Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ್ವಿಮುಖ ಸಂವಹನ ಸಂಪರ್ಕ ಸಾಧನದ ದೋಷ...

ದ್ವಿಮುಖ ಸಂವಹನ ಸಂಪರ್ಕ ಸಾಧನದ ದೋಷ ಸರಿಪಡಿಸಲು ಸಚಿವ ಅಂಗಾರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Sept 2021 9:01 PM IST
share
ದ್ವಿಮುಖ ಸಂವಹನ ಸಂಪರ್ಕ ಸಾಧನದ ದೋಷ ಸರಿಪಡಿಸಲು ಸಚಿವ ಅಂಗಾರ ಸೂಚನೆ

ಮಂಗಳೂರು, ಸೆ.27: ಯಾಂತ್ರಿಕೃತ ಮೀನುಗಾರಿಕೆಗೆ ತೆರಳುವ ಬೋಟುಗಳಲ್ಲಿ ದ್ವಿಮುಖ ಸಂವಹನ ಸಂಪರ್ಕ ಸಾಧನಕ್ಕೆ ಅಗತ್ಯವಿರುವ ಬ್ಯಾಟರಿಯನ್ನು ಸೋಲಾರ್ ಮೂಲಕ ರಿಚಾರ್ಜ್ ಮಾಡಿಸಿಕೊಳ್ಳುವ ಸಾಧ್ಯತೆಗಳ ಕುರಿತು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲು ದ.ಕ.ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಸೂಚನೆ ನೀಡಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಮಿನುಗಾರಿಕಾ ಇಲಾಖಾಧಿಕಾರಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮೀನುಗಾರರ ಸುರಕ್ಷೆ ಸರಕಾರದ ಆದ್ಯತೆಯಾಗಿದೆ. ಸಮುದ್ರದ ಬಹುದೂರ ಹೋಗಿ ಮೀನುಗಾರಿಕೆ ಮಾಡುವವರ ಬೋಟುಗಳ ಸ್ಥಿತಿಗತಿಗಳನ್ನು ಅವಲೋಕಿಸಲು ಹಾಗೂ ಮೀನುಗಾರರ ಸುರಕ್ಷತಾ ದೃಷ್ಟಿಯಿಂದ ದ್ವಿಮುಖ ಸಂವಹನ ಸಂಪರ್ಕ ಸಾಧನವನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಈ ಸಾಧನದಲ್ಲಿರುವ ಬ್ಯಾಟರಿಗಳ ಚಾರ್ಜ್ ಖಾಲಿಯಾದಲ್ಲಿ ಬೋಟುಗಳಲ್ಲಿಯೇ ಸೋಲಾರ್ ಮೂಲಕ ಅವುಗಳನ್ನು ರಿಚಾರ್ಜ್ ಮಾಡಿಕೊಳ್ಳಲು ಸಾಧ್ಯವಾಗುವಂತಹ ಯತ್ನಗಳ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಸಚಿವರು ಹೇಳಿದರು.

ಉಪ್ಪು ನೀರಿನಲ್ಲಿ ಸೋಲಾರ್ ಪ್ಯಾನಲ್ಗಳು ಸೂಕ್ತವಾಗಿ ಕಾರ್ಯನಿರ್ವಹಿಸುವುದಿಲ್ಲ ಹಾಗೂ ಬಾಳಿಕೆಯೂ ಬರುವುದಿಲ್ಲ. ಹಾಗಾಗಿ ಪರ್ಯಾಯ ಕ್ರಮಗಳನ್ನು ಪತ್ತೆ ಮಾಡಲು ಚಿಂತಿಸಲಾಗಿದೆ, ಬೋಟ್‌ಗಳ ಮೇಲೆಯೆ ಕವಚದಂತಹ ಸೋಲಾರ್ ಫಲಕಗಳನ್ನು ಅಳವಡಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದ ಸಚಿವರು ಈ ಸಾಧನಗಳಲ್ಲಿರುವ ಕಂಡುಬಂದಿರುವ ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಲು ತಜ್ಞರ ಸಮಿತಿಯೊಂದನ್ನು ರಚಿಸಿಕೊಂಡು ಅವುಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮೀನುಗಾರ ಸ್ನೇಹಿಯನ್ನಾಗಿಸಲಾಗುವುದು ಎಂದರು.

