Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 400 ಕೋಟಿ ರೂ. ಬೆಲೆಬಾಳುವ ಜಮೀನನ್ನು...

400 ಕೋಟಿ ರೂ. ಬೆಲೆಬಾಳುವ ಜಮೀನನ್ನು ಸರಕಾರ ಆರೆಸ್ಸೆಸ್ ಸಂಸ್ಥೆಗೆ 50 ಕೋಟಿ ರೂ.ಗೆ ಮಾರಿದೆ: ಸಿದ್ದರಾಮಯ್ಯ ಆರೋಪ

ಚಾಣಕ್ಯ ವಿ.ವಿ ಸ್ಥಾಪನೆಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ22 Sept 2021 3:19 PM IST
share
400 ಕೋಟಿ ರೂ. ಬೆಲೆಬಾಳುವ ಜಮೀನನ್ನು ಸರಕಾರ ಆರೆಸ್ಸೆಸ್ ಸಂಸ್ಥೆಗೆ 50 ಕೋಟಿ ರೂ.ಗೆ ಮಾರಿದೆ: ಸಿದ್ದರಾಮಯ್ಯ ಆರೋಪ

ಬೆಂಗಳೂರು : ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸೆಂಡರ್ ಫಾರ್ ಎಜ್ಯುಕೇಷನ್ ಅಂಡ್ ಸೋಷಿಯಲ್ ಸ್ಟಡೀಸ್ ಸಂಸ್ಥೆಗೆ (ಸೆಸ್) ಕಡಿಮೆ ದರದಲ್ಲಿ ನೂರಾರು ಎಕರೆ ಭೂಮಿ ನೀಡುವ ತೀರ್ಮಾನವನ್ನು ಕೈ ಬಿಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದರು.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ ಮಾಡಿರುವ ಅವರು,  ''ನಿನ್ನೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರೆಸ್ಸೆಸ್ ನವರು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

'ಸೆಸ್ ಸಂಸ್ಥೆ ಈ ವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು' ಎಂದು ಒತ್ತಾಯಿಸಿದ್ದಾರೆ.

'ರಾಜ್ಯ ಬಿಜೆಪಿ ಸರ್ಕಾರ 26-04-2021 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆ.ಐ.ಎ.ಡಿ.ಬಿ ಗೆ ಸೇರಿದ 116 ಎಕರೆ 16 ಗುಂಟೆ  ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ'.

'ಕೆ.ಐ.ಎ.ಡಿ.ಬಿ ಅವರು ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ' ಎಂದು ತಿಳಿಸಿದ್ದಾರೆ.

'ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್.ಎಸ್.ಎಸ್ ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ'. 

'ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ' ಎಂದು ಹೇಳಿದ್ದಾರೆ 

ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ. ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. 

'ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?' ಎಂದು ಪ್ರಶ್ನಿಸಿಸದರು.

'ಕೆ.ಐ.ಎ.ಡಿ.ಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ.

ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು ಹಾಗೂ ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸುತ್ತೇನೆ' ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X