ಅಕ್ಕಿ ಸಾಗಾಟ ವಿಚಾರಿಸಿದಕ್ಕೆ ಹಲ್ಲೆ: ದೂರು
ಮಂಗಳೂರು: ನಗರದ ಹೊರವಲಯದ ಪೆರ್ಮಂಕಿಯ ದರಿಬಾಗಿಲಲ್ಲಿರುವ ನ್ಯಾಯಬೆಲೆ ಅಂಗಡಿಯಿಂದ ಅಕ್ರಮ ಎನ್ನಲಾದ ಅಕ್ಕಿ ಮೂಟೆಗಳನ್ನು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವ ಬಗ್ಗೆ ವಿಚಾರಿಸಿದ್ದಕ್ಕೆ ಇಬ್ಬರು ಹಲ್ಲೆ ನಡೆಸಿರುವುದಾಗಿ ದಿನೇಶ್ ಎಂಬವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನ್ಯಾಯಬೆಲೆ ಅಂಗಡಿ ವಿತರಕ ಮತ್ತು ಗಾಡಿ ಚಾಲಕ ತಡೆದು ದೂಡಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಹನ ಚಲಾಯಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Next Story