ಸ್ಕೈಲೋ ಅಥವಾ ಇಸ್ರೋ ಆಗಲಿ ಯಾವುದೇ ಸಂಸ್ಥೆ ತಯಾರಿಸಿದ ದ್ವಿಮುಖ ಸಂವಹನ ಸಂಪರ್ಕ ಸಾಧನಕ್ಕೆ ಗ್ಯಾರಂಟಿ ಇರಬೇಕು, ಆ ಯಂತ್ರದ ಸರ್ವಿಸ್ ಮಾಡಿಕೊಡುವ ಬಗ್ಗೆಯೂ ಖಚಿತತೆ ಇರಬೇಕು ಎಂದ ಸಚಿವರು, ಮೀನುಗಾರರಿಗೆ ಇದೀಗ 1.12 ಲಕ್ಷ ಕೆ.ಎಲ್. ಡೀಸೆಲ್ ಸಬ್ಸಿಡಿ ಈಗಾಗಲೇ ನೀಡಲಾಗುತ್ತಿದೆ. ಅದನ್ನು 1.50 ಲಕ್ಷ ಕೆ.ಎಲ್ ಗೆ ವಿಸ್ತರಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಗುರುವಾರ ಚರ್ಚಿಸಲಾಗುವುದು ಎಂದು ಸಚಿವ ಅಂಗಾರ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ ದ್ವಿಮುಖ ಸಂವಹನ ಸಂಪರ್ಕ ಸಾಧನದಲ್ಲಿ ಕಂಡುಬಂದಿರುವ ದೋಷಗಳನ್ನು ಸರಿಪಡಿಸಲು ತಾಂತ್ರಿಕ ನಿಪುಣರ ಸಮಿತಿಯೊಂದನ್ನು ರಚಿಸಲಾಗುವುದು. ಆ ಸಮಿತಿಯು ಸಾಧಕ-ಬಾಧಕಗಳನ್ನು ಅರಿತು ನ್ಯೂನ್ಯತೆಗಳನ್ನು ಸರಿಪಡಿಸಿ ಮೀನುಗಾರಿಕಾ ಇಲಾಖೆಯ ನಿರ್ದೇಶಕರ ಮೂಲಕ ಫಲಾನುಭವಿಗಳಿಗೆ ಒದಗಿಸಲಾಗುವುದು ಎಂದು ಹೇಳಿದರು.

ಶಾಸಕರಾದ ವೇದವ್ಯಾಸ ಕಾಮತ್, ರಘುಪತಿ ಭಟ್, ರಾಜ್ಯ ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಕರಾವಳಿ ಕಾವಲು ಪಡೆಯ ಡಿಐಜಿ ವೆಂಕಟೇಶ್, ಮೀನುಗಾರಿಕಾ ಇಲಾಖೆಯ ನಿರ್ದೇಶಕ ರಾಮಾಚಾರ್ಯ, ಉಪ ನಿರ್ದೇಶಕ ಹರೀಶ್ ಕುಮಾರ್, ಉಡುಪಿ ಜಿಲ್ಲಾ ಉಪನಿರ್ದೇಶಕ ಗಣೇಶ್, ಮಲ್ಪೆಮೀನುಗಾರರ ಸಂಘ, ಟ್ರಾಲ್‌ಬೋಟ್, ಪರ್ಸಿನ್ ಬೋಟ್ ಮೀನುಗಾರರ ಸಂಘ, ಆಳ ಸಮುದ್ರ ಮೀನುಗಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X