2022ರಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ ಸ್ಪರ್ಧಿಸಲಿದೆ: ಉವೈಸಿ
ಅಹಮದಾಬಾದ್: ಎಐಎಂಐಎಂ 2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು ಪಕ್ಷವು ಈಗಾಗಲೇ ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿದೆ ಎಂದು ಪಕ್ಷದ ಅಧ್ಯಕ್ಷ ಅಸದುದ್ದೀನ್ ಉವೈಸಿ ಸೋಮವಾರ ತಿಳಿಸಿದ್ದಾರೆ.
ಗುಜರಾತ್‌ನಲ್ಲಿ ಎಐಎಂಐಎಂ ರಾಜ್ಯ ಘಟಕವು ಸ್ಪರ್ಧಿಸಬೇಕಾದ ಸ್ಥಾನಗಳ ಸಂಖ್ಯೆಯನ್ನು ಅಂತಿಮಗೊಳಿಸಲಿದೆ ಎಂದರು.
ಅಹಮದಾಬಾದ್‌ಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉವೈಸಿ, ಹೈದರಾಬಾದ್ ನ ಪಕ್ಷವು ತನ್ನ ಎಲ್ಲಾ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಹಾಗೂ ಗುಜರಾತ್‌ನ 182 ಸದಸ್ಯ ಬಲದ ವಿಧಾನಸಭೆಗೆ ತಮ್ಮ ಅಭ್ಯರ್ಥಿಗಳು ಪ್ರವೇಶಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
"ಕಳೆದ (ಸ್ಥಳೀಯ ಸಂಸ್ಥೆಗಳ) ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಕ್ಕಾಗಿ ಜನರಿಗೆ ಧನ್ಯವಾದ ಹೇಳುವುದು ಅಹಮದಾಬಾದ್ ಭೇಟಿಯ ಹಿಂದಿನ ಒಂದು ಉದ್ದೇಶವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದಿರುವ ಪಕ್ಷದ ಕಾರ್ಪೋರೇಟರ್ ಗಳನ್ನು ಭೇಟಿಯಾಗುವೆ’’ಎಂದು ಹೈದರಾಬಾದ್ ಸಂಸದ ಹೇಳಿದರು.