ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೈಲುಶಿಕ್ಷೆ

ಉಡುಪಿ, ಸೆ.24: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಜೈಲುಶಿಕ್ಷೆ ವಿಧಿಸಿ ಉಡುಪಿ ಒಂದನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಸೆ.24ರಂದು ಆದೇಶ ನೀಡಿದೆ.
ಚೆರ್ಕಾಡಿ ಗ್ರಾಮದ ಕನ್ನಾರು ಕೋಡಿಯ ನಾಗಪ್ಪ ನಾಯ್ಕ, ಅವರ ಮಗ ರಾಜೇಶ್ ನಾಯ್ಕ ಹಾಗೂ ಉದಯ ನಾಯ್ಕ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳು. ಜಾಗದ ವಿವಾದಕ್ಕೆ ಸಂಬಂಧಿಸಿ ಇವರ ಸಂಬಂಧಿಕರಾದ ವಸಂತ ನಾಯ್ಕ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ತೀವ್ರವಾಗಿ ಹಲೆ್ಲ ನಡೆಸಿ ಜೀವ ಬೆದರಿಕೆಯೊಡ್ಡಿದ್ದರು.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಆಗಿನ ಎಸ್ಸೈ ಗಿರೀಶ್ ಕುಮಾರ್ ದೋಷಾರೋಪಣಾ ಪಟ್ಟಿ ಸಲ್ಲಿಸಿ ದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್‌ಪ್ರಕಾಶ್ ಆರೋಪಿತರ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು ಮೂವರಿಗೆ ಮೂರು ವರ್ಷ ಜೈಲುಶಿಕ್ಷೆ ಮತ್ತು 13,500ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದರು.





