿವರೆಗೆ ತರಲು ಯೋಜನೆ ರೂಪಿಸಲಾಗಿತ್ತು.

ಅಷ್ಟರಲ್ಲಿ ರಾಜ್ಯಗಳ ಪುನರ್ ವಿಂಗಡಣೆಯಾಗಿ ಮೈಸೂರು ಮತ್ತು ಮುಂಬೈ ಸರಕಾರಗಳು ರಚನೆಯಾದವು. ಆಗ ಮುಂಬೈ ಪ್ರಾಂತದ ಸರಕಾರ 2 ಕೋಟಿ ರೂಪಾಯಿಗಳನ್ನು ಮೈಸೂರು ಸರಕಾರ ನೀಡಿದರೆ ನೀರಾವರಿ ಯೋಜನೆ ಕಾರ್ಯಗತಗೊಳಿಸುವುದಾಗಿ ತಿಳಿಸಿತ್ತು. ಆದರೆ ಮೈಸೂರು ಸರಕಾರ ಇದಕ್ಕೆ ಒಪ್ಪಲಿಲ್ಲ. ಒಂದು ವೇಳೆ ಒಪ್ಪಿದ್ದರೆ 40 ವರ್ಷಗಳ ಹಿಂದೆಯೇ ಅಖಂಡ ವಿಜಯಪುರ ಜಿಲ್ಲೆಯು ನೀರಾವರಿಯ ಸೌಲಭ್ಯ ಪಡೆಯುತ್ತಿತ್ತು ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ರೂ. ಖರ್ಚು ಮಾಡುವುದಾಗಿ ಅಂದಿನ ನೀರಾವರಿ ಸಚಿವರು ಘೋಷಿಸಿದ್ದರು. ಆದರೆ, ಆ ಅವಧಿಯಲ್ಲಿ ಕೇವಲ 7,728.80 ಕೋಟಿ ರೂಪಾಯಿಗಳನ್ನು ಮಾತ್ರ ವೆಚ್ಚ ಮಾಡಲಾಗಿದೆ ಎಂದು ಸಚಿವರು ಸದನದ ಗಮನಕ್ಕೆ ತಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X