ಪಂಜಾಬ್ ಮುಖ್ಯಮಂತ್ರಿ ಸ್ಥಾನ ನಿರಾಕರಿಸಿದ ಅಂಬಿಕಾ ಸೋನಿ

ಹೊಸದಿಲ್ಲಿ: ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಒಂದು ದಿನದ ನಂತರ ಪಂಜಾಬ್ ನ ಮುಂದಿನ ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋನಿ ತನ್ನ ಪಕ್ಷದ ಸಹೋದ್ಯೋಗಿ ರಾಹುಲ್ ಗಾಂಧಿಯವರೊಂದಿಗೆ ತಡರಾತ್ರಿ ನಡೆಸಿದ್ದ ಸಭೆಯಲ್ಲಿ ಆಫರ್ ನಿರಾಕರಿಸಿದರು ಎಂದು ಮೂಲಗಳು ತಿಳಿಸಿವೆ.
ಸಿಖ್ ನಾಯಕನೊಬ್ಬನನ್ನು ಪಂಜಾಬ್ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಸೋನಿ ಸಭೆಯ ವೇಳೆ ಸ್ಪಷ್ಟಪಡಿಸಿದರು ಎಂದು ತಿಳಿದುಬಂದಿದೆ.
ಪಂಜಾಬ್‌ನ ಕಾಂಗ್ರೆಸ್‌ನ ಮೂವರು ರಾಜಕೀಯ ವೀಕ್ಷಕರು ಈ ವಿಷಯದ ಬಗ್ಗೆ ಅಭಿಪ್ರಾಯಗಳನ್ನು ಪಡೆಯಲು ಪ್ರತಿ ಶಾಸಕರನ್ನು ಭೇಟಿ ಮಾಡುತ್ತಿದ್ದಾರೆ ಹಾಗೂ ಮುಂದಿನ ಮುಖ್ಯಮಂತ್ರಿ ಯಾರು ಎಂಬ ನಿರ್ಧಾರಕ್ಕಾಗಿ ಮೂವರು ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸುತ್ತಾರೆ.
ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲು ತಿಂಗಳುಗಳ ಬಾಕಿ ಇರುವಾಗ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.
Next Story