Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ಮೆಟ್ರೋ ಎರಡನೆ ಹಂತ 2024ಕ್ಕೆ...

ನಮ್ಮ ಮೆಟ್ರೋ ಎರಡನೆ ಹಂತ 2024ಕ್ಕೆ ಪೂರ್ಣ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 Sept 2021 3:09 PM IST
share
ನಮ್ಮ ಮೆಟ್ರೋ ಎರಡನೆ ಹಂತ 2024ಕ್ಕೆ ಪೂರ್ಣ:  ಬಸವರಾಜ ಬೊಮ್ಮಾಯಿ

ಬೆಂಗಳೂರು : ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಇಂದು ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್ ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ ನಂತರ ಮಾತನಾಡುತ್ತಿದ್ದರು.

ಎರಡನೇ ಹಂತ 2024ಕ್ಕೇ ಮುಗಿಸಲು, ಯೋಜನೆ ರೂಪಿಸಿ, ಹೆಚ್ಚುವರಿ ಮಾನವಸಂಪನ್ಮೂಲ ಬಳಸಿಕೊಂಡು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಇನ್ನು 21 ಕಿ.ಮೀ. ಆಗಬೇಕಾಗಿದೆ. ಇದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆಮೇಲೆ ಮೂರನೇ ಹಂತ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಮೆಟ್ರೋ ಯೋಜನೆ ತ್ವರಿತವಾಗಿ ಪೂರ್ಣಗೊಳಿಸ ಬೇಕಾಗಿದೆ. ಮೆಟ್ರೋ 2ನೇ ಹಂತ ಪೂರ್ಣಗೊಂಡಾಗ 56 ಕಿ.ಮೀ. ಮಾರ್ಗ ಪೂರ್ಣಗೊಳ್ಳುವುದು. ಇದರೊಂದಿಗೆ 3ನೇ ಹಂತ ಕೈಗೆತ್ತಿಕೊಳ್ಳುತ್ತಿದ್ದೇವೆ. ಮೂರೂ ಹಂತಗಳು ಪೂರ್ಣಗೊಂಡಾಗ ಮೆಟ್ರೋ ರೈಲು ಬೆಂಗಳೂರಿನ ಜೀವನಾಡಿಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೆಟ್ರೋ ಕಾಮಗಾರಿಯನ್ನು ಹಲವು ಸವಾಲುಗಳ ನಡುವೆಯೂ ವೈಜ್ಞಾನಿಕವಾಗಿ, ಸುರಕ್ಷತೆಗೆ ಆದ್ಯತೆ ನೀಡಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೊದಲ ಹಂತದಲ್ಲಿ ಹಲವು ಸವಾಲುಗಳು ಎದುರಾಗಿದ್ದವು. ಮೆಜೆಸ್ಟಿಕ್ ಬಳಿ ಟನೆಲ್ ಬೋರಿಂಗ್ ಮಷಿನ್ ಸಿಲುಕಿಕೊಂಡಿತ್ತು ಎಂದು ಅವರು ಸ್ಮರಿಸಿಕೊಂಡರು. ಇಂದು ಅತ್ಯುತ್ತಮ ಟಿಬಿಎಂ ಊರ್ಜಾ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ. 855  ಮೀಟರ್ ಸುರಂಗ ಕೊರೆಯಲಾಗಿದೆ. ಮೆಟ್ರೋ ಯೋಜನೆಗೆ ಜನರು ಸಹಕಾರ ನೀಡಿದ್ದಾರೆ. ಬೆಂಗಳೂರು ನಗರದ ಎಲ್ಲ ದಿಕ್ಕಿನಲ್ಲಿ ಮೆಟ್ರೋ ವಿಸ್ತರಿಸಲು ಸಹಕಾರ ನೀಡಿದ ಜನತೆಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿಗಳು. ವಿಮಾನ ನಿಲ್ದಾಣದ ವರೆಗೆ ಮೆಟ್ರೋ ವಿಸ್ತರಣೆಗೆ ಶೀಘ್ರವೇ ಚಾಲನೆ ನೀಡಲಾಗುವುದು. ಕೇಂದ್ರದಿಂದ ಉತ್ತಮ ಸಹಕಾರ ಹಾಗೂ ಹಣಕಾಸಿನ ನೆರವು ದೊರೆಯುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X