Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ...

ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರೆಸ್ಸೆಸ್ ನಾಯಕನ ಹೆಸರು ಹೇಳಲಿ: ಸಿದ್ದರಾಮಯ್ಯ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ26 Sept 2021 4:59 PM IST
share
ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರೆಸ್ಸೆಸ್ ನಾಯಕನ ಹೆಸರು ಹೇಳಲಿ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: 'ಆರೆಸ್ಸೆಸ್ ನವರು ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ತಾರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರೆಸ್ಸೆಸ್  ನ ನಾಯಕನ ಹೆಸರನ್ನುಬಿಜೆಪಿ ನಾಯಕರು ಹೇಳಲಿ ನೋಡೋಣ. ಇಷ್ಟೇ ಅವರ ದೇಶಭಕ್ತಿ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,  ''ಮಹಾತ್ಮ ಗಾಂಧಿ, ಬಿ.ಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಯವರಿಗೆ ಮೊದಲು ಆಗ್ತಾ ಇರಲಿಲ್ಲ, ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವ ಹಾಗೆ ನಾಟಕವಾಡಲು ಆರಂಭಿಸಿದ್ದಾರೆ'' ಎಂದು ವಾಗ್ದಾಳಿ ನಡೆಸಿದ್ದಾರೆ. 

''ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಎಲ್ಲಿಯವರೆಗೆ ಬಟ್ಟೆ ಮತ್ತು ಹೊಟ್ಟೆತುಂಬಾ ಅನ್ನ ಸಿಗುವುದಿಲ್ಲೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಅವರು ಹೇಳಿದ್ದರು. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಂದ್ ಮಾಡಿ ರಾಜ್ಯ ಬಿಜೆಪಿ ಸರ್ಕಾರ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದೆ'' ಎಂದು ತಿಳಿಸಿದ್ದಾರೆ. 

ಗಾಂಧೀಜಿಯವರನ್ನು ಗೌರವಿಸುವುದು ಎಂದರೆ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಲ್ಲ. ಅವರ ಚಿಂತನೆಗಳ ಪಾಲನೆ ಹಾಗೂ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಶ್ರಮಿಸುವುದು ಎಂಬುದನ್ನು ರಾಜ್ಯ ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. 

''ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಿಗೆ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದ್ರು. ಇದಕ್ಕೇ ಹೇಳೋದು 'ಮಾಡಿದ್ದುಣ್ಣೋ ಮಹರಾಯ'' ಎಂದು ಲೇವಡಿ ಮಾಡಿದ್ದಾರೆ. 

ಆರ್.ಎಸ್.ಎಸ್ ನವರು ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ತಾರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರ್.ಎಸ್.ಎಸ್ ನ ನಾಯಕನ ಹೆಸರನ್ನು @BJP4India ನಾಯಕರು ಹೇಳಲಿ ನೋಡೋಣ. ಇಷ್ಟೇ ಅವರ ದೇಶಭಕ್ತಿ. 4/7#Gandhinagara

— Siddaramaiah (@siddaramaiah) September 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X