Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅತ್ಯಂತ ಸರಳ ಸಜ್ಜನಿಕೆಯ ನ್ಯಾಯಾಧೀಶ...

ಅತ್ಯಂತ ಸರಳ ಸಜ್ಜನಿಕೆಯ ನ್ಯಾಯಾಧೀಶ ಮೋಹನ್ ಶಾಂತನಗೌಡರ್: ಸಿಜೆಐ ರಮಣ

ವಾರ್ತಾಭಾರತಿವಾರ್ತಾಭಾರತಿ18 Sept 2021 11:18 PM IST
share
ಅತ್ಯಂತ ಸರಳ ಸಜ್ಜನಿಕೆಯ ನ್ಯಾಯಾಧೀಶ ಮೋಹನ್ ಶಾಂತನಗೌಡರ್: ಸಿಜೆಐ ರಮಣ

ಬೆಂಗಳೂರು, ಸೆ. 18: ‘ಸುಪ್ರೀಂ ಕೋರ್ಟ್‍ನ ತೀರ್ಪುಗಳನ್ನು ಧಾವೆ ಹೂಡಿದವರ ಮಾತೃಭಾಷೆಯಲ್ಲಿ ಹಾಗೂ ಸ್ಥಳೀಯ ಭಾಷೆಗಳಲ್ಲಿ ನೀಡುವುದು ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಾಗಿದ್ದ ಮೋಹನ್ ಎಂ.ಶಾಂತನಗೌಡರ್ ಅವರ ಅಭಿಲಾಷೆಯಾಗಿತ್ತು' ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ ಅವರು ತಿಳಿಸಿದ್ದಾರೆ.

ಶನಿವಾರ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ನ್ಯಾಯಮೂರ್ತಿ ದಿ.ಮೋಹನ್ ಎಂ. ಶಾಂತನಗೌಡರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ‘ಮೋಹನ್ ಶಾಂತನಗೌಡರ್ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಯಾವಾಗಲೂ ಸಾಮಾನ್ಯ ವ್ಯಕ್ತಿಗಳ ಪರ ಚಿಂತನೆಯುಳ್ಳ ಅತ್ಯುತ್ತಮ ನ್ಯಾಯಾಧೀಶರಾಗಿದ್ದರು' ಎಂದು ಸ್ಮರಿಸಿದರು.

‘ಉತ್ತರ ಕರ್ನಾಟಕದ ಹಳ್ಳಿಯೊಂದರಿಂದ ಬೆಳೆದು ಬಂದ ಗೌಡರು ಸ್ಥಳೀಯ ನ್ಯಾಯಾಲಯಗಳಿಂದ ಹಿಡಿದು ದೇಶದ ಅತ್ಯುನ್ನತ ನ್ಯಾಯಾಲಯದವರೆಗೂ ಮಾನವ ಸಂಬಂಧಗಳನ್ನು ಉಳಿಸಿಕೊಂಡಿದ್ದರು ಹಾಗೂ ಪ್ರತಿಕ್ಷಣವೂ ನ್ಯಾಯಾಲಯದ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸುವ ಮತ್ತು ಜನಸಾಮಾನ್ಯರ ಸ್ನೇಹಮಯಿ ನ್ಯಾಯಾಲಯಗಳನ್ನು ರೂಪಿಸುವ ಚಿಂತನೆಯಲ್ಲಿ ತೊಡಗಿದ್ದವರು' ಎಂದು ಅವರು ತಿಳಿಸಿದರು.

‘ಮೋಹನ್ ಶಾಂತನಗೌಡರ್ ಅವರು ಸರಳ ವ್ಯಕ್ತಿತ್ವವನ್ನು ಖ್ಯಾತ ಕವಿ ಡಿ.ವಿ.ಗುಂಡಪ್ಪನವರ ‘ಹುಲ್ಲಾಗು ಬೆಟ್ಟದಡಿ’ ಕಗ್ಗವನ್ನು ಹೇಳಿದ ಅವರು, ಒಂದೂವರೆ ವರ್ಷಗಳ ಕಾಲ ಸುಪ್ರೀಂಕೋರ್ಟ್‍ನಲ್ಲಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡ ಅವರು ಕ್ಷಣಕಾಲ ಭಾವುಕರಾದರು.

