Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.25ರಂದು ಬ್ಯಾರೀಸ್ ಗ್ರೂಪ್ ನಿಂದ...

ಸೆ.25ರಂದು ಬ್ಯಾರೀಸ್ ಗ್ರೂಪ್ ನಿಂದ 'ಗ್ರೀನ್ ವಾಕಥಾನ್'

ವಾರ್ತಾಭಾರತಿವಾರ್ತಾಭಾರತಿ23 Sept 2021 11:26 AM IST
share
ಸೆ.25ರಂದು ಬ್ಯಾರೀಸ್ ಗ್ರೂಪ್ ನಿಂದ ಗ್ರೀನ್ ವಾಕಥಾನ್

ಮಂಗಳೂರು, ಸೆ.23: ಬ್ಯಾರೀಸ್ ಗ್ರೂಪ್ ವತಿಯಿಂದ ಸೆ.25ರಂದು 'ಗ್ರೀನ್ ವಾಕಥಾನ್-2021' ಆಯೋಜಿಸಲಾಗಿದೆ ಎಂದು ಬ್ಯಾರೀಸ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ(ಬಿಐಟಿ) ಪ್ರಾಂಶುಪಾಲ ಡಾ.ಎಸ್.ಐ. ಮಂಜೂರು ಬಾಷಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಿಐಟಿ ಹಾಗೂ ಬ್ಯಾರೀಸ್ ಎನ್ವಿರೋ ಅರ್ಕಿಟೆಕ್ಚರ್ ಡಿಸೈನ್ ಸ್ಕೂಲ್ ( ಬೀಡ್ಸ್)ಗಳು ವಿಶ್ವ ಹಸಿರು ಕಟ್ಟಡ ಸಪ್ತಾಹದ ಪ್ರಯುಕ್ತ ಈ ‘ಗ್ರೀನ್ ವಾಕಥಾನ್’ ಹಮ್ಮಿಕೊಂಡಿದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಆಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ನಡೆಯುವ 5 ಕಿ.ಮೀ. ಉದ್ದದ ವಾಕಥಾನ್ ಗೆ ಅಂದು ಬೆಳಗ್ಗೆ 7ಕ್ಕೆ ಮಂಗಳೂರು ವಿವಿಯ ಉಪ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹಸಿರು ನಿಶಾನೆ ತೋರುವರು. ಬಿಐಟಿ ಕ್ಯಾಂಪಸ್‌ನಲ್ಲಿ ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಗಿಡ ನೆಡುವುದರೊಂದಿಗೆ ವಾಕಥಾನ್ ಸಮಾರೋಪಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸುಸ್ಥಿರ ಅಭಿವೃದ್ಧಿ, ಇಂಧನ ಉಳಿತಾಯ, ಮರುಬಳಕೆ ಮತ್ತು ಸ್ವಚ್ಛ ಹಾಗೂ ಹಸಿರು ನಗರವನ್ನು ಉತ್ತೇಜಿಸುವ ಮೂಲಕ ಜಾಗೃತಿ ಮೂಡಿಸುವುದು ಈ ‘ಗ್ರೀನ್ ವಾಕಥಾನ್’ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.

ಬ್ಯಾರೀಸ್ ಗ್ರೂಪ್‌ ಇನ್ನೋಳಿಯ ಬ್ಯಾರಿಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬೀಡ್ಸ್) ಮತ್ತು ಬಿಐಟಿ ಪಾಲಿಟೆಕ್ನಿಕ್ ಸಂಸ್ಥೆಗಳನ್ನು ಹೊಂದಿದೆ.

ಬ್ಯಾರೀಸ್ ಗ್ರೂಪ್‌ನ ದೃಷ್ಟಿಕೋನವು ಪ್ರಗತಿಪರ, ಶಾಂತಿಯುತ ಹಸಿರು ಜಗತ್ತಿಗೆ ಗಣನೀಯ ಕೊಡುಗೆ ನೀಡುವುದರೊಂದಿಗೆ ತಂತ್ರಜ್ಞಾನದ ಪ್ರತಿಯೊಂದು ಕ್ಷೇತ್ರದಲ್ಲಿ ನಾಯಕರನ್ನು ಸೃಷ್ಟಿಸುವುದು. ಬ್ಯಾರೀಸ್ ಕ್ಯಾಂಪಸ್  ಸುಸ್ಥಿರ ಹಸಿರು ದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ ಹಾಗೂ ಪ್ರಕೃತಿಯ ಮತ್ತು ಸಂಸ್ಕೃತಿಯು ಒಟ್ಟಾಗಿ ಸೇರಿಕೊಳ್ಳುವ ಭವಿಷ್ಯದ ಕಲ್ಪನೆಯನ್ನು ಪರಿಚಯಿಸುತ್ತದೆ.

ವಿಶ್ವದಲ್ಲಿ ಬದಲಾಗುತ್ತಿರುವ ನಿರಂತರ ಹವಾಮಾನ ಬದಲಾವಣೆ, ಮನುಕುಲಕ್ಕೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದಾಗಿ ಭೂಮಿಯನ್ನು ರಕ್ಷಿಸುವ ಮಾನವನ ಜವಾಬ್ದಾರಿಗಳು ಹಲವಾರು ಪಟ್ಟು ಹೆಚ್ಚಾಗಿದೆ. ಇಂಧನ ಸಂರಕ್ಷಣೆ,  ಇಂಧನ ಉಳಿಸುವ ತಂತ್ರಜ್ಞಾನಗಳು ಮತ್ತು ಮೂಲಸೌಕರ್ಯಗಳ ಬಳಕೆ; ನವೀಕರಿಸಬಹುದಾದ ಇಂಧನ ಮೂಲಗಳನ್ನು ಹುಡುಕುವ ಪ್ರಯತ್ನಗಳು, ಹಸಿರು ಕಟ್ಟಡಗಳಲ್ಲಿನ ಅಂತರ್ಗತವಾಗಿರುವ ಅನೇಕ ಸಸ್ಯಗಳು / ಮರಗಳು, ಜಾಗತಿಕ ತಾಪಮಾನ ಕಡಿಮೆ ಮಾಡುವುದು, ಗ್ರೀನ್‌ ಹೌಸ್‌ ಗ್ಯಾಸ್‌  ಹೊರಸೂಸುವಿಕೆಯನ್ನು ಕಡಿಮೆ ಮಾಡುವ ನೀತಿ, ಹೀಗೆ ಅನೇಕ ಭವಿಷ್ಯದಲ್ಲಿ ಉತ್ತಮ ಕಾಳಜಿ ಮತ್ತು ಸಮರ್ಥನೀಯವಾಗಿರಬೇಕು ಎಂಬುದು ಬ್ಯಾರೀಸ್ ಗ್ರೂಪ್ ನ ಆಶಯವಾಗಿದೆ ಎಂದು‌ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ  ಬೀಡ್ಸ್ ಪ್ರಾಂಶುಪಾಲ  ಅರ್. ಅಶೋಕ್ ಎಲ್.ಪಿ. ಮೆಂಡೋನ್ಸಾ,  ಬಿಐಟಿ-ಮಂಗಳೂರು ಇದರ ಇಸಿಇ ವಿಭಾಗದ ಮುಖ್ಯಸ್ಥ ಡಾ.ಅಬ್ದುಲ್ಲಾ ಗುಬ್ಬಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X