Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೈಸ್ತೇನಿಯಾಗ್ರಾವಿಸ್ ಅಪರೂಪದ ಕಾಯಿಲೆಗೆ...

ಮೈಸ್ತೇನಿಯಾಗ್ರಾವಿಸ್ ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡಿದ ಮಂಗಳೂರು ಕೆಎಂಸಿ ಆಸ್ಪತ್ರೆ

ವಾರ್ತಾಭಾರತಿವಾರ್ತಾಭಾರತಿ23 Sept 2021 9:36 PM IST
share
ಮೈಸ್ತೇನಿಯಾಗ್ರಾವಿಸ್ ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡಿದ ಮಂಗಳೂರು ಕೆಎಂಸಿ ಆಸ್ಪತ್ರೆ

ಮಂಗಳೂರು: ತೀವ್ರ ಉಸಿರಾಟದ ತೊಂದರೆಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ 54 ವರ್ಷದ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಹೊನ್ನಾವರದ ಆಸ್ಪತ್ರೆಯೊಂದರಲ್ಲಿ ಪರೀಕ್ಷೆ ನಡೆಸಿದಾಗ ರೋಗಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದರೂ ಆರೋಗ್ಯ ಸುಧಾರಿಸಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೆಎಂಸಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ವಿಭಾಗದ ಕನ್ಸಲ್ಟಂಟ್ ಡಾ.ಹರೂನ್ ಎಚ್., ಇಂಟೆನ್ಸಿವಿಸ್ಟ್ ಡಾ.ದತ್ತಾತ್ರಯ ಪ್ರಭು ಹಾಗೂ ತುರ್ತು ಚಿಕಿತ್ಸಾ ತಂಡವು ರೋಗಿಯ ಆರೋಗ್ಯ ಸುಧಾರಣೆಗೆ ಅಗತ್ಯವಿರುವ ಚಿಕಿತ್ಸೆ ನೀಡಿತು. ಈ ಬಗ್ಗೆ ಮಾಹಿತಿ ನೀಡಿದ ಡಾ.ಹರೂನ್ ಎಚ್. ಅವರು, ‘ಕೆಎಂಸಿ ಆಸ್ಪತ್ರೆಗೆ ದಾಖಲಾದಾಗ ರೋಗಿಯು ಅತಿ ವೇಗವಾಗಿ ಉಸಿರಾಡುತ್ತಿದ್ದರು. ಹೀಗಾಗಿ ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿತ್ತು. ಇದರೊಂದಿಗೆ ಅವರು ತೀವ್ರ ಸ್ವರೂಪದ ಕೋವಿಡ್ ನ್ಯುಮೋನಿಯಾದಿಂದ ಬಳಲುತ್ತಿದ್ದುದರಿಂದ ಅದಕ್ಕೆ ಸಂಬಂಧಿಸಿದಂತೆಯೂ ಚಿಕಿತ್ಸೆ ನೀಡಲಾಯಿತು ಎಂದರು.

ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಸೈಟೋಕಿನ್ ಸ್ಟಾರ್ಮ್ ಸಮಸ್ಯೆಗೆ ತುತ್ತಾಗುವ ಸಾಧ್ಯತೆಯಿದ್ದು, ವೆಂಟಿಲೇಟರ್ ನೆರವಿನ ಅಗತ್ಯ ಕೂಡ ಇತ್ತು. ನಿರಂತರವಾದ ಚಿಕಿತ್ಸೆ ಮತ್ತು ವಿಶೇಷ ಕಾಳಜಿಯಯಿಂದಾಗಿ ರೋಗಿಯನ್ನು ವೆಂಟಿಲೇಟರ್ ಸಪೋರ್ಟ್‌ನಿಂದ ಹೊರಗೆ ಕರೆತರಲಾಯಿತು. ಆದರೆ, ಕೋವಿಡ್‌ನಿಂದಾಗಿ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಅಲ್ಲದೆ, ಆಹಾರ, ನೀರು ನುಂಗಲು ಆಗದೆ ಬಹಳ ಕಷ್ಟ ಅನುಭವಿಸುತ್ತಿದ್ದರು ಎಂದು ವಿವರಿಸಿದರು.

