Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ವರ್ಷವನ್ನು 'ಕೋವಿಡ್ ವರ್ಷʼ ಎಂದು...

ಈ ವರ್ಷವನ್ನು 'ಕೋವಿಡ್ ವರ್ಷʼ ಎಂದು ಘೋಷಿಸಿ: ಸದನದಲ್ಲಿ ಎಚ್.ಡಿ ಕುಮಾರಸ್ವಾಮಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ16 Sept 2021 6:03 PM IST
share
ಈ ವರ್ಷವನ್ನು ಕೋವಿಡ್ ವರ್ಷʼ ಎಂದು ಘೋಷಿಸಿ: ಸದನದಲ್ಲಿ ಎಚ್.ಡಿ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ ಎಂದು ಜಿಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ.

ವಿಧಾನಸಭೆಯಲ್ಲಿಂದು ನಿಯಮ-69ರ ಅಡಿಯಲ್ಲಿ ಬೆಲೆ ಏರಿಕೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು; ನೆರೆ, ಕೋವಿಡ್ʼನಿಂದ ಸಾಮಾನ್ಯ ಜನ ತತ್ತರಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರಂತರ ಬೆಲೆ ಏರಿಕೆಯಿಂದ ರೈತರು, ಬಡವರು ಮತ್ತು ಶ್ರಮಿಕರ ಮನೆಗಳಲ್ಲಿ ಬೆಂಕಿ ಬಿದ್ದಿದೆ. ಆ ಬೆಂಕಿ ಬಿದ್ದಿರುವ ಮನೆಗಳಲ್ಲಿ ಎಷ್ಟು ಗಳ ಹಿರಿಯಬಹುದು ಎಂಬ ಉದ್ದೇಶದಿಂದ ಇಷ್ಟು ತೆರಿಗೆ ಹಾಕಿದಂತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. 

ಈ ಬಿಕ್ಕಟ್ಟನ್ನು ಸರಕಾರ ಉಪೇಕ್ಷೆ ಮಾಡಬಾರದು. ಈ ವರ್ಷವನ್ನು ʼಕೋವಿಡ್ ವರ್ಷʼ ಎಂದು ಘೋಷಣೆ ಮಾಡಿ. ಕಷ್ಟದಲ್ಲಿರುವ 55 ಲಕ್ಷ ಬಡ ಕುಟುಂಬಗಳಿಗೆ ನೆರವಾಗಿ. ಕೊನೆಯ ಪಕ್ಷ ಪ್ರತಿ ಕುಟುಂಬಕ್ಕೆ 25,000 ರೂ. ಧನ ಸಹಾಯ ಮಾಡಿ. ಅಗತ್ಯಬಿದ್ದರೆ ಈ ವರ್ಷ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ.

ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಇಂಧನ ಬೆಲೆ ಏರಿಕೆ ಹಾಗೂ ಕೋವಿಡ್ ನಿಂದ ತತ್ತರಿಸಿರುವ ಜನರಿಗೆ ಬದುಕು ಕಟ್ಟಲು ಒಂದು ಬಾರಿಗೆ ಅನ್ವಯವಾಗುವಂತೆ 55 ಲಕ್ಷ ಕುಟುಂಬಗಳಿಗೆ ತಲಾ 25,000 ರೂ. ಪರಿಹಾರ ನೀಡುವಂತೆ ಅವರು ಆಗ್ರಹಪಡಿಸಿದ್ದಾರೆ. 

ಈ ಬೆಲೆ ಏರಿಕೆಯನ್ನೂ ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಇದು ಅತ್ಯಂತ ನಿರ್ದಯವಾದ ಕೆಲಸ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವುದು ಸರಕಾರದ ಕೆಲಸ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಳ್ಳಬೇಕು.

ಸರಕಾರಕ್ಕೆ ಆದಾಯವೂ ಮುಖ್ಯ, ನಿಜ. ಅದೇ ರೀತಿ ಜನರ ಕಲ್ಯಾಣವೂ ಮುಖ್ಯ. ಹಾಗಂತ ಮನಸೋ ಇಚ್ಛೆ ತೆರಿಗೆ ಹಾಕುವುದಲ್ಲ. ಜನರಿಗೆ ಬದುಕೇ ದುಸ್ಥರವಾಗಿದೆ. ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂಥ ತೀವ್ರ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ?

