ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸುಕಾಂತ ಮಜುಂದಾರ್ ನೇಮಕ

Photo: Sukanta Majumdar Official Twitter
ಕೋಲ್ಕತ್ತಾ: ಬಿಜೆಪಿ ಸೋಮವಾರ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷರಾಗಿ ಸಂಸದ ಸುಕಾಂತ ಮಜುಂದಾರ್ ಅವರನ್ನು ನೇಮಿಸಿದೆ.
ಹಾಲಿ ಅಧ್ಯಕ್ಷ ದಿಲೀಪ್ ಘೋಷ್ ಅವರನ್ನು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ.
ಮೇ ನಲ್ಲಿ ಚುನಾವಣೆಯ ಫಲಿತಾಂಶ ಬಂದ ಬಳಿಕ ನಾಲ್ವರು ಶಾಸಕರು ಹಾಗೂ ಓರ್ವ ಸಂಸದ ಬಿಜೆಪಿ ತೊರೆದು ಟಿಎಂಸಿಗೆ ಸೇರಿದ ಹಿನ್ನೆಲೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಿಸಲಾಗಿದೆ ಎಂದು ತಿಳಿದುಬಂದಿದೆ.
ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು 294 ಸೀಟುಗಳಲ್ಲಿ 200ಕ್ಕೂ ಅಧಿಕ ಸೀಟುಗಳನ್ನು ಗೆದ್ದುಕೊಂಡಿತ್ತು. ಈ ಹಿಂದೆ 2 ಸೀಟು ಗೆದ್ದಿದ್ದ ಬಿಜೆಪಿ ಈ ಬಾರಿ 77 ಸೀಟುಗಳನ್ನು ಗೆದ್ದುಕೊಂಡಿತ್ತು.
Next Story