Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಐಎಲ್ ದುರುಪಯೋಗ: ವಕೀಲರ ಗುಮಾಸ್ತರ...

ಪಿಐಎಲ್ ದುರುಪಯೋಗ: ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ 10 ಲಕ್ಷ ರೂ. ದಂಡ ಪಾವತಿಗೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ20 Sept 2021 7:36 PM IST
share
ಪಿಐಎಲ್ ದುರುಪಯೋಗ: ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ 10 ಲಕ್ಷ ರೂ. ದಂಡ ಪಾವತಿಗೆ ಹೈಕೋರ್ಟ್ ಆದೇಶ

ಬೆಂಗಳೂರು, ಸೆ.20: ತ್ಯಾಜ್ಯವನ್ನು ನದಿಗೆ ಹರಿಯಬಿಡುತ್ತಿರುವ ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಪಾಲುದಾರರಾಗಿರುವ ರಾಜ್‍ಫಿಶ್‍ಮೀಲ್ ಮತ್ತು ಆಯಿಲ್ ಕಂಪೆನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, 10 ಲಕ್ಷ ರೂ.ದಂಡವನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಜಮೆ ಮಾಡುವಂತೆ ಅರ್ಜಿದಾರರಿಗೆ ಆದೇಶಿಸಿದೆ. 

ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠವು ಅರ್ಜಿದಾರ ಪ್ರಶಾಂತ್ ಅಮಿನ್ ಅವರು ವೈಯಕ್ತಿಕ ಹಿತದೃಷ್ಟಿಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದೆ.

ಅರ್ಜಿದಾರ ಪ್ರಶಾಂತ್ ಅಮಿನ್ ಅವರು ರಾಜ್ ಫಿಶ್‍ಮೀಲ್ ಮತ್ತು ಆಯಿಲ್ ಕಂಪೆನಿ ಜೊತೆ ವ್ಯವಹಾರ ಹೊಂದಿದ್ದು, ಕಂಪೆನಿಗೆ ಅರ್ಜಿದಾರರು ಮೀನು ಪೂರೈಕೆ ಮಾಡುತ್ತಿದ್ದರು. 2013-14 ಮತ್ತು 2020-21ರ ಅವಧಿಯಲ್ಲಿ ಕಂಪೆನಿಯು ಅರ್ಜಿದಾರರಿಗೆ 95 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಪಾವತಿ ಮಾಡಿದೆ.

ಕಂಪೆನಿ ಮತ್ತು ಅರ್ಜಿದಾರರ ನಡುವೆ ಒಪ್ಪಂದ ಮುರಿದು ಬಿದ್ದಾಗ ಅರ್ಜಿದಾರರು ಪಿಐಎಲ್ ಸಲ್ಲಿಸಿದ್ದು, ಇದರಲ್ಲಿ ಕಂಪೆನಿಯು ಸಾವನ್ನಪ್ಪಿದ ಮೀನು ಮತ್ತು ತ್ಯಾಜ್ಯವನ್ನು ನದಿಗೆ ಹರಿಯ ಬಿಟ್ಟು ನೀರು ಕಲುಷಿತಗೊಳಿಸುವುದರ ಜೊತೆಗೆ ಪರಿಸರಕ್ಕೆ ಹಾನಿ ಉಂಟು ಮಾಡಿದೆ ಎಂದು ದೂರಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅನುಸರಣಾ ವರದಿ ಸಲ್ಲಿಸಿದ್ದು, ಕಂಪೆನಿಯ ಬಗ್ಗೆ ಯಾವುದೇ ಆಪಾದನೆ ಮಾಡಿಲ್ಲ ಎಂದು ನ್ಯಾಯಾಲಯ ಹೇಳಿತು.

ಕಂಪೆನಿಯ ಜೊತೆ ವ್ಯವಹಾರ ಹೊಂದಿದ್ದರೂ ವಾಸ್ತವಿಕ ಅಂಶಗಳನ್ನು ಬಚ್ಚಿಟ್ಟು ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಸಿದ್ದಾರೆ.

ಇದರಿಂದ ಇದು ಪಿಐಎಲ್ ಅಲ್ಲ, ಬದಲಿಗೆ ವೈಯಕ್ತಿಕ ಹಿತಾಸಕ್ತಿ ಅರ್ಜಿ ಎಂಬುದು ನ್ಯಾಯಾಲಯದ ಗಮನಕ್ಕೆ ಬಂದಿದೆ. ಅರ್ಜಿದಾರರು ನ್ಯಾಯಾಲಯದ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಸಾಬೀತಾಗಿದೆ. ಹೀಗಾಗಿ, ಕೋವಿಡ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಉದ್ಯಮಿಯಾಗಿರುವ ಅರ್ಜಿದಾರ ಅಮಿನ್ ಅವರು ಒಂದು ತಿಂಗಳ ಒಳಗಾಗಿ 10 ಲಕ್ಷ ರೂಪಾಯಿ ದಂಡದ ಮೊತ್ತವನ್ನು ಪಾವತಿ ಮಾಡಬೇಕು. ಇಲ್ಲವಾದರೆ ಉಡುಪಿ ಜಿಲ್ಲಾಧಿಕಾರಿಯು ಅರ್ಜಿದಾರರಿಂದ ದಂಡ ವಸೂಲಿ ಮಾಡಿ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಜಮೆ ಮಾಡಬೇಕು. ಈ ಸಂಬಂಧ ಅನುಸರಣಾ ವರದಿಯನ್ನು ರಿಜಿಸ್ಟ್ರಾರ್ ಜನರಲ್‍ಗೆ ಸಲ್ಲಿಸಬೇಕು. ಈ ಮೂಲಕ ಪಿಐಎಲ್ ಅನ್ನು ವಜಾ ಮಾಡಲಾಗಿದೆ ಎಂದು ಪೀಠ ಆದೇಶ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X