ದ.ಕ. ಜಿಲ್ಲೆ : ಕೋವಿಡ್ಗೆ ಓರ್ವ ಬಲಿ; 127 ಮಂದಿಗೆ ಸೋಂಕು
ಮಂಗಳೂರು, ಸೆ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 127 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಓರ್ವ ಸಾವಿಗೀಡಾಗಿದ್ದಾರೆ. 129 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.1.29ರಷ್ಟಿದೆ.ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,13,855ಕ್ಕೆ ಏರಿಕೆಯಾಗಿದೆ, ಅವರಲ್ಲಿ ಈಗಾಗಲೇ 1,11,145 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1063 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 1647 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story