Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಒಂದೇ ದಿನ 29 ಲಕ್ಷ ಕೋವಿಡ್...

ರಾಜ್ಯದಲ್ಲಿ ಒಂದೇ ದಿನ 29 ಲಕ್ಷ ಕೋವಿಡ್ ಲಸಿಕೆ ನೀಡಿಕೆ: ಸಚಿವ ಡಾ. ಸುಧಾಕರ್

"ಲಸಿಕೆ ನೀಡುವುದರಲ್ಲಿ ಕರ್ನಾಟಕ ನಂ.1"

ವಾರ್ತಾಭಾರತಿವಾರ್ತಾಭಾರತಿ18 Sept 2021 7:10 PM IST
share
ರಾಜ್ಯದಲ್ಲಿ ಒಂದೇ ದಿನ 29 ಲಕ್ಷ ಕೋವಿಡ್ ಲಸಿಕೆ ನೀಡಿಕೆ: ಸಚಿವ ಡಾ. ಸುಧಾಕರ್

ಬೆಂಗಳೂರು: ‘ರಾಜ್ಯದಲ್ಲಿ ಶುಕ್ರವಾರ(ಸೆ.17) ಒಂದೇ ದಿನ ಒಟ್ಟು 29 ಲಕ್ಷ ಕೋವಿಡ್ ಲಸಿಕೆ ನೀಡಿದ್ದು, ಇನ್ನೂ 1.68 ಲಕ್ಷ ದಾಖಲು ಮಾಡಬೇಕಿದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11ರಷ್ಟು ರಾಜ್ಯದಲ್ಲಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಹೊಸ ಸಾಧನೆ ಮಾಡಿದೆ' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರಧಾನಿ ಮೋದಿಯವರ ಜನ್ಮದಿನವನ್ನು ಲಸಿಕೆ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರೋತ್ಸಾಹ ನೀಡಿದರು ಎಂದು ಹೇಳಿದರು.

‘ಒಂದು ದಿನದಲ್ಲಿ 30 ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಂಡಿದ್ದು, ಶನಿವಾರ ಬೆಳಗ್ಗೆ 8.30 ವೇಳೆಗೆ 29,50,093 ಲಸಿಕೆ ನೀಡಿರುವುದು ದಾಖಲಾಗಿದೆ. ಇನ್ನೂ 1.68 ಲಕ್ಷ ಡೋಸ್ ಲಸಿಕೆ ನೀಡಿರುವುದನ್ನು ದಾಖಲು ಮಾಡಬೇಕಿದೆ. ಇದರಿಂದಾಗಿ 31 ಲಕ್ಷ ಲಸಿಕೆ ನೀಡಿದಂತಾಗುತ್ತದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ ಎಂದು ಅವರು ವಿವರಿಸಿದರು.

ಪ್ರತಿ ಅರ್ಹ ಹತ್ತು ಲಕ್ಷ ಜನಸಂಖ್ಯೆಗೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕವು 62,003 ಲಸಿಕೆ ನೀಡುವ ಮೂಲಕ ಮೊದಲ ಸ್ಥಾನದಲ್ಲಿದೆ. 14,401 ಲಸಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದ್ದು, ಒಂದು ಕಡೆ ಸರಾಸರಿ 205 ಲಸಿಕೆ ನೀಡಲಾಗಿದೆ. 14 ಜಿಲ್ಲೆಗಳು ಗುರಿಗಿಂತ ಅಧಿಕ ಸಾಧನೆ ಮಾಡಿವೆ. 4 ಜಿಲ್ಲೆಗಳು ಮಾತ್ರ ಗುರಿಗಿಂತ 75ರಷ್ಟು ಸಾಧನೆ ಮಾಡಿವೆ ಎಂದು ಸುಧಾಕರ್ ತಿಳಿಸಿದರು.

ಇಡೀ ದೇಶದಲ್ಲಿ ಅತಿಹೆಚ್ಚು ಲಸಿಕೆಯನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ (4.09 ಲಕ್ಷ) ನೀಡಲಾಗಿದೆ. ಬೆಳಗಾವಿಯಲ್ಲಿ 2.57ಲಕ್ಷ ಲಸಿಕೆ ನೀಡಲಾಗಿದೆ. ಜಿಲ್ಲಾಮಟ್ಟದ ಸಾಧನೆಯಲ್ಲಿ ಎರಡು ಸ್ಥಾನಗಳು ರಾಜ್ಯಕ್ಕೆ ಬಂದಿವೆ. ರಾಜ್ಯದಲ್ಲಿ ಒಟ್ಟು 14.96 ಲಕ್ಷ ಲಸಿಕೆಗಳನ್ನು ಮಹಿಳೆಯರು ಪಡೆದಿದ್ದು, ಪುರುಷರಿಗಿಂತ(14.53 ಲಕ್ಷ) ಮುಂದೆ ಇದ್ದಾರೆ. ಇವೆಲ್ಲ ಸೇರಿ ಈವರೆಗೆ ಒಟ್ಟು 5 ಕೋಟಿ ಲಸಿಕೆ ನೀಡಿದ್ದು, 20 ದಿನಗಳಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. 1 ಕೋಟಿ ಜನರಿಗೆ ಎರಡೂ ಡೋಸ್ ನೀಡಲಾಗಿದೆ ಎಂಬ ಹೆಗ್ಗಳಿಕೆ ಬಂದಿದೆ.

