Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿವೇಶನದ ಬಳಿಕ ಉಳ್ಳಾಲಕ್ಕೆ ಭೇಟಿ ನೀಡಿ...

ಅಧಿವೇಶನದ ಬಳಿಕ ಉಳ್ಳಾಲಕ್ಕೆ ಭೇಟಿ ನೀಡಿ ಪರಿಶೀಲನೆ: ಸಚಿವ ಭೈರತಿ ಬಸವರಾಜ

ವಾರ್ತಾಭಾರತಿವಾರ್ತಾಭಾರತಿ23 Sept 2021 10:35 PM IST
share
ಅಧಿವೇಶನದ ಬಳಿಕ ಉಳ್ಳಾಲಕ್ಕೆ ಭೇಟಿ ನೀಡಿ ಪರಿಶೀಲನೆ: ಸಚಿವ ಭೈರತಿ ಬಸವರಾಜ

ಬೆಂಗಳೂರು, ಸೆ.23: ವಿಧಾನಮಂಡಲದ ಅಧಿವೇಶನ ಮುಗಿದ ನಂತರ ಮಂಗಳೂರು ನಗರದ ಉಳ್ಳಾಲದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.

ಗುರುವಾರ ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ಅಧಿವೇಶನ ಮುಗಿದ ನಂತರ ಯಾವುದಾದರೊಂದು ದಿನ ಉಳ್ಳಾಲಕ್ಕೆ ಭೇಟಿ ನೀಡಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳ ವೀಕ್ಷಣೆ ಮಾಡಿ ಅದರ ಸಾಧಕ-ಭಾದಕಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಲಾಗುವುದು ಎಂದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 8 ವಲಯಗಳಲ್ಲಿ ಮಲೀನ ನೀರು ಶುದ್ಧೀಕರಣ ಘಟಕ ಮತ್ತು ತ್ಯಾಜ್ಯ ಗುಂಡಿಗಳು ಒಳಗೊಂಡಂತೆ ಒಳಚರಂಡಿ ವ್ಯವಸ್ಥೆ ನಿರ್ಮಿಸುವ ವ್ಯವಸ್ಥೆ ಅವೈಜ್ಞಾನಿಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮತ್ತು ಇತರೆ ಸದಸ್ಯರು ಸೆ.16 ರಂದು ನಿಯಮ 330ರ ಅಡಿಯಲ್ಲಿ ಚರ್ಚೆಗೆ ತಂದಾಗ ಸಚಿವ ಬಸವರಾಜ ಉತ್ತರ ನೀಡಿದ್ದರು. 

ಆದರೆ, ಇದರ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ಅವಶ್ಯಕತೆ ಇದೆ ಎಂದು ಸದಸ್ಯರು ಪಟ್ಟು ಹಿಡಿದಿದ್ದರು. ಅದರಂತೆ, ಇಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಶಾಸಕರ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ವಿಧಾನಸಭಾರಾದ ಸದಸ್ಯ ಯು.ಟಿ.ಖಾದರ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಕೆ.ಎ.ತಿಪ್ಪೇಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಎಸ್.ಎಲ್.ಭೋಜೆಗೌಡ, ನರಸಿಂಹ ನಾಯಕ್, ರಮೇಶ್‍ಗೌಡ, ನಸೀರ್ ಅಹ್ಮದ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎನ್.ಜಯರಾಂ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಟಿ.ರೇಜು, ಮುಖ್ಯ ಅಭಿಯಂತರಾದ ಸಿದ್ದ ನಾಯಕ್, ಕೇಶವ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X