Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ: ಟೆಲಿಗ್ರಾಂ ವೇದಿಕೆಯಿಂದಲೂ...

ರಶ್ಯ: ಟೆಲಿಗ್ರಾಂ ವೇದಿಕೆಯಿಂದಲೂ ನವಾಲ್ನಿ ಆ್ಯಪ್ ಗೆ ತಡೆ

ವಾರ್ತಾಭಾರತಿವಾರ್ತಾಭಾರತಿ18 Sept 2021 10:22 PM IST
share

ಮಾಸ್ಕೋ, ಸೆ.18: ರಶ್ಯಾದ ವಿಪಕ್ಷ ಮುಖಂಡ ಅಲೆಕ್ಸಿ ನವಾಲ್ನಿ ರೂಪಿಸಿದ ‘ಸ್ಮಾರ್ಟ್ ವೋಟಿಂಗ್’ ಸ್ವಯಂಚಾಲಿತ ಸಂದೇಶ ವ್ಯವಸ್ಥೆಯನ್ನು ತಡೆಹಿಡಿದಿರುವಾಗಿ ಟೆಲಿಗ್ರಾಂ ಸಾಮಾಜಿಕ ಮಾಧ್ಯಮ ವೇದಿಕೆ ಶನಿವಾರ ಹೇಳಿದೆ. ಈ ಮೂಲಕ ಆ್ಯಪಲ್ ಮತ್ತು ಗೂಗಲ್ ಸ್ಟೋರ್ಸ್ ವೇದಿಕೆಯ ನಿಷೇಧದ ಬಳಿಕ ಟೆಲಿಗ್ರಾಂ ಕೂಡಾ ಸ್ಮಾರ್ಟ್ ವೋಟಿಂಗ್ಗೆ ತಡೆನೀಡಿದಂತಾಗಿದೆ.

 ಚುನಾವಣಾ ಪ್ರಚಾರ ಅಭಿಯಾನಕ್ಕೆ ಸಂಬಂಧಿಸಿದ ಸ್ವಯಂಚಾಲಿತ ಸಂದೇಶ ವ್ಯವಸ್ಥೆಗಳ ಕಾರ್ಯನಿರ್ವಹಣೆಯನ್ನು ಸೀಮಿತಗೊಳಿಸುವ ತನ್ನ ನಿಯಮದ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಆ್ಯಪಲ್ ಮತ್ತು ಗೂಗಲ್ ಸ್ಟೋರ್ಸ್ ನ ಉಪಕ್ರಮವನ್ನು ತಾವು ಅನುಸರಿಸಿದ್ದೇವೆ . ಇದೊಂದು ನ್ಯಾಯಬದ್ಧ ಪ್ರಕ್ರಿಯೆಯಾಗಿದ್ದು ಟೆಲಿಗ್ರಾಂ ಬಳಕೆದಾರರು ಇದನ್ನು ಗೌರವಿಸಬೇಕೆಂದು ಆಗ್ರಹಿಸುವುದಾಗಿ ಟೆಲಿಗ್ರಾಂ ವೇದಿಕೆಯ ರಶ್ಯ ಮೂಲದ ಸಂಸ್ಥಾಪಕ ಪಾವೆಲ್ ಡ್ಯುರೋವ್ ಹೇಳಿದ್ದಾರೆ.

