Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ನಿಗೆ ಹಲ್ಲೆಗೈದ ಪ್ರಕರಣ : ಪತಿಗೆ...

ಪತ್ನಿಗೆ ಹಲ್ಲೆಗೈದ ಪ್ರಕರಣ : ಪತಿಗೆ ಕಠಿಣ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ18 Sept 2021 9:04 PM IST
share

ಮಂಗಳೂರು, ಸೆ.18: ಪತ್ನಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ಪತಿಗೆ ಮೂರು ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು 19,500 ರೂ. ದಂಡ ವಿಧಿಸಿ ಮಂಗಳೂರಿನ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎಫ್ ಸಿ ನ್ಯಾಯಾಲಯ ತೀರ್ಪು ನೀಡಿದೆ.

ಮಂಗಳೂರಿನ ಶಕ್ತಿನಗರದ ರಿಕ್ಷಾ ಚಾಲಕ ಶಿವಕುಮಾರ್ (45) ಶಿಕ್ಷೆಗೊಳಗಾದ ಆರೋಪಿ.

ಪ್ರಕರಣ ವಿವರ: 2019ರ ಫೆ. 20ರಂದು ರಾತ್ರಿ ಆರೋಪಿ ಶಿವಕುಮಾರ್ ಮನೆಗೆ ತೆರಳಿ ಪತ್ನಿ ಸಾಕಮ್ಮ (39) ಮತ್ತು ಪುತ್ರಿಗೆ ಹೀನಾಯವಾಗಿ ನಿಂದಿಸಿದ್ದ. ಈ ಸಂದರ್ಭದಲ್ಲಿ ಪತ್ನಿ ಸಾಕಮ್ಮ ಮನೆಯಿಂದ ಹೊರಗೆ ಬಂದಾಗ ಶಿವಕುಮಾರ್ ಆಕೆಯ ಎರಡೂ ಕೈಗಳಿಗೆ ಮತ್ತು ಕಾಲುಗಳಿಗೆ ಕಬ್ಬಿಣದ ಸರಳಿನಿಂದ ತೀವ್ರವಾಗಿ ಹೊಡೆದಿದ್ದನು ಎಂದು ಆರೋಪಿಸಲಾಗಿತ್ತು. ಈ ಹಲ್ಲೆಯಿಂದ ಸಾಕಮ್ಮ ಅವರ ಎರಡೂ ಮೊಣಕೈ ಮತ್ತು ಎರಡೂ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಐಪಿಸಿ ಸೆಕ್ಷನ್ 341, 324, 326, 407, 506 ಅನ್ವಯ ಪ್ರಕರಣ ದಾಖಲಾಗಿತ್ತು.

ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರದೀಪ್ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಧುಕರ ಭಾಗವತ್ ಅವರು ಶನಿವಾರ ಆರೋಪಿಗೆ ಐಪಿಸಿ 341 ಅನ್ವಯ 500 ರೂ. ದಂಡ, ಐಪಿಸಿ 324 ಅನ್ವಯ ಎರಡು ವರ್ಷ ಕಠಿಣ ಶಿಕ್ಷೆ ಮತ್ತು 9000 ರೂ. ದಂಡ ಹಾಗೂ ಐಪಿಸಿ 326 ಅನ್ವಯ 3 ವರ್ಷ ಕಠಿಣ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿ ಎರಡೂ ಸೆಕ್ಷನ್‌ಗಳಡಿ ವಿಧಿಸಲಾಗಿರುವ ಶಿಕ್ಷೆಯನ್ನು ಏಕ ಕಾಲದಲ್ಲಿ ಅನುಭವಿಸುವಂತೆ ಆದೇಶಿಸಿದ್ದಾರೆ.

ದಂಡ ಮೊತ್ತದಲ್ಲಿ 19,000 ರೂ.ನ್ನು ಸಂತ್ರಸ್ತೆ ಸಾಕಮ್ಮ ಅವರಿಗೆ ಹಾಗೂ 500 ರೂ.ಗಳನ್ನು ಸರಕಾರಕ್ಕೆ ಪಾವತಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.ಈ ಪ್ರಕರಣದಲ್ಲಿ 7 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದು 6 ದಾಖಲೆಗಳನ್ನು ನ್ಯಾಯಾಲಯ ಪರಿಗಣಿಸಿತ್ತು.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ನೇತ್ರಾವತಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X