Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ಒಕ್ಕೂಟ...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ಒಕ್ಕೂಟ ವ್ಯವಸ್ಥೆ ಕಗ್ಗೊಲೆಗೆ ಮುಂದಾದ ಕೇಂದ್ರ ಸರಕಾರ: ಪದ್ಮಶ್ರೀ ಡಾ.ಜಿ.ಎನ್.ದೇವಿ

ವಾರ್ತಾಭಾರತಿವಾರ್ತಾಭಾರತಿ24 Sept 2021 11:00 PM IST
share

ಧಾರವಾಡ, ಸೆ. 24: `ಸಂವಿಧಾನದ ಶೆಡ್ಯೂಲ್ 7ರಲ್ಲಿ ಶಿಕ್ಷಣ ಬರುವುದರಿಂದ ಶಿಕ್ಷಣಕ್ಕೆ ಸಂಬಂಧಿಸಿದ ನೀತಿ ನಿರೂಪಣೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಮಾಡಲು ಅವಕಾಶವಿದೆ. ಆದರೆ ಎನ್‍ಇಪಿಯಡಿ ರಾಷ್ಟ್ರೀಯ ಶಿಕ್ಷಾ ಆಯೋಗ ರಚನೆ ಮಾಡುವುದರ ಮೂಲಕ ರಾಜ್ಯಗಳಿಗೆ ಇರುವ ಶಿಕ್ಷಣ ಹಕ್ಕನ್ನು ಕಸಿದುಕೊಳ್ಳುತ್ತದೆ' ಎಂದು ಭಾಷಾ ಶಾಸ್ತ್ರಜ್ಞ, ಪದ್ಮಶ್ರೀ ಡಾ.ಗಣೇಶ ಎನ್.ದೇವಿ ಹೇಳಿದ್ದಾರೆ.

ಶುಕ್ರವಾರ ನಗರದ ಸಾಹಿತ್ಯ ಭವನದಲ್ಲಿ ಶುಕ್ರವಾರ ಎಸ್‍ಎಫ್‍ಐ, ಡಿವೈಎಫ್‍ಐ ಜಿಲ್ಲಾ ಸಮಿತಿಗಳು ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ದುಂಡು ಮೇಜಿನ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, `ಪಾಶ್ಚಿಮಾತ್ಯ ಶಿಕ್ಷಣದ ನಿಯಂತ್ರಣ ಮತ್ತು ಪ್ರಾಚೀನ ಶಿಕ್ಷಣ ವ್ಯವಸ್ಥೆಯನ್ನು ಸನಾತನ ಧರ್ಮದ ಆಧಾರದಲ್ಲಿ ರಾಷ್ಟ್ರಕಟ್ಟುವ ಗುರಿಯನ್ನು ಹೊಂದಿದೆ. ಸನಾತನ ಧರ್ಮ ಎಂದರೆ ಮನುಸ್ಮೃತಿ ಆಧಾರದಲ್ಲಿ ಮಹಿಳೆಯರು ಹಾಗೂ ಶೋಷಿತ ಜನಾಂಗಗಳಿಗೆ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುವ ಹುನ್ನಾರವಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾಶ್ಚಿಮಾತ್ಯ ಜ್ಞಾನವನ್ನು ವಿರೋಧಿಸುವ ಬಿಜೆಪಿ ಶಾಸಕರು, ಸಚಿವರ ಬಹುತೇಕ ಮಕ್ಕಳು ವಿದೇಶಗಳಲ್ಲಿ ಓದುತ್ತಿದ್ದಾರೆ. ಇದು ಕೇವಲ ಬಡವರ ಮಕ್ಕಳನ್ನು ವಿಜ್ಞಾನ ಮತ್ತು ವೈಚಾರಿಕ ಶಿಕ್ಷಣದಿಂದ ದೂರ ಮಾಡುವ ಕುತಂತ್ರವಾಗಿದೆ ಎಂದು ಅವರು ಹರಿಹಾಯ್ದರು.

