ಉಡುಪಿ ಜಿಲ್ಲೆಯಲ್ಲಿ ಅ.11ರವೆಗೆ ನೈಟ್ ಕರ್ಫ್ಯೂ ಮುಂದುವರಿಕೆ: ಡಿಸಿ ಕೂರ್ಮಾ ರಾವ್

ಉಡುಪಿ, ಸೆ. 26: ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಿರುವುದರಿಂದ ಕೊರೋನ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಆದೇಶವನ್ನು ಅ.11ವರೆಗೆ ವಿಸ್ತರಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸಿಆರ್‌ಪಿಸಿ ಸೆಕ್ಷನ್ 144(3)ರಲ್ಲಿ ನೀಡಿರುವ ಅಧಿಕಾರವನ್ನು ಚಲಾಯಿಸಿ ಈ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳಿಗೆ ಹೊರತು ಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶದಲ್ಲಿ ತಿಳಿಸಿದ್ದಾರೆ.
Next Story





