ಶಿವಮೊಗ್ಗ : ದುಷ್ಕರ್ಮಿಗಳ ತಂಡದಿಂದ ಯುವಕನ ಕೊಲೆ
ಶಿವಮೊಗ್ಗ : ದುಷ್ಕರ್ಮಿಗಳ ತಂಡವೊಂದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಟಿಪ್ಪು ನಗರದ ಕೆ.ಕೆ. ಶೆಡ್ ಬಳಿ ಶನಿವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು ಇರ್ಫಾನ್ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳ ತಂಡವೊಂದು ಇರ್ಫಾನ್ ನನ್ನು ಮಾರಕಾಯುಧದಿಂದ ಕಡಿದು ಕೊಲೆ ಮಾಡಿರುವುದಾಗಿ ದೂರಲಾಗಿದ್ದು, ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story