ಅತಿಯಾದ ಭಾರವನ್ನು ಹೊರಲಾಗದ ಎತ್ತಿನ ಗಾಡಿಯ ಅಸಹಾಯಕ ಎತ್ತಿನಂತಿದೆ ಜನ ಸಾಮಾನ್ಯನ ಬದುಕು. ಭಾರದ ಹೊರಲಾಗದಿದ್ದರೆ ಎತ್ತಿಗೆ ಛಡಿಯೇಟು ತಪ್ಪಿಲ್ಲ. ಹಾಗೆಯೇ, ಭಾರದಿಂದ ಗಾಡಿ ಚಕ್ರ ನೆಲದಲ್ಲಿ ಹೂತರೆ ಅದನ್ನು ಎಳೆಯಲಗದಿದ್ದರೆ ಪುನಾ ಆ ಎತ್ತಿಗೇ ಛಡಿಯೇಟು. ಜನ ಸಾಮಾನ್ಯನ ಪರಿಸ್ಥಿತಿಯೂ ಇದೇ ಆಗಿದೆ. ತುತ್ತು ಅನ್ನಕ್ಕಾಗಿ ಪರಿತಪಿಸುತ್ತಿದ್ದಾನೆ ಅವನು. ಇಂಥ ಸಂದರ್ಭದಲ್ಲಿ ಬೆಲೆ ಏರಿಕೆಯನ್ನೇ ರಾಜಕೀಯ ಮಾಡುವ ಬದಲು ಎಲ್ಲರೂ ಪಕ್ಷಾತೀತವಾಗಿ ವರ್ತಿಸಬೇಕು. ಸರಕಾರ ಕೂಡ ಅತ್ಯಂತ ಮಾನವೀಯತೆಯಿಂದ ಜನರ ನೆರವಿಗೆ ಧಾವಿಸಬೇಕಿದೆ.

ಬೆಲೆ ಏರಿಕೆ ಮಾಡುವುದು ಎಂದರೆ ನಿರಂತರವಾಗಿ ಹತೋಟಿ ಇಲ್ಲದೆ ಮಾಡುವುದಲ್ಲ. ಅದಕ್ಕೆ ಒಂದು ವೈಜ್ಞಾನಿಕ ಮಾನದಂಡದ ಜತೆಗೆ ಜನರ ಪರಿಸ್ಥಿತಿಯನ್ನೂ ನೋಡಿ ನಿರ್ಧಾರ ಕೈಗೊಳ್ಳುವ ವಿವೇಚನೆ ಇರಬೇಕು. ಅದು ಬಿಟ್ಟು ಇಷ್ಟಬಂದ ಹಾಗೆ ಬೆಲೆ ಏರಿಕೆ ಮಾಡುತ್ತಾ ಹೋದರೆ ಸಾಮಾನ್ಯ ಜನರ ಪಾಡೇನು? ಎಂದು ಪ್ರಶ್ನಿಸಿದರು. 

ಪತ್ರಿಕೆಯೊಂದು ಸಮೀಕ್ಷೆ ನಡೆಸಿರುವ ಪ್ರಕಾರ ಒಬ್ಬ ಸಾಮಾನ್ಯ ವ್ಯಕ್ತಿ ವರ್ಷಕ್ಕೆ ಸರಾಸರಿ ಒಂದು ಲಕ್ಷ ರೂಪಾಯಿ  ತೆರಿಗೆಯನ್ನು ಸರಕಾರಕ್ಕೆ ಕಟ್ಟುತ್ತಿದ್ದಾನೆ. ಅಷ್ಟು ತೆರಿಗೆ ಕಟ್ಟುವ ಸಾಮಾನ್ಯನ ಬದುಕು ಈಗ ಅಯೋಮಯವಾಗಿದೆ. ಅವನ ಬದುಕನ್ನು ಸರಿ ಮಾಡುವ ಜವಾಬ್ದಾರಿ ಸರಕಾರದ ಮೇಲಿದೆ ಎಂಬ ಸಂಗತಿಯನ್ನು ಸರಕಾರ ಮರೆಯುವಂತಿಲ್ಲ ಎಂದು ಸಲಹೆ ನೀಡಿದರು.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಸರಕಾರ ಕೆಲ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ, ಬೆಲೆ ಏರಿಯಿಂದ ಬಸವಳಿದಿರುವ ಜನರ ನೆರವಿಗೆ ಧಾವಿಸಲು ಆ ಹಣ ಮೀಸಲಿಟ್ಟು ಆ ಎಲ್ಲ ಯೋಜನೆಗಳನ್ನು ಒಂದು ವರ್ಷ ಮುಂದಕ್ಕೆ ಹಾಕಿ. ಈ ವರ್ಷವನ್ನು ʼಕೋವಿಡ್ ವರ್ಷʼವೆಂದು ಘೋಷಣೆ ಮಾಡಲಿ. ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ ಜನರ ನೆರವಿಗೆ ಧಾವಿಸಲಿ ಎಂದು ಒತ್ತಾಯಿಸಿದರು.

