Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2023ರ ಸಿರಿಧಾನ್ಯ ವರ್ಷಕ್ಕೆ ಕರ್ನಾಟಕದ...

2023ರ ಸಿರಿಧಾನ್ಯ ವರ್ಷಕ್ಕೆ ಕರ್ನಾಟಕದ ಕೊಡುಗೆ ಹೆಚ್ಚಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ21 Sept 2021 11:24 PM IST
share
2023ರ ಸಿರಿಧಾನ್ಯ ವರ್ಷಕ್ಕೆ ಕರ್ನಾಟಕದ ಕೊಡುಗೆ ಹೆಚ್ಚಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು, ಸೆ.21: 2023ನ್ನು ಅಂತರ್‍ರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಲಾಗಿದ್ದು, ಈ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ರಫ್ತು ಪ್ರಮಾಣ ಹೆಚ್ಚಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಕೇಂದ್ರ ವಾಣಿಜ್ಯ ಇಲಾಖೆಯು ಕರ್ನಾಟಕ ಸರಕಾರದ ಸಹಯೋಗದೊಂದಿಗೆ ನಗರದ ಖಾಸಗಿ ಹೊಟೇಲ್‍ನಲ್ಲಿ ಮಂಗಳವಾರ ಆಯೋಜಿಸಿದ್ದ `ವಾಣಿಜ್ಯ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.   

“2023ನೇ ವರ್ಷವನ್ನು ಅಂತರ್‍ರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ವಿಶ್ವಸಂಸ್ಥೆ ಘೋಷಿಸಿದೆ. ಕರ್ನಾಟಕ ಸಿರಿಧಾನ್ಯಗಳ ತವರೂರು. ಜೋಳ, ರಾಗಿ ನಮ್ಮ ಪ್ರಮುಖ ಆಹಾರ. ಇವುಗಳ ಉತ್ಪಾದನೆ ಹಾಗೂ ರಫ್ತು ಹೆಚ್ಚಬೇಕಾಗಿದೆ. ಕೃಷಿ ಕ್ಷೇತ್ರದ ಪ್ರಗತಿ ಮತ್ತು ನಮ್ಮ ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರಕಾರ ಸಿದ್ಧ ಎಂದು ಅವರು ಹೇಳಿದರು. 

"ಮಾವು, ದಾಳಿಂಬೆ, ಹೂವು, ಎಣ್ಣೆ, ತಾಳೆ ಮುಂತಾದ ಕೃಷಿ ಉತ್ಪನ್ನಗಳ ಪ್ರಮಾಣ ಹಾಗೂ ಗುಣಮಟ್ಟ ಹೆಚ್ಚಿಸಲು ಇಂಡೋ-ಇಸ್ರೇಲ್-ನೆದರ್‍ಲ್ಯಾಂಡ್ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯ 6 ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರಗಳನ್ನು ಸ್ಥಾಪಿಸಿದೆ. ಇದು ಸಂತಸದ ವಿಷಯ," ಎಂದು ಅವರು ತಿಳಿಸಿದರು. 

"ರಫ್ತು ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ ಹಾಗೂ ಸುಧಾರಣೆಗೆ ಒತ್ತು ನೀಡಿ ಕೃಷಿ ರಫ್ತು ಕೇಂದ್ರ ಸ್ಥಾಪನೆಗೆ ರಾಜ್ಯ ಮುಂದಾಗಿದೆ. ನಮ್ಮ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಿಸಲು ಮಾರ್ಕೆಟಿಂಗ್ ಮತ್ತು ರಫ್ತು ಪ್ರಚಾರ ಚಟುವಟಿಕೆ ಬಗ್ಗೆಯೂ ರಾಜ್ಯ ಗಮನಹರಿಸಿದೆ. 'ಆತ್ಮ ನಿರ್ಭರ ಭಾರತ್ ಅಭಿಯಾನ'ದಡಿ ಪ್ರಧಾನ ಮಂತ್ರಿಯವರ "ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‍ಪ್ರೈಸಸ್' ಅನುಷ್ಠಾನದಲ್ಲೂ ಕರ್ನಾಟಕ ಸಕ್ರಿಯವಾಗಿದೆ" ಎಂದು ಶೋಭಾ ಕರಂದ್ಲಾಜೆ ಮೆಚ್ಚುಗೆ ವ್ಯಕ್ತಪಡಿಸಿದರು.

"ಜಾಗತಿಕವಾಗಿ ಉತ್ತಮ ವ್ಯಾಪಾರ ಸಂಬಂಧ ಕಾಯ್ದುಕೊಂಡಿರುವ ಕರ್ನಾಟಕವು ಕಾಫಿ, ಸಾಂಬಾರು ಪದಾರ್ಥಗಳು, ರೇಷ್ಮೆ, ಗೋಡಂಬಿ, ಕರಕುಶಲ ವಸ್ತುಗಳಿಗೆ ಹಿಂದಿನಿಂದಲೂ ಹೆಸರುವಾಸಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಎಂಜಿನಿಯರಿಂಗ್ ಸರಕುಗಳು, ಸಿದ್ಧ ಉಡುಪುಗಳು, ಚರ್ಮದ ಸರಕು, ರಾಸಾಯನಿಕಗಳು, ಖನಿಜ ಮತ್ತು ಅದಿರುಗಳ ರಫ್ತಿನಲ್ಲಿ ಪ್ರಮುಖ ಸ್ಥಾನ ಪಡೆದಿದ್ದೇವೆ. ಇದರ ಜತೆಗೆ, ಕೃಷಿ ಉತ್ಪನ್ನಗಳ ರಫ್ತಿಗೆ ಉದ್ಯಮಿಗಳು ಹೆಚ್ಚಿನ ಆದ್ಯತೆ ನೀಡಬೇಕು" ಎಂದು ಅವರು ಮನವಿ ಮಾಡಿದರು.  

"ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಮಾರ್ಗದರ್ಶನದಲ್ಲಿ ಸೇವಾ ರಫ್ತು ಉತ್ತೇಜನಾ ಮಂಡಳಿ (ಎಸ್‍ಇಪಿಸಿ) ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಾಣಿಜ್ಯೋದ್ಯಮಿಗಳು, ಕೈಗಾರಿಕಾ ಸಂಘಗಳ ಪ್ರತಿನಿಧಿಗಳು, ರಫ್ತು ಉತ್ತೇಜನ ಮಂಡಳಿಗಳ ಪ್ರಮುಖರು ಮತ್ತು ಉದ್ಯಮ ತಜ್ಞರು ಭಾಗಿಯಾಗಿದ್ದು, ಕಾರ್ಯಕ್ರಮ ಫಲಪ್ರದವಾಗಲಿದೆ. ಇಂಥ ಕಾರ್ಯಕ್ರಮಗಳು, ಸ್ವ ಉದ್ಯಮ ಸ್ಥಾಪಿಸಿ, ಉದ್ಯೋಗಾವಕಾಶ ಸೃಷ್ಟಸಲು ಪ್ರೇರಣೆಯಾಗುವುದು" ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ.ರಣಮಣರೆಡ್ಡಿ, ಕೇಂದ್ರ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್, ವಾಣಿಜ್ಯ ಮತ್ತು ಎಸ್‍ಇಪಿಸಿ ಅಧ್ಯಕ್ಷ ಮನೇಕ್ ಇ ದಾವರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X