ಅವರ ಮತ್ತು ತಮ್ಮ ನಡುವಿನ ಆಧ್ಯಾತ್ಮಿಕ ಅನುಭವಗಳನ್ನು ಹಂಚಿಕೊಂಡ ಅವರು, ಗೌಡರ ನೆನಪಿನಾರ್ಥವಾಗಿ ಕರ್ನಾಟಕದ ನ್ಯಾಯಾಂಗ ವ್ಯವಸ್ಥೆಯಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತಹ ಯೋಜನೆಯನ್ನು ರೂಪಿಸುವಂತೆ ಸಿಎಂಗೆ ಇದೇ ವೇಳೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ ಅತ್ಯುತ್ತಮ ನ್ಯಾಯಾಧೀಶರನ್ನು ಕೊಡುಗೆ ನೀಡಿದ ಶ್ರೇಯಸ್ಸು ಕರ್ನಾಟಕ ನ್ಯಾಯಾಂಗ ವ್ಯವಸ್ಥೆಗೆ ಸಲ್ಲುತ್ತದೆ. ಮೋಹನ್ ಎಂ.ಶಾಂತನಗೌಡರ್ ಅವರ ಜೊತೆ ಬಾಲ್ಯದಿಂದಲೂ ಒಡನಾಟವಿದ್ದು, ನಮ್ಮ ತಂದೆ ಹಾಗೂ ಅವರ ತಂದೆ ಸ್ನೇಹಿತರಾಗಿದ್ದವರು. ಅತ್ಯಂತ ಸರಳ ಹಾಗೂ ಅತ್ಯುತ್ತಮ ನ್ಯಾಯಾಂಗ ಜ್ಞಾನವನ್ನು ಹೊಂದಿದ್ದ ಮಾನವೀಯ ಗುಣಗಳ ಗೌಡರು ಯುವ ವಕೀಲರುಗಳಿಗೆ ಮಾರ್ಗದರ್ಶಕರಾಗಿದ್ದರು ಎಂದು ನೆನಪಿಸಿಕೊಂಡರು.

‘ಯಾವಾಗಲೂ ತಮ್ಮನ್ನು ಯುವ ವಕೀಲರು ಹಾಗೂ ನ್ಯಾಯಾಧೀಶರುಗಳೊಂದಿಗೆ ತಮ್ಮನ್ನು ಗುರುತಿಸಿಕೊಳ್ಳಲು ಇಷ್ಟಪಡುತ್ತಿದ್ದ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡ ನಂತರವೂ ಅವರ ವ್ಯಕ್ತಿತ್ವದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ ಹಾಗೂ ಅವರೊಬ್ಬ ತನ್ನ ಮಣ್ಣಿಗಂಟಿದ ಬೇರಾಗಿದ್ದರು ಎಂದು ಸಿಎಂ ತಿಳಿಸಿದರು.

‘ಅವರ ಹೆಸರನ್ನು ಕರ್ನಾಟಕ ನ್ಯಾಯಾಂಗ ವ್ಯವಸ್ಥೆಯಲ್ಲಿ ನೆನಪಿನಲ್ಲಿರುವಂತೆ ಸರಕಾರದಿಂದ ಯೋಜನೆಯನ್ನು ರೂಪಿಸಲು ಚಿಂತಿಸಲಾಗುವುದು. ಸಾಧಕನಿಗೆ ಸಾವಿಲ್ಲ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ಸ್ಮರಿಸುವ ಮೂಲಕ ಗೌಡರಿಗೆ ನಮನ ಸಲ್ಲಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶ ಮೋಹನ್ ಎಂ.ಶಾಂತನಗೌಡರ್ ಅವರು ಅತ್ಯಂತ ಸಹೃದಯಿ ಮನಸ್ಸನ್ನು ಹೊಂದಿದ್ದರು. ಅವರ ಜೊತೆಗಿನ ತಮ್ಮ ಒಡನಾಟದ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದ ಆರಂಭದಲ್ಲಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಮೋಹನ್ ಎಂ.ಶಾಂತನಗೌಡರ್ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು. ಇದೇ ಸಂದರ್ಭದಲ್ಲಿ ಗೌಡರ ಕುರಿತು ಪರಿಷತ್ತು ನಿರ್ಮಿಸಿದ್ದ ಕಿರುಚಿತ್ರವನ್ನು ಸಿಎಂ ಬಿಡುಗಡೆ ಮಾಡಿದರು.

ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರುಗಳಾದ ಬಿ.ವಿ.ನಾಗರತ್ನ, ಅಭಯ್ ಶ್ರೀನಿವಾಸ ಓಕಾ, ಎ.ಎಸ್.ಬೋಪಣ್ಣ, ಎಸ್.ಅಬ್ದುಲ್ ನಝೀರ್ ಹಾಗೂ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಮತ್ತು ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವಡ್ಗಿ ಸೇರಿದಂತೆ ವಕೀಲರ ಪರಿಷತ್ತಿನ ಪದಾಧಿಕಾರಿಗಳು ನುಡಿನಮನ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X