ಮಂಗಳೂರಿನ ಕೆಎಂಸಿ ಹಾಸ್ಪಿಟಲ್‌ನ ಕನ್ಸಲ್ಟಂಟ್- ನರಶಾಸ್ತ್ರಜ್ಞ (ನ್ಯೂರೋಲಾಜಿಸ್ಟ್) ಡಾ.ರೋಹಿತ್ ಪೈ ಮಾತನಾಡಿ, ನೀರನ್ನು ಕುಡಿಯಲು ಅಥವಾ ನುಂಗಲು ತೊಂದರೆಯಾಗುತ್ತಿದೆ ಎಂದು ರೋಗಿಯು ನಮ್ಮ ಬಳಿ ಹೇಳಿದಾಗ ನರಸ್ನಾಯುವಿನ (ನ್ಯೂರೋಮಸ್ಕ್ಯುಲರ್) ಸಮಸ್ಯೆ ಇರಬಹುದು ಎಂದು ನಾವು ಊಹಿಸಿದೆವು. ಅಲ್ಲದೆ, ಅವರು ಕೋವಿಡ್ ಸಂಬಂಧಿ ಮೈಸ್ತೇನಿಯಾಗ್ರಾವಿಸ್‌ನಿಂದ ಕೂಡ ಬಳಲುತ್ತಿದ್ದರು. ಹೀಗಾಗಿ ಮೈಸ್ತೇನಿಯಾಗ್ರಾವಿಸ್ ಸಮಸ್ಯೆಗೆ ಚಿಕಿತ್ಸೆ ನೀಡಲು ಆರಂಭಿಸಿದಾಗ ರೋಗಿಯಲ್ಲಿ ಸಾಕಷ್ಟು ಚೇತರಿಕೆ ಲಕ್ಷಣಗಳು ಕಂಡುಬಂದವು ಎಂದು ಹೇಳಿದರು.

ಕೆಎಂಸಿ ಹಾಸ್ಪಿಟಲ್‌ನ ತುರ್ತುಚಿಕಿತ್ಸೆ (ಕ್ರಿಟಿಕಲ್ ಕೇರ್) ವಿಭಾಗದ ಮುಖ್ಯಸ್ಥ ಡಾ.ದತ್ತಾತ್ರಯ ಪ್ರಭು ಮಾತನಾಡಿ, ಕೋವಿಡ್ ಗುಣವಾದ ನಂತರ ಕಾಣಿಸಿಕೊಳ್ಳುವ ಇನ್ಫೆಕ್ಷನ್ (ಸೋಂಕು) ನಿಂದ ಉಂಟಾಗುವ ನರಮಂಡಲ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಈ ರೀತಿಯ ಇನ್ನೂ 2 ಕೇಸ್‌ಗಳು ಐಸಿಯುನಲ್ಲಿ ಇದ್ದವು. ವೆಂಟಿಲೇಟರ್‌ನಲ್ಲಿ ಇರುವ ರೋಗಿಗಳಲ್ಲಿ ಇಂತಹ ಸಮಸ್ಯೆಗಳ ಇರುವಿಕೆಯನ್ನು ಕಂಡು ಹಿಡಿಯುವುದು ಕಷ್ಟದ ಕೆಲಸ. ಆದರೆ, ಇಲ್ಲಿ ಗಮನಿಸಬೇಕಾಗಿರುವ ಪ್ರಮುಖ ಅಂಶವೇನೆಂದರೆ ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆ ಇರುವುದು ದೃಢಪಟ್ಟ ಬಳಿಕ ರೋಗಿಗೆ ಅಗತ್ಯವಿದ್ದ ಎಲ್ಲ ರೀತಿಯ ಚಿಕಿತ್ಸೆ ನೀಡಲಾಯಿತು ಎಂದು ಮಾಹಿತಿ ನೀಡಿದರು.

ಈ ಕುರಿತು ಮಾತನಾಡಿದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಪ್ರಾದೇಶಿಕ ಮುಖ್ಯಸ್ಥರು ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಆನಂದ್ ವೇಣುಗೋಪಾಲ್, ರೋಗಿಯು ಕೋವಿಡ್‌ಗೆ ಸಂಬಂಧಿಸಿದ ಅತ್ಯಂತ ಅಪರೂಪದ ಮತ್ತು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದುದರಿಂದ ಇದೊಂದು ಕಠಿಣ ಮತ್ತು ಸವಾಲಿನ ಕೇಸ್ ಆಗಿತ್ತು. ರೋಗಿಗೆ ಐಸಿಯು ಮತ್ತು ವೆಂಟಿಲೇಟರ್ ನೆರವಿನ ಅಗತ್ಯವಿತ್ತು. ರೋಗಿಯು ಎದುರಿಸುತ್ತಿದ್ದ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಗುರುತಿಸಿ, ಕೂಡಲೇ ಸ್ಪಂದಿಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ರೋಗಿಯನ್ನು ಅಪಾಯದಿಂದ ಪಾರು ಮಾಡಲಾಯಿತು. ರೋಗಿಯನ್ನು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಅವರ ಪ್ರಾಣ ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಎದುರಾದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರ ಮಹತ್ವ ಎಷ್ಟು ಎಂಬುದನ್ನು ಈ ಪ್ರಕರಣವು ತೋರಿಸಿಕೊಟ್ಟಿದೆ ಎಂದು ತಿಳಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X