ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಉಡುಪಿ, ಸೆ. 26: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೆ.25ರಂದು ರಾತ್ರಿ 11.30ರ ಸುಮಾರಿಗೆ ಅಂಬಾಗಿಲು ಜಂಕ್ಷನ್‌ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಸಂತೆಕಟ್ಟೆಯ ಪದ್ಮರಾಮಣ್ಣ ಶೆಟ್ಟಿ ರಸ್ತೆಯ ಬಾಲಕೃಷ್ಣ ಆಚಾರ್ಯ ಎಂಬವರ ಮಗ ರೋಹಿತ್ (25) ಎಂದು ಗುರುತಿಸಲಾಗಿದೆ. ಉಡುಪಿ ಕರಾವಳಿ ಜಂಕ್ಷನ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಲಾರಿಯು ಎದುರಿನಲ್ಲಿದ್ದ ಬೈಕಿನ ಎಡಬದಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆ ಬಿದ್ದು ಗಂಭೀರವಾಗಿ ಗಾಯಗೊಂಡ ರೋಹಿತ್ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಚಾಲಕ ಸ್ಥಳದಲ್ಲಿ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





