Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ...

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Sept 2021 9:04 PM IST
share
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ  ಸೂಚನೆ

ಬೆಂಗಳೂರು, ಸೆ.23: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 

ಗುರುವಾರ ವಿಧಾನಸೌಧದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಅಭಯಾರಣ್ಯ, ಅರಣ್ಯ ಕಾಯ್ದೆ ಹಾಗೂ ಸಿ ಮತ್ತು ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸಂಬಂಧ ಹೈಕೋರ್ಟ್ ತಡೆಯಾಜ್ಞೆ ನೀಡಿ ಸೂಚಿಸಿರುವಂತೆ ಅನುಸೂಚಿತ ಮೀಸಲು ಅರಣ್ಯ ಪ್ರದೇಶ ಡಿನೋಟಿಫಿಕೇಷನ್ ನಿರ್ಧಾರ ಕೈಗೊಳ್ಳುವ ಮುನ್ನ ಕೇಂದ್ರ ಸರಕಾರದ ಅನುಮತಿ ಅಗತ್ಯವಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ರಚಿಸಿದ್ದ ಟಾಸ್ಕ್ ಪೋರ್ಸ್ ಕ್ರಿಯಾಶೀಲಗೊಳಿಸಲು ಟಾಸ್ಕ್ ಫೋರ್ಸ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.  

ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಹೊಸ ಸಮೀಕ್ಷೆಯನ್ನು ನಡೆಸಬೇಕಿದ್ದು, ಈ ಕಾರ್ಯವನ್ನು 3-5 ತಿಂಗಳೊಳಗಾಗಿ ಮುಕ್ತಾಯ ಮಾಡಿ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಬೇಕು. ಇದಕ್ಕಾಗಿ ವಿಶೇಷ ಜಿಲ್ಲಾಧಿಕಾರಿ, ಅರಣ್ಯ ವ್ಯವಸ್ಥಾಪನಾಧಿಕಾರಿಗಳನ್ನು ತಕ್ಷಣವೇ ನೇಮಿಸಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದರು. 

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿಗಳನ್ನು ಪುನರ್ ನಿಗದಿಪಡಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಶಿವಮೊಗ್ಗ ನಗರದ ಪ್ರಮುಖ ಭಾಗಗಳು ಸೇರಿದಂತೆ ಜನವಸತಿ ಹಾಗೂ ಸರಕಾರಿ ಕಟ್ಟಡಗಳಿರುವ ಪ್ರದೇಶಗಳು ಅಭಯಾರಣ್ಯದ ವ್ಯಾಪ್ತಿಗೆ ಬರುತ್ತಿದ್ದು, ಗಡಿ ಪುನರ್ ನಿಗದಿಪಡಿಸುವುದರಿಂದ ಸಮಸ್ಯೆ ಬಗೆಹರಿಸಬಹುದು ಎಂದರು.

ಈ ಬಗ್ಗೆ ಈಗಾಗಲೇ ಕ್ರಮ ಜರುಗಿಸಲಾಗಿದ್ದು, ವನ್ಯಜೀವಿ ಪ್ರದೇಶವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಗಡಿ ನಿಗದಿಪಡಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು. 

ಕಲ್ಲು ಗಣಿಗಾರಿಕೆ: ಕಲ್ಲು ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗಿದೆ ಎಂದು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬಾರದ ಪರವಾನಿಗೆ ಹೊಂದಿರುವ ಕಲ್ಲು ಗಣಿಕಾರಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಸೂಚಿಸಿದರು. ವಾರದೊಳಗೆ ಸಾಧ್ಯವಿರುವಲ್ಲಿ ಕಲ್ಲು ಗಣಿಗಾರಿಕೆಯನ್ನು ಪ್ರಾರಂಭಿಸಲು ಅನುಮತಿ ನೀಡಲು ಸೂಚಿಸಿದರು. 

ಸಂರಕ್ಷಿತ ಅರಣ್ಯ: ಸಂರಕ್ಷಿತ ಅರಣ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಲು ಮುಖ್ಯಮಂತ್ರಿ ಸೂಚಿಸಿದರು. ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ತಿಳಿಸಿದರು. 
ಶಿವಮೊಗ್ಗ, ಶಿಕಾರಿಪುರ–ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಅರಣ್ಯ ಇಲಾಖೆ ಯೋಜನೆಗಳ ಪ್ರಗತಿಯ ವೇಗ ಹೆಚ್ಚಿಸುವ ಬಗ್ಗೆ ಯಡಿಯೂರಪ್ಪ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.  ಶಿವಮೊಗ್ಗ ಜಿಲ್ಲೆಗೆ ವಿಶೇಷ ಅರಣ್ಯ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿ ಸೂಚಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಅರಣ್ಯ ಭೂಮಿ ಗುತ್ತಿಗೆ ನವೀಕರಣಕ್ಕೆ ಅರಣ್ಯ ಮತ್ತು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. 

ಸಭೆಯಲ್ಲಿ ಸಚಿವರಾದ ಅರಬೈಲ್ ಶಿವರಾಮ್, ಆರಗ ಜ್ಞಾನೇಂದ್ರ, ಉಮೇಶ್ ಕತ್ತಿ, ಸುನಿಲ್ ಕುಮಾರ್, ಎಂ.ಎಸ್.ಐ.ಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುμÁರ್ ಗಿರಿನಾಥ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X