Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್ ವೈಗೆ 'ಅತ್ಯುತ್ತಮ ಶಾಸಕ...

ಬಿಎಸ್ ವೈಗೆ 'ಅತ್ಯುತ್ತಮ ಶಾಸಕ ಪ್ರಶಸ್ತಿ' ನೀಡಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ವಾರ್ತಾಭಾರತಿವಾರ್ತಾಭಾರತಿ24 Sept 2021 3:03 PM IST
share
ಬಿಎಸ್ ವೈಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿದ ಲೋಕಸಭೆ ಸ್ಪೀಕರ್  ಓಂ ಬಿರ್ಲಾ

ಬೆಂಗಳೂರು, ಸೆ.24: ಲೋಕಸಭೆಯ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತುತ ಸಾಲಿನಿಂದ ನೀಡಲು ನಿರ್ಧರಿಸಿದ್ದು, ಮೊದಲ ಸಾಲಿನ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸದನದ ಹಿರಿಯ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಶುಕ್ರವಾರ ವಿಧಾನಸಭೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಪ್ರಜಾಪ್ರಭುತ್ವ: ಸಂಸದೀಯ ಮೌಲ್ಯಗಳ ರಕ್ಷಣೆ” ಕುರಿತು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಕುರಿತು ಮಾತನಾಡಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದೀಯ ಕಾರ್ಯಚಟುವಟಿಕೆಯನ್ನು ಪ್ರೋತ್ಸಾಹಿಸಲು ಜೀವಮಾನದಲ್ಲಿ ಒಮ್ಮೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುವುದು ಎಂದು ತಿಳಿಸಿದರು.

ವಿಧಾನಸಭೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದ್ದು, ಮಂತ್ರಿಗಳಾದವರು ಈ ಪ್ರಶಸ್ತಿಗೆ ಅನ್ವಯಿಸುವುದಿಲ್ಲ, ಕೇವಲ ಶಾಸಕರನ್ನು ಮಾತ್ರ ಪರಿಗಣಿಸಲಾಗುತ್ತದೆ. ಇಂತಹ ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಬಿ.ಎಸ್. ಯಡಿಯೂರಪ್ಪ ಆಯ್ಕೆಯಾಗಿದ್ದು ಪ್ರಶಸ್ತಿಯ ಹಿರಿಮೆ ಹೆಚ್ಚಿಸಿದೆ ಎಂದು ಅವರು ಹೇಳಿದರು.

ಯಡಿಯೂರಪ್ಪ ರೈತನಾಯಕರಾಗಿ, ಜನತೆಯ ಆಗುಹೋಗುಗಳಿಗೆ ಸ್ಪಂದಿಸಿದ, ಸಂಸದೀಯ ವ್ಯವಸ್ಥೆಯಲ್ಲಿ 8 ಬಾರಿ ಗೆದ್ದು ಬಂದಿದ್ದಾರೆ. ರೈತರ ಸಾಲ ಮನ್ನಾ ಇನ್ನಿತರ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸದನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನಸೇವೆಯನ್ನು ಜನಾರ್ಧನ ಸೇವೆ ಎಂಬಂತೆ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಸಂಸದೀಯ ಚಟುವಟಿಕೆಗಳಿಗೆ  ಪ್ರೋತ್ಸಾಹ ನೀಡಬೇಕೆಂದು ಸಮಿತಿ ರಚನೆಗೊಂಡಿತು. ಸಮಿತಿಯ ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ, ಸದಸ್ಯರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವ ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರುಗಳನ್ನೊಳಗೊಂಡ ಸಮಿತಿ ನೀಡಿದ ಅಧಿಕಾರದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸ್ಪೀಕರ್ ಹೇಳಿರು.

ಸಭಾಧ್ಯಕ್ಷರ ಪೀಠದ ಬಳಿ ಯಡಿಯೂರಪ್ಪ ಅವರಿಗೆ ಲೋಕಸಭಾ ಸ್ಪೀಕರ್ ಪ್ರಶಸ್ತಿ ನೀಡುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಜೆ.ಸಿ.ಮಾಧುಸ್ವಾಮಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.


ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ, ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ, ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ. pic.twitter.com/gd2P6gmNuS

— B.S. Yediyurappa (@BSYBJP) September 24, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X