Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆ.27ರ ಭಾರತ ಬಂದ್ ಶಾಂತಿಯುತವಾಗಿರಲಿದೆ:...

ಸೆ.27ರ ಭಾರತ ಬಂದ್ ಶಾಂತಿಯುತವಾಗಿರಲಿದೆ: ಎಸ್ ಕೆ ಎಂ

ಮಾರ್ಗಸೂಚಿಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ18 Sept 2021 9:44 PM IST
share
ಸೆ.27ರ ಭಾರತ ಬಂದ್ ಶಾಂತಿಯುತವಾಗಿರಲಿದೆ: ಎಸ್ ಕೆ ಎಂ

‌ಹೊಸದಿಲ್ಲಿ,ಸೆ.18: ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಸೆ.27ರಂದು ಕರೆ ನೀಡಲಾಗಿರುವ ಭಾರತ ಬಂದ್ಗಾಗಿ ಶನಿವಾರ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಸಂಯುಕ್ತ ಕಿಸಾನ ಮೋರ್ಚಾ (ಎಸ್ ಕೆ ಎಂ),ಪ್ರತಿಭಟನೆಯು ಶಾಂತಿಯುತವಾಗಿರುತ್ತದೆ ಮತ್ತು ಜನರಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದೆ.

 ‌
ರೈತರೊಂದಿಗೆ ಕೈ ಜೋಡಿಸುವಂತೆ ಸಮಾಜದ ಎಲ್ಲ ವರ್ಗಗಳನ್ನು ಕೋರಿಕೊಳ್ಳುವಂತೆ ಮತ್ತು ಸಾರ್ವಜನಿಕರಿಗೆ ಅನಾನುಕೂಲಗಳನ್ನು ಕಡಿಮೆಗೊಳಿಸಲು ಬಂದ್ ಬಗ್ಗೆ ಸಾಕಷ್ಟು ಪ್ರಚಾರ ನೀಡುವಂತೆ ಸದಸ್ಯ ಸಂಘಟನೆಗಳಿಗೆ ಸೂಚಿಸಲಾಗಿದೆ. ಬಂದ್ ಶಾಂತಿಯುತ ಹಾಗೂ ಸ್ವಯಂಪ್ರೇರಿತವಾಗಿರುತ್ತದೆ ಮತ್ತು ತುರ್ತು ಸೇವೆಗಳಿಗೆ ಬಂದ್ನಿಂದ ವಿನಾಯಿತಿ ನೀಡಲಾಗುವುದು ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ರೈತರಿಂದ ಭಾರತ ಬಂದ್ ಬೆಳಿಗ್ಗೆ ಆರು ಗಂಟೆಗೆ ಆರಂಭಗೊಂಡು ಸಂಜೆ ನಾಲ್ಕು ಗಂಟೆಯವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿ-ಮುಂಗಟ್ಟುಗಳು,ಫ್ಯಾಕ್ಟರಿಗಳು,ಶಾಲಾ-ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುವುದಿಲ್ಲ. ಸಾರ್ವಜನಿಕ ಮತ್ತು ಖಾಸಗಿ ವಾಹನಗಳ ಸಂಚಾರಕ್ಕೂ ಅವಕಾಶವಿರುವುದಿಲ್ಲ ಎಂದು 40ಕ್ಕೂ ಅಧಿಕ ರೈತ ಸಂಘಟನೆಗಳ ಒಕ್ಕೂಟವಾಗಿರುವ ಎಸ್ಕೆಎಂ ಹೇಳಿದೆ.

ಯಾವುದೇ ಸಾರ್ವಜನಿಕ ಸಮಾರಂಭಗಳಿಗೆ ಅವಕಾಶವಿರುವುದಿಲ್ಲ, ಆ್ಯಂಬುಲೆನ್ಸ್ ಮತ್ತು ಅಗ್ನಿಶಾಮಕ ಸೇವೆ ಸೇರಿದಂತೆ ತುರ್ತು ಸೇವೆಗಳಿಗೆ ಮಾತ್ರ ಬಂದ್ ನಿಂದ ವಿನಾಯಿತಿ ನೀಡಲಾಗುವುದು ಎಂದು ಅದು ತಿಳಿಸಿದೆ.

ಬಂದ್ ಗೆ ಸಂಬಂಧಿಸಿದಂತೆ ಮುಂದಿನ ಯೋಜನೆಗಳನ್ನು ರೂಪಿಸಲು ಸೆ.20ರಂದು ಮುಂಬೈಯಲ್ಲಿ ರಾಜ್ಯಮಟ್ಟದ ಸಿದ್ಧತಾ ಸಭೆ ನಡೆಯಲಿದೆ. ಅದೇ ದಿನ ಉತ್ತರ ಪ್ರದೇಶದ ಸೀತಾಪುರದಲ್ಲಿ ಮತ್ತು ಸೆ.22ರಂದು ಉತ್ತರಾಖಂಡದ ರೂರ್ಕಿಯಲ್ಲಿ ಕಿಸಾನ್ ಮಹಾಪಂಚಾಯತ್ ಗಳು ನಡೆಯಲಿವೆ. ಪ್ರತಿಭಟನಾನಿರತ ರೈತರು ಸೆ.22ರಿಂದ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿಯ ಪ್ರತಿಭಟನಾ ತಾಣಗಳಲ್ಲಿ ಐದು ದಿನಗಳ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿದ್ದು, ವಿವಿಧ ರಾಜ್ಯಗಳ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ವಿಜೇತ ತಂಡಗಳಿಗೆ ನಗದು ಬಹುಮಾನಗಳನ್ನು ನೀಡಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
 
ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದಿರಲು ಸರಕಾರದ ಮೊಂಡುತನದಿಂದಾಗಿ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ದಿಲ್ಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ತಮ್ಮ ಸ್ವಂತ ಇಚ್ಛೆಯಿಂದ ಪ್ರತಿಭಟನೆ ನಡೆಸುತ್ತಿಲ್ಲ. ವಿವಿಧ ರಾಜ್ಯಗಳ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವಾಲಯ ರೈತರು ಪ್ರತಿಭಟನಾ ಸ್ಥಳದಲ್ಲಿ ಇರುವುದನ್ನು ಅನಿವಾರ್ಯಗೊಳಿಸಿದ್ದಾರೆ ಎಂದು ಎಸ್ ಕೆ ಎಂ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X