ಉಡುಪಿ: ಸೆ.30ರಂದು ಉದ್ಯೋಗಮೇಳ
ಉಡುಪಿ, ಸೆ.23:ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸೆ.30ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ವಿವಿಧ ಕಂಪೆನಿ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸೆಸೆಲ್ಸಿ, ಪಿಯುಸಿ, ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಳಿಗೆ ಮೊಬೈಲ್ ಸಂ: 9945856670 ಸಂಪರ್ಕಿಸುವಂತೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಭೇಟಿ ನೀಡುವಂತೆ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