ಆದರೆ ಆ್ಯಪಲ್ ಮತ್ತು ಗೂಗಲ್‌ನ ಆ್ಯಪ್ ಗಳನ್ನು ತಡೆಹಿಡಿಯುವ ಮೂಲಕ , ರಶ್ಯ ಹಾಗೂ ವಿಶ್ವದಾದ್ಯಂತ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರಬಲ್ಲ ಅಪಾಯಕಾರಿ ಪೂರ್ವನಿರ್ದೇಶನ ಹಾಕಿಕೊಟ್ಟಂತಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ರಶ್ಯದಲ್ಲಿ ಸಂಸದೀಯ ಚುನಾವಣೆಗಾಗಿ 3 ದಿನಗಳ ಮತದಾನ ಶುಕ್ರವಾರ ಆರಂಭವಾಗುತ್ತಿದ್ದಂತೆಯೇ, ಬಂಧನದಲ್ಲಿರುವ ವಿಪಕ್ಷ ಮುಖಂಡ ಅಲೆಕ್ಸಿ ನವಾಲ್ನಿಯ ಮಿತ್ರರು ಚುನಾವಣೆ ಪ್ರಕ್ರಿಯೆ ಸಂಬಂಧ ರೂಪಿಸಿದ್ದ ಆ್ಯಪ್ ಅನ್ನು ಆ್ಯಪಲ್ ಮತ್ತು ಗೂಗಲ್ ಸ್ಟೋರ್ಸ್      ನಿಂದ ತೆಗೆದು ಹಾಕಲಾಗಿತ್ತು.

 ಪುಟಿನ್ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸುವ ಉದ್ದೇಶದಿಂದ ಎದುರಾಳಿ ಅಭ್ಯರ್ಥಿಗಳ ಬಗ್ಗೆ ಪ್ರಚಾರ ಮಾಡುವ ‘ಸ್ಮಾರ್ಟ್ ವೋಟಿಂಗ್’ ಆ್ಯಪ್ ಅನ್ನು ತೆಗೆದುಹಾಕುವಂತೆ ಕಳೆದ ವಾರ ಸೂಚಿಸಿದ್ದ ರಶ್ಯ ಅಧಿಕಾರಿಗಳು, ಇದಕ್ಕೆ ತಪ್ಪಿದರೆ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಿದ ಆರೋಪ ದಾಖಲಿಸುವ ಜತೆಗೆ ಭಾರೀ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದರು.

ಕಟ್ಟಕಡೆಯ ಸಾಧನ ಉಳಿದಿದೆ: ನವಾಲ್ನಿ

ಟೆಲಿಗ್ರಾಂನಿಂದ ‘ಸ್ಮಾರ್ಟ್ ವೋಟಿಂಗ್’ ಆ್ಯಪ್ ಮಾಯವಾಗುತ್ತಿದ್ದಂತೆಯೇ, ನವಾಲ್ನಿಗೆ ಸಂಬಂಧಿಸಿದ ಟ್ವಿಟರ್ ಖಾತೆಯಲ್ಲಿ ಬೆಂಬಲಿತ ಅಭ್ಯರ್ಥಿಗಳ ವಿವರವನ್ನು ಪ್ರಕಟಿಸಲಾಗಿದ್ದು ‘ಇದು ತಮ್ಮ ಬಳಿ ಉಳಿದಿರುವ ಕಟ್ಟಕಡೆಯ ಸಾಧನವಾಗಿದೆ’ ಎಂದು ಅಡಿಬರಹ ನೀಡಲಾಗಿದೆ. ಅಧ್ಯಕ್ಷ ವ್ಲಾದಿಮಿರ್ ಪುಟಿನ್ರ ರಾಜಕೀಯ ಎದುರಾಳಿಗಳ ವಿರುದ್ಧ ವ್ಯಾಪಕ ದಮನ ಕಾರ್ಯಾಚರಣೆಯ ಬಳಿಕ ಸಂಸತ್ತಿನ ಕೆಳಮನೆಗೆ ನಡೆಯುತ್ತಿರುವ ಚುನಾವಣೆ ಇದಾಗಿದೆ. ವಿಪಕ್ಷ ಮುಖಂಡ ನವಾಲ್ನಿ ಜನವರಿಯಿಂದ ಜೈಲಿನಲ್ಲಿದ್ದು ಕಂಬಿಗಳ ಹಿಂದಿನಿಂದಲೇ ಚುನಾವಣೆಯ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಆದರೆ ಅವರ ನೇತೃತ್ವದ ಮೈತ್ರಿಕೂಟದ ಬಹುತೇಕ ಮುಖಂಡರು ಜೈಲಿನಲ್ಲಿದ್ದಾರೆ ಅಥವಾ ದೇಶ ಬಿಟ್ಟು ಪರಾರಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X