ಉಡುಪಿ: ಶುಕ್ರವಾರ 69 ಮಂದಿಗೆ ಕೊರೋನ ಸೋಂಕು ದೃಢ, ವೃದ್ಧ ಮೃತ್ಯು

ಸಾಂದರ್ಭಿಕ ಚಿತ್ರ
ಉಡುಪಿ, ಸೆ.24: ಜಿಲ್ಲೆಯಲ್ಲಿ ಶುಕ್ರವಾರ 69 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಶುಕ್ರವಾರ ಒಬ್ಬರು ಕೋವಿಡ್ಗೆ ಬಲಿಯಾದರೆ, 112 ಮಂದಿ ಸೋಂಕಿನಿಂದ ಗುಣಮುಕ್ತರಾಗಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 406ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಕಾರ್ಕಳದ 82 ವರ್ಷ ಪ್ರಾಯದ ವೃದ್ಧರೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ಗುಣಲಕ್ಷಣದೊಂದಿಗೆ ತೀವ್ರ ಉಸಿರಾಟ ತೊಂದರೆ ಹಾಗೂ ನ್ಯುಮೋನಿಯಾ ಜ್ವರದಿಂದ ಬಲಳುತಿದ್ದ ಇವರನ್ನು ಸೆ.21ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 472ಕ್ಕೇರಿದೆ.
ದಿನದಲ್ಲಿ ಸೋಂಕು ದೃಢಪಟ್ಟ 69 ಮಂದಿಯಲ್ಲಿ 29 ಮಂದಿ ಪುರುಷರು ಹಾಗೂ 40 ಮಂದಿ ಮಹಿಳೆಯರು. ಇವರಲ್ಲಿ 36 ಮಂದಿ ಉಡುಪಿ ತಾಲೂಕು, 15 ಮಂದಿ ಕುಂದಾಪುರ ಹಾಗೂ 14 ಮಂದಿ ಕಾರ್ಕಳ ತಾಲೂಕಿ ನವರು. ಉಳಿದ ನಾಲ್ವರು ಹೊರಜಿಲ್ಲೆಯವರು. ಇವರಲ್ಲಿ 13 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 56 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ 112 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 75,167ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3381 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,045ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,14,711 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.
4738 ಮಂದಿಗೆ ಲಸಿಕೆ: ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 4738 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 1532 ಮಂದಿ ಮೊದಲ ಡೋಸ್ ಹಾಗೂ 3206 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 910 ಮಂದಿ ಮೊದಲ ಡೋಸ್ ಹಾಗೂ 2531 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 622 ಮಂದಿ ಮೊದಲ ಡೋಸ್ ಹಾಗೂ 675 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 8,88,924 ಮಂದಿ ಮೊದಲ ಡೋಸ್ನ್ನೂ, 3,88,886 ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಎಂದೂ ಅವರು ಹೇಳಿದ್ದಾರೆ.







