Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶದಲ್ಲಿ...

ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶದಲ್ಲಿ ಒಂದೂ ದಂಗೆ ಸಂಭವಿಸಿಲ್ಲ: ಆದಿತ್ಯನಾಥ್

"ದೇಶಾದ್ಯಂತ ಉತ್ತರಪ್ರದೇಶದ ಕುರಿತು ದೃಷ್ಟಿಕೋನ ಬದಲಾಗಿದೆ"

ವಾರ್ತಾಭಾರತಿವಾರ್ತಾಭಾರತಿ19 Sept 2021 11:31 PM IST
share
ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶದಲ್ಲಿ ಒಂದೂ ದಂಗೆ ಸಂಭವಿಸಿಲ್ಲ: ಆದಿತ್ಯನಾಥ್

ಲಕ್ನೋ,ಸೆ.19: ಈ ಹಿಂದೆ ದಂಗೆಗಳು ಮಾಮೂಲಾಗಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರದ ನಾಲ್ಕೂವರೆ ವರ್ಷಗಳ ಆಡಳಿತಾವಧಿಯಲ್ಲಿ ಒಂದೇ ಒಂದು ದಂಗೆ ಸಂಭವಿಸಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರವಿವಾರ ಇಲ್ಲಿ ಹೇಳಿದರು. ಈ ಅವಧಿಯಲ್ಲಿ ದೇಶಾದ್ಯಂತ ಉ.ಪ್ರದೇಶದ ಕುರಿತು ದೃಷ್ಟಿಕೋನ ಬದಲಾಗಿದೆ ಎಂದೂ ಅವರು ತಿಳಿಸಿದರು.

ಉ.ಪ್ರದೇಶದಲ್ಲಿ ಬಿಜೆಪಿ ಸರಕಾರವು ನಾಲ್ಕೂವರೆ ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಭದ್ರತೆ ಮತ್ತು ಉತ್ತಮ ಆಡಳಿತದ ದೃಷ್ಟಿಯಿಂದ ಉ.ಪ್ರದೇಶದಂತಹ ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳ ಆಡಳಿತವನ್ನು ಪೂರೈಸಿರುವುದು ಅತ್ಯಂತ ಮಹತ್ವದ್ದಾಗಿದೆ. ಜಾತಿ,ಸ್ಥಳ ಮತ್ತು ಧರ್ಮಗಳನ್ನು ಪರಿಗಣಿಸದೆ ಕ್ರಿಮಿನಲ್ಗಳನ್ನು ಮತ್ತು ಮಾಫಿಯಾಗಳನ್ನು ಕಾನೂನಿನ ಚೌಕಟ್ಟಿನಡಿ ಕಟುನಿಟ್ಟಾಗಿ ನಿಭಾಯಿಸಿದ್ದೇವೆ. 1,800 ಕೋ.ರೂ.ಗೂ ಅಧಿಕ ವೌಲ್ಯದ ಸರಕಾರಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಕ್ರಿಮಿನಲ್ಗಳ ಅತಿಕ್ರಮಣಗಳನ್ನೂ ನೆಲಸಮಗೊಳಿಸಲಾಗಿದೆ ಎಂದರು.

ತನ್ನ ಅಧಿಕಾರಾವಧಿಯಲ್ಲಿ ಉ.ಪ್ರದೇಶವು ಸುಲಲಿತ ಉದ್ಯಮದ ಪೂರಕ ರಾಜ್ಯಗಳ ರಾಷ್ಟ್ರೀಯ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. 42 ಲಕ್ಷ ಬಡವರಿಗೆ ಮನೆಗಳನ್ನು ಒದಗಿಸಲಾಗಿದೆ. ಸಂತ್ರಸ್ತರಿಗೆ 24 ಗಂಟೆಗಳಲ್ಲಿ ಪರಿಹಾರವನ್ನೊದಗಿಸಲು ಪ್ರಯತ್ನಿಸಲಾಗುತ್ತಿದೆ. ನೇರ ಸೌಲಭ್ಯ ವರ್ಗಾವಣೆಯಡಿ ರಾಜ್ಯದ ಜನತೆಗೆ ಐದು ಲ.ಕೋ.ರೂ.ಗೂ ಅಧಿಕ ಮೊತ್ತವನ್ನು ವಿತರಿಸಲಾಗಿದೆ. ಪಾರದರ್ಶಕ ವ್ಯವಸ್ಥೆಯ ಮೂಲಕ 4.5ಲಕ್ಷ.ಕ್ಕೂ ಅಧಿಕ ಯುವಜನರಿಗೆ ಸರಕಾರಿ ಉದ್ಯೋಗಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದ ಅವರು,ಅಯೋಧ್ಯೆ ಮತ್ತು ಕಾಶಿಯಲ್ಲಿ ದೀಪೋತ್ಸವ ಮತ್ತು ದೀಪಾವಳಿಯನ್ನು ಆಯೋಜಿಸುವ ಮೂಲಕ ಉ.ಪ್ರದೇಶವು ದೇಶ ಮತ್ತು ವಿಶ್ವದ ಎದುರು ತನ್ನ ಸಂಪ್ರದಾಯವನ್ನು ಮೆರೆದಿದೆ. ಪ್ರತಿಪಕ್ಷ ಎಂದಿಗೂ ಈ ಉತ್ಸವಗಳನ್ನು ನಡೆಸಿರಲಿಲ್ಲ,ಹಾಗೆ ಮಾಡಿದರೆ ತಮಗೆ ಕೋಮುವಾದಿ ಎಂಬ ಹಣೆಪಟ್ಟಿ ಅಂಟಿಸಲಾಗುತ್ತದೆ ಎಂದು ಅವರು ಭಾವಿಸಿದ್ದರು ಎಂದರು.

ಉ.ಪ್ರದೇಶದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X