Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರದಲ್ಲಿ 4 ದಿನ ದಸರಾ ಆಚರಣೆ:...

ಚಾಮರಾಜನಗರದಲ್ಲಿ 4 ದಿನ ದಸರಾ ಆಚರಣೆ: ಸಚಿವ ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ22 Sept 2021 10:13 PM IST
share
ಚಾಮರಾಜನಗರದಲ್ಲಿ 4 ದಿನ ದಸರಾ ಆಚರಣೆ: ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು, ಸೆ.22: ಅ.7 ರಿಂದ ನಾಲ್ಕು ದಿನಗಳ ಕಾಲ ನಡೆಯುವ ಚಾಮರಾಜನಗರ ದಸರಾ ಆಚರಣೆಗೆ ಸಿದ್ಧತೆ ಕೈಗೊಳ್ಳುವಂತೆ ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಮರಾಜನಗರ ದಸರಾ 2021 ಆಚರಣೆ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ದಸರಾ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷಿತವಾಗಿ ದಸರಾ ಆಚರಣೆ ಮಾಡುವಂತೆ ಸೂಚಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ದಸರಾ ಆಚರಣೆಯಲ್ಲಿ ಕಲಾವಿದರು ಅವಕಾಶದಿಂದ ವಂಚಿತರಾಗಿದ್ದಾರೆ. ಈ ಬಾರಿಯಾದರೂ ಕಲಾವಿದರಿಗೆ ಅವಕಾಶ ಕೊಡಿ. ಸಾಂಸ್ಕøತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಬೇಕು ಎಂದು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ದಸರಾ ಹಿನ್ನೆಲೆಯಲ್ಲಿ ದೀಪಾಲಂಕಾರದ ಖರ್ಚು, ವೆಚ್ಚವನ್ನು ಚೆಸ್ಕಾಂನವರು ವಹಿಸಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ದಸರಾ ಆಚರಣೆ ಮಾಡಬೇಕು. ಸ್ಥಳೀಯ ಶಾಸಕರು, ಸಂಸದರು, ಜನಪ್ರತಿನಿಧಿಗಳ ಸಲಹೆಯನ್ನು ಪರಿಗಣನೆಗೆ ತೆಗೆದುಕೊಂಡು ದಸರಾ ಆಚರಣೆ ಮಾಡಬೇಕು ಎಂದು ಸೋಮಶೇಖರ್ ತಿಳಿಸಿದರು.

ಅ.7 ರಂದು ನಿಗದಿತ ಮುಹೂರ್ತದಲ್ಲಿ ದಸರಾ ಉತ್ಸವ ಆರಂಭವಾಗಲಿ. ರಾಷ್ಟ್ರಪತಿ ಆಗಮಿಸುವ ಸಾಧ್ಯತೆಯಿರುವುದರಿಂದ ಯಾವುದೇ ಲೋಪವಾಗಬಾರದು. ಎಲ್ಲಾ ಸಿದ್ಧತೆ ಮಾಡಿಕೊಂಡು ಜಿಲ್ಲಾ ಕೇಂದ್ರದಲ್ಲಿ ದಸರಾ ಆಚರಣೆ ಮಾಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್.ರವಿ, ದಸರಾ ಆಚರಣೆಗೆ 50 ಲಕ್ಷ ರೂ. ಅಂದಾಜು ವೆಚ್ಚ ಸಿದ್ಧಪಡಿಸಲಾಗುವುದು. ವಿದ್ಯುತ್ ವೆಚ್ಚವನ್ನು ಚೆಸ್ಕಾಂನವರು ವಹಸಿಕೊಂಡರೆ ದಸರಾ ಆಚರಣೆಗೆ ಯಾವುದೇ ಹಣದ ಕೊರತೆಯಾಗುವುದಿಲ್ಲ ಎಂದರು. 

ಜಿಲ್ಲಾ ಕೇಂದ್ರದಲ್ಲಿ ದೀಪಾಲಂಕಾರ ಮಾಡುವುದರ ಜೊತೆಗೆ ತಾಲೂಕು ಕೇಂದ್ರಗಳಲ್ಲಿ ಖಾಸಗಿ ಅವರ ಸಹಕಾರದೊಂದಿಗೆ ದೀಪಾಲಂಕಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಶಾಸಕರಾದ ನಿರಂಜನ್ ಕುಮಾರ್, ಎನ್.ಮಹೇಶ್, ಪುಟ್ಟರಂಗಶೆಟ್ಟಿ, ನರೇಂದ್ರ, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ರಾಮಚಂದ್ರ, ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X