Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಾರಪಟ್ಟಣದಲ್ಲಿ 10 ಕೋಟಿ...

ಶಿವಾರಪಟ್ಟಣದಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ಶಿಲ್ಪಕಲಾ ಕೇಂದ್ರ: ಸಚಿವ ವಿ.ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Sept 2021 10:54 PM IST
share
ಶಿವಾರಪಟ್ಟಣದಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ಶಿಲ್ಪಕಲಾ ಕೇಂದ್ರ: ಸಚಿವ ವಿ.ಸುನೀಲ್ ಕುಮಾರ್

ಬೆಂಗಳೂರು, ಸೆ.17: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರಪಟ್ಟಣ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರವನ್ನು ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಉದ್ದೇಶಕ್ಕಾಗಿ ನಾಲ್ಕು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ ನಗರದ ಜೆ.ಸಿ.ರಸ್ತೆಯಲ್ಲಿರುವ ನಯನ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಮಾಲೂರಿನ ಶಿವಾರಪಟ್ಟಣದಲ್ಲಿ ನಾಲ್ಕು ಎಕರೆ ಜಾಗದಲ್ಲಿ ಶಿಲ್ಪಕಲಾ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತಿದೆ, ಇದು ಕುಶಲಕರ್ಮಿಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.

ಭಗವಾನ್ ವಿಶ್ವಕರ್ಮ ಈ ಜಗತ್ತಿನ ಮೊಟ್ಟಮೊದಲ ಇಂಜಿನಿಯರ್ ಎಂದು ಬಣ್ಣಿಸಿದ ಸುನೀಲ್ ಕುಮಾರ್, ರಾಮಾಯಣ ಮತ್ತು ಮಹಾಭಾರತದಲ್ಲೂ ವಿಶ್ವಕರ್ಮರ ಉಲ್ಲೇಖವಿದೆ. ಪಾಂಡವರಿಗಾಗಿ ಇಂದ್ರಪ್ರಸ್ಥವನ್ನು ನಿರ್ಮಾಣ ಮಾಡಿದ್ದು, ದ್ವಾರಕೆ ನಗರ ನಿರ್ಮಾಣ ಮಾಡಿದ್ದು ಹಾಗೂ ಸ್ವರ್ಣವಲ್ಲಿ ಲಂಕೆಯ ನಿರ್ಮಾತೃ ಕೂಡ ವಿಶ್ವಕರ್ಮ ಎಂದು ನಮ್ಮ ಪೌರಾಣಿಕ ಐತಿಹ್ಯ ತಿಳಿಸುತ್ತದೆ ಎಂದರು.

ಹಿಂದುಳಿದ ಅನೇಕ ಸಣ್ಣ, ಸಣ್ಣ ಸಮುದಾಯಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬೆಳೆಯಬೇಕು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಸಶಕ್ತವಾಗಬೇಕಾದರೆ ಎಲ್ಲ ಹಿಂದುಳಿದ ಸಣ್ಣ ಸಮುದಾಯಗಳು ಒಗ್ಗೂಡಿ ಕೆಲಸ ಮಾಡಬೇಕು. ಅದರಲ್ಲಿಯೂ ವಿಶೇಷವಾಗಿ ವಿಶ್ವಕರ್ಮ ಸಮುದಾಯ ತನ್ನ ವೃತ್ತಿಪರತೆ, ಸರಳತೆ ಮತ್ತು ಕರ್ತವ್ಯ ನಿಷ್ಠೆಗೆ ಹೆಸರಾಗಿದೆ. ಈ ಸಮುದಾಯ ತನ್ನ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಸಾಗಿಸಬೇಕಾದ ಅವಶ್ಯಕತೆ ಇದೆ ಎಂದರು.

ಎಲ್ಲ ಮಹನೀಯರ ಜಯಂತಿಗಳ ಉದ್ದೇಶ ಆಯಾ ಮಹಾಪುರುಷರು ಪಾಲಿಸಿದ ಜೀವನಾದರ್ಶಗಳ ಜೀವನ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕು ಮತ್ತು ಅದನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂಬುದೇ ಆಗಿದೆ. ಹಾಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಜಯಂತಿಗಳನ್ನು ವಿಶೇಷ ಮುತುವರ್ಜಿಯಿಂದ ಮಾಡುತ್ತಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.

ಸಮಾರಂಭದಲ್ಲಿ ವಿವಿಧ ಮಠಾಧೀಶರು, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್, ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಅರ್ಕಸಾಲಿ, ವಿಶ್ವಕರ್ಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸುಮಿತ್ರ್ರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X