Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಸರಕಾರದ ವಿರುದ್ಧ ಕೇರ್ನ್ ಸಂಸ್ಥೆ...

ಭಾರತ ಸರಕಾರದ ವಿರುದ್ಧ ಕೇರ್ನ್ ಸಂಸ್ಥೆ ದಾಖಲಿಸಿದ್ದ ದಾವೆಗೆ ನ್ಯೂಯಾರ್ಕ್‌ ಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ26 Sept 2021 8:31 PM IST
share
ಭಾರತ ಸರಕಾರದ ವಿರುದ್ಧ ಕೇರ್ನ್ ಸಂಸ್ಥೆ ದಾಖಲಿಸಿದ್ದ ದಾವೆಗೆ ನ್ಯೂಯಾರ್ಕ್‌ ಕೋರ್ಟ್ ತಡೆ

‌ನ್ಯೂಯಾರ್ಕ್, ಸೆ.26: ಅಂತರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿಯ ತೀರ್ಪಿನ ಅನುಸಾರ ಅಮೆರಿಕದಲ್ಲಿ ಭಾರತದ ಏರ್ ಇಂಡಿಯಾ ಸಂಸ್ಥೆ ಹೊಂದಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುವು ಮಾಡಬೇಕೆಂದು ಕೋರಿ ಬ್ರಿಟನ್ ಮೂಲದ ಕೇರ್ನ್ ಎನರ್ಜಿ ಸಂಸ್ಥೆ ದಾಖಲಿಸಿದ್ದ ದಾವೆಗೆ ನ್ಯೂಯಾರ್ಕ್ ಕೋಟ್ ತಡೆ ನೀಡಿದೆ.
ಈ ದಾವೆಯ ಮುಂದಿನ ವಿಚಾರಣೆಗೆ ತಡೆ ನೀಡಬೇಕೆಂದು ಕೇರ್ನ್ ಸಂಸ್ಥೆ ಹಾಗೂ ಏರಿಂಡಿಯಾ ಜಂಟಿಯಾಗಿ ಕೋರಿಕೆ ಸಲ್ಲಿಸಿದ್ದವು. ಇದೀಗ ನ್ಯಾಯಾಲಯದ ಹೊರಗೆ ಈ ವಿವಾದವನ್ನು ಪರಿಹರಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ದಾವೆಯ ವಿಚಾರಣೆಗೆ ನವೆಂಬರ್ 18ರವರೆಗೆ ತಡೆ ನೀಡಿರುವುದಾಗಿನ್ಯೂಯಾರ್ಕ್ ಜಿಲ್ಲಾ ನ್ಯಾಯಾಲಯ ತಿಳಿಸಿದೆ.

ಕೇರ್ನ್, ವೊಡಾಫೋನ್ ಸಹಿತ 16 ಸಂಸ್ಥೆಗಳು ಪೂರ್ವಾನ್ವಯವಾಗುವಂತೆ ತೆರಿಗೆ ಪಾವತಿಸುವಂತೆ ಭಾರತ ಸರಕಾರ ಸೂಚಿಸಿತ್ತು. ಕೇರ್ನ್ ಸಂಸ್ಥೆಯೊಂದೇ 10,247 ಕೋಟಿ ತೆರಿಗೆ ಪಾವತಿಸಬೇಕಿತ್ತು. ಇದನ್ನು ಪ್ರಶ್ನಿಸಿ ಕೇರ್ನ್ ಅಂತರಾಷ್ಟ್ರೀಯ ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಿತ್ತು. ಈ ಕಾನೂನು ಸಮರದಲ್ಲಿ ಕೇರ್ನ್ ಸಂಸ್ಥೆಗೆ ಗೆಲುವಾಗಿದ್ದು ಭಾರತ ಸರಕಾರ 1.2 ಬಿಲಿಯನ್ ಡಾಲರ್ ಮೊತ್ತ ಮರುಪಾವತಿಸುವ ಜೊತೆಗೆ ಬಡ್ಡಿ ಮತ್ತು ದಂಡ ತೆರುವಂತೆ ತೀರ್ಪು ನೀಡಿತ್ತು. ಈ ತೀರ್ಪನು್ನ ಭಾರತ ಸರಕಾರ ತಿರಸ್ಕರಿಸಿತ್ತು.

