Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ಐದು 5 ವರ್ಷಗಳಲ್ಲಿ ಮಲೈ...

ಮುಂದಿನ ಐದು 5 ವರ್ಷಗಳಲ್ಲಿ ಮಲೈ ಮಹದೇಶ್ವರ ಪ್ರಮುಖ ಯಾತ್ರಾ ಸ್ಥಳವಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 Sept 2021 9:32 PM IST
share
ಮುಂದಿನ ಐದು 5 ವರ್ಷಗಳಲ್ಲಿ ಮಲೈ ಮಹದೇಶ್ವರ ಪ್ರಮುಖ ಯಾತ್ರಾ ಸ್ಥಳವಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಸೆ.22: ಮುಂದಿನ 5 ವರ್ಷಗಳಲ್ಲಿ ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಪ್ರಮುಖ ಯಾತ್ರಾ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಎಂದರು.

ಮೈಸೂರಿನಿಂದ ಬೆಂಗಳೂರಿನವರೆಗೆ ಪ್ರತಿಯೊಬ್ಬರೂ ನಡೆದುಕೊಳ್ಳುವ ಧಾರ್ಮಿಕ ಕ್ಷೇತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಚಿಂತನೆ ನಡೆದು ವೇಗವನ್ನೂ ಪಡೆದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಬಿ.ಎಸ್.ಯಡಿಯೂರಪ್ಪ ಅವರು. ಪ್ರಾಧಿಕಾರ ರಚಿಸಿದ್ದಲ್ಲದೆ ದೊಡ್ಡ ಪ್ರಮಾಣದಲ್ಲಿ ಅನುದಾನವನ್ನೂ ಅವರು ಒದಗಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಾವಿರಾರು ಭಕ್ತರು ಬರುವ ಕ್ಷೇತ್ರಕ್ಕೆ ಸೌಲಭ್ಯಗಳ ಜೊತೆಗೆ ಕೋವಿಡ್ ಸಂದರ್ಭದಲ್ಲಿ ಸರಿಯಾದ ಮಾರ್ಗದರ್ಶನವೂ ಅಗತ್ಯ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ. ಶೀಘ್ರದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡಿ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಮಾದೇಶ್ವರ ಬೆಟ್ಟದ ಸಂಪೂರ್ಣ ಚಿತ್ರಣವನ್ನು ನೀಡುವ ಉಘೆ ಮಾದಪ್ಪ ಎನ್ನುವ ಪುರವಣಿಯನ್ನು ವಿಜಯ ಕರ್ನಾಟಕ ಹೊರತಂದಿದೆ. ಪತ್ರಿಕೆ ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರುವುದಲ್ಲದೆ, ಸಾಮಾಜಿಕ ಹಾಗೂ ಧಾರ್ಮಿಕ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿಭಾಯಿಸುತ್ತಿದೆ. ಪ್ರವಾಸೋದ್ಯಮದ ದೃಷ್ಟಿಯಿಂದಲೂ ಪತ್ರಿಕೆಯ ಕೆಲಸ ಸಹಕಾರಿಯಾಗಿದೆ. ಈ ಮೂಲಕ ಸ್ಥಳೀಯರಿಗೆ ಉದ್ಯೋಗ ದೊರಕುವಂತಾಗಲಿ ಎಂದು ಅವರು ಆಶಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಇಂಧನ ಸಚಿವ ಸುನೀಲ್ ಕುಮಾರ, ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎನ್.ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X