Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು:...

ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್

ವಾರ್ತಾಭಾರತಿವಾರ್ತಾಭಾರತಿ19 Sept 2021 7:51 PM IST
share
ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್

ಬೆಂಗಳೂರು, ಸೆ. 19: `ಕರ್ನಾಟಕ ದೇಶದಲ್ಲಿಯೇ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಹಲವು ಹೊಸತನಗಳ ಮತ್ತು ನವೋದ್ಯಮಗಳ ಉಗಮ ಸ್ಥಾನವಾಗಿದ್ದು, ಭಾರತದ ಬಯೋಟೆಕ್ನಾಲಜಿಯ ರಾಜಧಾನಿ ಬೆಂಗಳೂರು ಆಗಿದೆ' ಎಂದು ಕೇಂದ್ರ ಜವಳಿ, ಗ್ರಾಹಕರ ವ್ಯವಹಾರ, ಆಹಾರ ಹಾಗೂ ನಾಗರಿಕ, ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ರವಿವಾರ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕರ್ನಾಟಕ ನಾವೀನ್ಯತೆ ಕೇಂದ್ರದಲ್ಲಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಆವರಣದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉದ್ಯಮ ಹಾಗೂ ನವೋದ್ಯಮ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಜಾಗತಿಕ ಮಹಾಮಾರಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಭಾರತ್ ಬಯೋಟೆಕ್ನಾಲಜಿಯಂತಹ ಸಂಸ್ಥೆಯ ಕೊಡುಗೆ ಅಪಾರ, ದೇಶದ ಆರ್ಥಿಕ ಅಭಿವೃದ್ಧಿಗಾಗಿ ಬೆಂಗಳೂರು ನವೋದ್ಯಮದ ಮೂಲಕ ತನ್ನದೇ ಕೊಡುಗೆ ನೀಡುತ್ತಿದೆ ಎಂದು ಅವರು ಹೇಳಿದರು.

ಸರಕಾರದ ಮಟ್ಟದಲ್ಲಿ ದೇಶದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂತಹ ಸಂವಾದಗಳು ಸಹಾಯವಾಗುತ್ತವೆ, ಇಲ್ಲಿನ ಸಂವಾದ ಸಾರಾಂಶದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ಹೊಸದಿಲ್ಲಿಗೆ ಭೇಟಿ ನೀಡಿ ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹಂಚಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದರು.

ಕೋವಿಡ್ ಸಮಯದಲ್ಲಾದ ಆರ್ಥಿಕ ತಲ್ಲಣಗಳನ್ನು ಕೇಂದ್ರ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಉದ್ಯಮಗಳ ಉಳಿವಿಗಾಗಿ ಹಾಗೂ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನವೋದ್ಯಮಿಗಳ  ಪ್ರೋತ್ಸಾಹಕ್ಕೆ ಸರಕಾರ ಬದ್ಧವಾಗಿದೆ ಎಂದು ಹೇಳಿದರು.

ಸಂವಾದದದಲ್ಲಿ ಮಾಹಿತಿ-ತಂತ್ರಜ್ಞಾನದ ರಾಜ್ಯ ಸರಕಾರದ ಕಾರ್ಯದರ್ಶಿ ರಮಣ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಹಾಗೂ ಸ್ಥಾನಮಾನದ ಕುರಿತು ವಿವರಿಸಿ, ಸಚಿವರಿಗೆ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿ ಮೀನಾ ನಾಗರಾಜ್, ಇನ್ಫೋಸಿಸ್ ಸಂಸ್ಥೆಯ ಸ್ಥಾಪಕ ಸದಸ್ಯ ಕ್ರಿಸ್ ಗೋಪಾಲ್ ಸೇರಿದಂತೆ ಹಲವಾರು ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X