ಶಿಕ್ಷಣ ತಜ್ಞ ಶಂಕರ ಹಲಗತ್ತಿ ಮಾತನಾಡಿ, ಒಕ್ಕೂಟ ಸರಕಾರವು ಜಾರಿ ಮಾಡುತ್ತಿರುವ ಎನ್‍ಇಪಿಯಲ್ಲಿ ಪ್ರಾಥಮಿಕ ಹಂತದ ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ದಿ ಕಲಿಸುವ ಘೋಷಣೆಯ ಹಿಂದೆ ಬಹುರಾಷ್ಟ್ರೀಯ ಕಾರ್ಪೊರೆಟ್ ಕಂಪೆನಿಗಳಿಗೆ ಕೇವಲ ಕಾರ್ಮಿಕರನ್ನು ಸೃಷ್ಟಿಸುವ ನೀತಿ ಹೊಂದಿದೆ. ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸಬೇಕು ಎನ್ನುವ ಈ ಕಾಯಿದೆಯು ಖಾಸಗಿ ಶಾಲೆಗಳಲ್ಲಿ ಮಾತೃಭಾಷೆಯಲ್ಲಿ ಕಲಿಸಬಹುದು ಎಂದು ಸೂಚಿಸುತ್ತಿರುವುದರ ಕುಟಿಲತೆಯನ್ನು ಅರಿಯಬೇಕು ಎಂದರು.

ಕವಿವಿ ನಿವೃತ್ತ ಕುಲ ಸಚಿವ ಡಾ.ಕೆ.ಆರ್ ದುರ್ಗಾದಾಸ್ ಮಾತನಾಡಿ, ರಾಷ್ಟ್ರದ ಚುಕ್ಕಾಣಿ ಹಿಡಿದಿರುವ ಒಕ್ಕೂಟ ಸರಕಾರವು, ಕೇವಲ ಒಂದು ಪಕ್ಷದ ವಕ್ತಾರನಾಗಿ ಕೆಲಸ ಮಾಡುತ್ತಿದೆಯೆ ವಿನಃ, ದೇಶದ ಸರ್ವ ಜನರನ್ನು ಸಮಾನವಾಗಿ ನೋಡಲು ವಿಷಯದಿಂದ ಹಿಂದೆ ಸರಿದಿದೆ. ಆಳುವವರ ಗುರಿಗೆ ತಕ್ಕಂತೆ ಮಕ್ಕಳನ್ನು ಬಳಸಿಕೊಳ್ಳಲು ಎನ್‍ಇಪಿ ಮೂಲಕ ಯೋಜನೆ ರೂಪಿಸಿರುವರು ಎಂದು ಹೇಳಿದರು.

ದುಂಡು ಮೇಜಿನ ಸಭೆಯ ಅಧ್ಯಕ್ಷತೆಯನ್ನು ಡಿವೈಎಫ್‍ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ವಹಿಸಿದ್ದರು. ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಶಾರದಾ ದಾಬಡೆ, ಶಿಕ್ಷಕರ ಸಂಘಟನೆಯ ರಾಷ್ಟ್ರೀಯ ಮುಖಂಡ ಬಸವರಾಜ ಗುರಿಕಾರ, ವೈದ್ಯ ಗೋಪಾಲ ದಾಬಡೆ, ಎಸ್‍ಎಫ್‍ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ, ಎಐಎಲ್‍ಯು ಮುಖಂಡ ಕೆ.ಎಚ್ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು. ಹಿರಿಯ ಸಾಹಿತಿ ಎಸ್.ನಾಗಕಲಾಲ್, ಸಿಐಟಿಯು ಕಾರ್ಯದರ್ಶಿ ಮಹೇಶ ಪತ್ತಾರ, ಎ.ಎಂ. ಖಾನ್, ಡಾ.ಆರ್.ಎನ್ ಪಾಟೀಲ, ಕೀರ್ತಿವತಿ, ರಾಜೇಶ್ವರಿ ಜೋಷಿ, ಬಿ.ಎನ್. ಪೂಜಾರಿ, ಎಂ.ವಿ.ಗಡಾದ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X