ಕಲಬುರ್ಗಿಯಲ್ಲಿ ಗುರಿಗಿಂತ ಕೇವಲ ಶೇ.41, ಕೊಪ್ಪಳದಲ್ಲಿ ಶೇ.62, ಉಡುಪಿಯಲ್ಲಿ ಶೇ.63 ಆಗಿದೆ. ಬೆಂಗಳೂರು ನಗರದಲ್ಲಿ ಶೇ.143, ಶಿವಮೊಗ್ಗದಲ್ಲಿ ಶೇ.134, ಧಾರವಾಡ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಶೇ.120ರಷ್ಟು ಸಾಧನೆ ಮಾಡಿವೆ ಎಂದು ಅವರು ಮಾಹಿತಿ ನೀಡಿದರು.

ರಕ್ತ ಸಂಗ್ರಹ, ಅಂಗಾಂಗ ದಾನ: ಇದೇ ದಿನ ರಾಜ್ಯದಲ್ಲಿ ರಕ್ತದಾನ ಶಿಬಿರ ನಡೆದಿದ್ದು, ಒಟ್ಟು 5,201 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಬಿಎಂಪಿಯಲ್ಲಿ 1,240 ಯುನಿಟ್, ಬಳ್ಳಾರಿಯಲ್ಲಿ 298, ದಕ್ಷಿಣ ಕನ್ನಡದಲ್ಲಿ 295 ಯುನಿಟ್ ಸಂಗ್ರಹವಾಗಿದೆ. ಎರಡು ವಾರಗಳಲ್ಲಿ ಒಂದು ಲಕ್ಷ ಯುನಿಟ್ ರಕ್ತ ಸಂಗ್ರಹಿಸಬೇಕೆಂಬ ಗುರಿ ಇದ್ದು, ಇದಕ್ಕಾಗಿ ಸೂಚನೆ ನೀಡಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.1 ಜನರಿಗೆ ರಕ್ತ ಬೇಕಿದೆ ಎಂದು ಸುಧಾಕರ್ ತಿಳಿಸಿದರು.

ಅಂಗಾಂಗ ಕಸಿಗೂ ದಾನ ಹೆಚ್ಚಬೇಕಿದೆ. ಇದಕ್ಕಾಗಿ ಮೆಡಿಕಲ್ ಕಾಲೇಜು, ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ದಾನ ವಿಭಾಗ ಆರಂಭಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಸಿಎಂ ದೊಡ್ಡ ಅಭಿಯಾನಕ್ಕೆ ಚಾಲನೆ ನೀಡಿ ಜಾಗೃತಿ ಮೂಡಿಸಿ ಇಡೀ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಜೊತೆಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಪ್ರತಿ ಕುಟುಂಬಕ್ಕೆ ನೀಡಲು 3 ತಿಂಗಳ ಗುರಿ ನೀಡಲಾಗುವುದು. ಎರಡೂವರೆ ಕೋಟಿ ಕುಟುಂಬಕ್ಕೆ ನೀಡುವ ಗುರಿ ಇದೆ ಎಂದರು.

ವಿಷನ್ ವರದಿ: 250 ತಜ್ಞರು ಸೇರಿ ರೂಪಿಸಿದ ಆರೋಗ್ಯ ವಲಯದ ವಿಷನ್ ವರದಿಯನ್ನು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಗಳಿಗೆ ನೀಡಿ ಅವರಿಂದ ಚಾಲನೆ ನೀಡಲಾಗುವುದು. ಓರ್ವ ವ್ಯಕ್ತಿ ನಿಫಾ ಪರೀಕ್ಷೆ ಮಾಡಿಸಿಕೊಂಡಿದ್ದು, ಅವರನ್ನು ಐಸೋಲೇಷನ್‍ನಲ್ಲಿ ಇರಿಸಿದ್ದು, ಇನ್ನೂ ವರದಿ ಬಂದಿಲ್ಲ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X