ಈ ಮಧ್ಯೆ, ದೇಶದಲ್ಲಿ ಪೂರ್ವಾನ್ವಯ ತೆರಿಗೆ ವಿಧಿಸುವ ನಿಯಮವನ್ನು ರದ್ದುಗೊಳಿಸುವ ನೂತನ ಕಾನೂನನ್ನು ರೂಪಿಸಲು ಭಾರತ ಸರಕಾರ ನಿರ್ಧರಿತು. ಈ ಕಾನೂನು ರೂಪುಗೊಂಡರೆ ಆಗ ಕೇರ್ನ್ ಮತ್ತಿತರ ಸಂಸ್ಥೆಗಳ ವಿರುದ್ಧದ ಕಾನೂನು ಸಮರ ಸ್ವಯಂ ಅಂತ್ಯಗೊಳ್ಳಲು ವೇದಿಕೆ ಸಿದ್ಧವಾಗುತ್ತದೆ. ಹೊಸ ನಿಯಮದ ಪ್ರಕಾರ, ಭಾರತ ಸರಕಾರ ಸಂಗ್ರಹಿಸಿದ ಪೂರ್ವಾನ್ವಯ ತೆರಿಗೆಯನ್ನು ಸಂಬಂಧಿಸಿದ ಸಂಸ್ಥೆಗೆ ಹಿಂತಿರುಗಿಸಬೇಕು, ಆ ಸಂಸ್ಥೆ ಭಾರತದ ವಿರುದ್ಧ ಹೂಡಿರುವ ದಾವೆಯನ್ನು ಕೈಬಿಡಬೇಕು ಎಂಬ ಷರತ್ತಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರಕಾರ ಒಟ್ಟು 8,100 ಕೋಟಿ ಮೊತ್ತವನ್ನು ವಾಪಾಸು ನೀಡಬೇಕಿದ್ದು ಇದರಲ್ಲಿ 7,900 ಕೋಟಿ ರೂ. ಕೇರ್ನ್ ಸಂಸ್ಥೆಗೆ ಪಾವತಿಸಬೇಕಿದೆ. ಹಣ ವಾಪಾಸು ಪಡೆಯಲು ಸಂಸ್ಥೆಗಳು ಸಲ್ಲಿಸಬೇಕಿರುವ ಅರ್ಜಿಯ ಸ್ವರೂಪವನ್ನು ಶೀಘ್ರ ಅಂತಿಮಗೊಳಿಸಲಾಗುವುದು. ಈ ಪ್ರಕಾರ ಅರ್ಜಿ ಸಲ್ಲಿಸಿದರೆ ಹಣ ಹಿಂತಿರುಗಿಸಲಾಗುತ್ತದೆ ಎಂದು ಭಾರತ ಸರಕಾರ ಹೇಳಿದೆ. ತಾನು ಪಾವತಿಸಿದ ಹಣವನ್ನು ಬಡ್ಡಿ ಮತ್ತು ದಂಡವಿಲ್ಲದೆ ಹಿಂತಿರುಗಿಸಲು ತನ್ನ ಅಭ್ಯಂತರವಿಲ್ಲ ಎಂದು ಕೇರ್ನ್ ಸಂಸ್ಥೆ ಪ್ರತಿಕ್ರಿಯಿಸಿರುವುದರಿಂದ 7 ವರ್ಷದಿಂದ ನಡೆಯುತ್ತಿರುವ ಈ ಕಾನೂನು ಸಮರ ಅಂತ್ಯಗೊಳ್ಳುವ ಸೂಚನೆ ಕಂಡುಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X