Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕರು, ಸಂಸದರ ಸಿಡಿಗಳಿವೆ, ಅಗತ್ಯ...

ಶಾಸಕರು, ಸಂಸದರ ಸಿಡಿಗಳಿವೆ, ಅಗತ್ಯ ಸಂದರ್ಭದಲ್ಲಿ ಹೊರಬಿಡುತ್ತೇನೆ: ಮಹೇಶ್ ಶೆಟ್ಟಿ ತಿಮರೋಡಿ

‘‘ಡಿವಿ ಸದಾನಂದ ಗೌಡರಿಗೆ ಸೌಜನ್ಯಾಳ ಶಾಪ ತಟ್ಟಿದೆ’’

ವಾರ್ತಾಭಾರತಿವಾರ್ತಾಭಾರತಿ23 Sept 2021 6:56 PM IST
share
ಶಾಸಕರು, ಸಂಸದರ ಸಿಡಿಗಳಿವೆ, ಅಗತ್ಯ ಸಂದರ್ಭದಲ್ಲಿ ಹೊರಬಿಡುತ್ತೇನೆ: ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ, ಸೆ.23: ಹಿಂದುತ್ವದ ಹೆಸರಿನಲ್ಲಿ ಅಧಿಕಾರ ಪಡೆದು ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ಬಿಜೆಪಿ ಸರಕಾರ ದಾಳಿ ಮಾಡುತ್ತಿದೆ. ಶಾಸಕರು ಸಂಸದರು ಇದನ್ನು ನೋಡಿ ಮೌನವಾಗಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂತಹ ಹೇಯ ಕೃತ್ಯ ನಡೆದಿಲ್ಲ ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಖಂಡಿಸಿದ್ದಾರೆ.

ದೇವಾಲಯ ಧ್ವಂಸ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಾಲೂಕು ಮಿನಿ ವಿಧಾನ ಸೌಧದ ಎದುರು ಗುರುವಾರ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಧಾರ್ಮಿಕ ಕೇಂದ್ರಗಳನ್ನು ಯಾರೇ ಒಡೆದರೂ ಅವರು ಭಯೋತ್ಪಾದಕರಾಗಿದ್ದಾರೆ. ಬಿಜೆಪಿಗರಿಗೆ ಹಿಂದುತ್ವ ಕೇವಲ ಅಧಿಕಾರಕ್ಕಾಗಿ ಮಾತ್ರ ಇರುವುದಾಗಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರಿಗಳು, ಅತ್ಯಾಚಾರಿಗಳು ತುಂಬಿದ್ದಾರೆ. ಕಡಿಮೆಯಾಗಿರುವುದಕ್ಕೆ ಹೊರಗಿನಿಂದಲೂ ತರುತ್ತಿದ್ದಾರೆ. ಅಧಿಕಾರಕ್ಕೆ ಬಂದು ಎರಡು ವರ್ಷದಲ್ಲಿ ಹಲವು ಶಾಸಕರು ಕೋಟ್ಯಾಧೀಶರಾಗಿದ್ದಾರೆ. ಇದು ಹೇಗೆ ಸಾಧ್ಯವಾಗಿದೆ ಎಂಬುದು ತಿಳಿದಿದೆ. ಶಾಸಕರು ಸಂಸದರ ಸಿಡಿಗಳಿವೆ. ಅದನ್ನು ಅಗತ್ಯ ಸಂದರ್ಭದಲ್ಲಿ ಹೊರಬಿಡುತ್ತೇನೆ ಎಂದು ಅವರು ಎಚ್ಚರಿಸಿದರು.

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಸರಕಾರ ದೇಶದ ಸಂಪತ್ತನ್ನು ಮಾರುತ್ತಿದ್ದಾರೆ ಮುಂದಿನ ದಿನಗಳಲ್ಲಿ ಇವರು ದೇಶವನ್ನು ಸರ್ವನಾಶ ಮಾಡುವ ಅಪಾಯವಿದೆ ಎಂದರು. ಹಿಂದೂ ಧರ್ಮದ ಯಾವುದೇ ಪವಿತ್ರ ಸ್ಥಾನಗಳನ್ನು ಮುಟ್ಟಲು ಬಂದರೆ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಆರೆಸ್ಸೆಸ್‌ಗೆ ಸಂಘದ ಕಾರ್ಯಕರ್ತರು ಯಾರೂ ಮುಖ್ಯಮಂತ್ರಿಯಾಗಲು ಸಿಗಲಿಲ್ಲವೇ ಎಂದು ಪ್ರಶ್ನಿಸಿದ ತಿಮರೋಡಿ, ಬೊಮ್ಮಾಯಿ ಒಬ್ಬ ಅವಿವೇಕಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಕಾರ್ಯಕ್ರಮಕ್ಕೆ ಮೊದಲು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ತಾಲೂಕು ಮಿನಿ ವಿಧಾನ ಸೌದದ ವರೆಗೆ ಬೃಹತ್ ಪ್ರತಿಭಟನಾ ರಾಲಿ ನಡೆಯಿತು.

ಪ್ರತಿಭಟನೆಯ ನೇತೃತ್ವವನ್ನು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಗೌರವಾಧ್ಯಕ್ಷ ಹರೀಶ್ ಬರೆಮೇಲು, ಅಧ್ಯಕ್ಷ ಅನಿಲ್ ಕುಮಾರ್, ಕಾರ್ಯದರ್ಶಿ ಸಂದೀಪ್, ಸಂಚಾಲಕ ಮನೋಜ್ ಕುಂಜರ್ಪ, ಪ್ರಮುಖರಾದ ಪ್ರಜ್ವಲ್, ವೆಂಕಪ್ಪ ಕೋಟ್ಯಾನ್, ಮೊದಲಾದವರು ವಹಿಸಿದ್ದರು.

ಬಾಲಕಿ ಸೌಜನ್ಯಾಳ ಅತ್ಯಾಚಾರ- ಕೊಲೆಯಾದಾಗ ಡಿ.ವಿ.ಸದಾನಂದ ಗೌಡ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅಂದು ಅವರು ಅನ್ಯಾಯಕ್ಕೆ ಒಳಗಾದ ಬಾಲಕಿಯ ಪರವಾಗಿ ನಿಲ್ಲದೆ ಅತ್ಯಾಚಾರಿಗಳ ಪರವಾಗಿ ನಿಂತಿದ್ದರು. ಸೌಜನ್ಯಾಳ ಶಾಪ ಡಿವಿಗೆ ತಾಗಿದೆ, ಈಗ ಅವರು ಬೀದಿಯಲಿ ನಿಂತಿದ್ದಾರೆ.
-ಮಹೇಶ್ ಶೆಟ್ಟಿ ತಿಮರೋಡಿ , ಸ್ಥಾಪಕಾಧ್ಯಕ್ಷ, ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X