ಕಾವೇರಮ್ಮ ಎಂಬ ಬೆಂಗಳೂರು ದಕ್ಷಿಣ ಭಾಗದ ಮಹಿಳೆ ಒಂದು ಪತ್ರಿಕೆಯಲ್ಲಿ ಹೀಗೆ ಹೇಳಿಕೊಂಡಿದ್ದಾಳೆ. “ನನ್ನ ಮನೆಯಲ್ಲಿ ಅಡುಗೆ ಅನಿಲದ ಸ್ಟೌವ್ ಹಚ್ಚಲೂ ಆಗುತ್ತಿಲ್ಲ. ಬದುಕು ನಡೆಸುವುದೇ ದುಸ್ಥರವಾಗಿದೆ” ಎಂದು ಕಣ್ಣೀರು ಹಾಕಿದ್ದಾರೆ. ಆ ಮನೆಯಲ್ಲಿ ಆರು ಜನ ಬದುಕುತ್ತಿದ್ದಾರೆ, ಅವರ ಹಸಿವು ನೀಗಬೇಕು. ಆ ಮಹಿಳೆಯ ಕಷ್ಟ ಯಾವ ರೀತಿಯಲ್ಲಿದೆ? ಆ ತಾಯಿಯ ಸಂಕಟವೇನು? ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಸರಕಾರ ಆಲೋಚನೆ ಮಾಡಬೇಕಿದೆ. ಇಂತಹ ಲಕ್ಷಾಂತರ ಕಾವೇರಮ್ಮನ ಕಥೆಗಳು ನಮ್ಮ ರಾಜ್ಯದಲ್ಲಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾವೆಲ್ಲ ರಾಜಕೀಯವಾಗಿ ಒಬ್ಬರ ಮೇಲೊಬ್ಬರು ಟೀಕೆಟಿಪ್ಪಣಿ ಮಾಡಿಕೊಂಡು ಕೂರುವುದಲ್ಲ. ಎಲ್ಲರೂ ಕಾವೇರಮ್ಮನವರಂಥ ಜನರ ಕಷ್ಟಕ್ಕೆ ಧಾವಿಸಬೇಕು. ಅವರ ಜೀವನ ಸರಿ ಮಾಡಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಈ ಬಗ್ಗೆ ರಾಜಕೀಯ ಸಂಕುಚಿತ ಮನೋಭಾವ ತೋರಿಸುವುದು ಬೇಡ. ರಾಜಕೀಯ ಲಾಭದ ಬಗ್ಗೆ ಲೆಕ್ಕಾಚಾರ ಹಾಕುವುದೂ ಸರಿಯಲ್ಲ.

ಪಕ್ಷ ರಾಜಕಾರಣವನ್ನು ಬದಿಗೊತ್ತಿ ಸಂಕಷ್ಟದಲ್ಲಿರುವ ಜನ ಸಾಮಾನ್ಯನಿಗೆ ಏನು ಮಾಡಬೇಕೋ, ಅದರ ಬಗ್ಗೆ ಈ ವೇದಿಕೆಯಲ್ಲಿ ಯೋಚನೆ ಮಾಡಿ ಪರಿಹಾರ ಹುಡುಕಬೇಕಿದೆ. ಸರಕಾರ ತತ್ಕ್ಷಣವೇ ಅವನ ನೆರವಿಗೆ ಧಾವಿಸಬೇಕು ಎಂಬುದು ನನ್ನ ಒತ್ತಾಯವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X