ಉಡುಪಿ: ಅ.2ರಂದು ತುಳು ದಿನಾಚರಣೆ
ಉಡುಪಿ, ಸೆ.27: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿ ಯಿಂದ ಅ.2ರಂದು ಬೆಳಗ್ಗೆ 10:30ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ಆವರಣ ದಲ್ಲಿರುವ ಧ್ವನ್ಯಾಲೋಕದಲ್ಲಿ ‘ತುಳು ದಿನಾಚರಣೆ’ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ‘ತುಳು ನಾಡು, ತುಳುನುಡಿ’ಗೆ ಸಂಬಂಧಪಟ್ಟ ವಿಶೇಷ ಉಪನ್ಯಾಸವನ್ನು ಇತಿಹಾಸ ತಜ್ಞ ಡಾ. ಪುಂಡಿಕಾ ಗಣಪಯ್ಯ ಭಟ್ ಅವರು ನಡೆಸಿ ಕೊಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ತುಳುಕೂಟ ದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





