ಅಪ್ರಾಪ್ತ ಬಾಲಕಿಯ ಸರಣಿ ಅತ್ಯಾಚಾರ ಪ್ರಕರಣ: ಎಲ್ಲಾ 33 ಆರೋಪಿಗಳ ಬಂಧನ

ಥಾಣೆ,ಸೆ.26: ಸುಮಾರು 9 ತಿಂಗಳುಗಳವರೆಗೆ ಮುಂಬೈ ಸಮೀಪದ ವಿವಿಧ ಸ್ಥಳಗಳಲ್ಲಿ 15 ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಹಲವಾರು ಬಾರಿ ಸಾಮೂಹಿಕ ಅತ್ಯಾಚಾರವೆಸಗಿದ ಎಲ್ಲಾ 33 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆಯೆಂದು ಥಾಣೆ ಪೊಲೀಸರು ಸೋಮವಾರ ತಿಳಿಸಿದ್ದಾರೆ.
‘‘ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಓರ್ವನನ್ನು ಬಂಧಿಸಲಾಗಿದೆ. ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಎಲ್ಲಾ 33 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಅಪ್ರಾಪ್ತ ವಯಸ್ಕರನ್ನು ಬಾಲಾಪರಾಧಿಗಳ ಪರಿವರ್ತನಾ ಗೃಹಕ್ಕೆ ಕಳುಹಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಸೆಪ್ಟೆಂಬರ್ 26ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಆಕೆಯ ದೂರಿನ ಆಧಾರದಲ್ಲಿ ಪೊಲೀಸರು ಸೆಪ್ಟೆಂಬರ್ 23ರಂದು ಎಲ್ಲಾ ಆರೋಪಗಳ ವಿರುದ್ಧ ಭಾರತೀಯ ದಂಡಸಂಹಿತೆಯಡಿ ಅತ್ಯಾಚಾರ ಮತ್ತಿತರ ಆರೋಪಗಳಿಗೆ ಸಂಬಂಧಿಸಿ ಪೊಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ಬಗ್ಗೆ ತನಿಖೆಗಾಗಿ ಥಾಣೆ ಪೊಲೀಸರು ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಈ ವರ್ಷದ ಜನವರಿಲ್ಲಿ ಬಾಲಕಿಯ ಸ್ನೇಹಿತನು ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಆ ಹೇಯ ಕೃತ್ಯವನ್ನು ಆತ ವಿಡಿಯೋದಲ್ಲಿ ಚಿತ್ರೀಕರಿಸಿ ಆಕೆಯನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ಮತ್ತು ಅತ್ಯಾಚಾರವೆಸಗುತ್ತಿದ್ದ. ಈ ವಿಡಿಯೋವನ್ನು ಆತ ತನ್ನ ಸ್ನೇಹಿತರು ಹಾಗೂ ಪರಿಚಯಸ್ಥರೊಂದಿಗೂ ಹಂಚಿಕೊಂಡಿದ್ದ. ಅವರೆಲ್ಲರೂ ಈ ಬಳಸಿಕೊಂಡು ಹದಿರೆಯದ ಬಾಲಕಿಯನ್ನು ಬ್ಲಾಕ್ಮೇಲ್ ಮಾಡುತ್ತಿದ್ದರು ಹಾಗೂ ಆಕೆಯ ಮೇಲೆ ಅತ್ಯಾಚಾರವೆಸಗುತ್ತಿದ್ದಾರೆಂದು ಆರೋಪಿಸಲಾಗಿದೆ.
ಸಂತ್ರಸ್ತ ಬಾಲಕಿ ಈ ವಿಷಯವನ್ನು ತನ್ನ ಚಿಕ್ಕಮ್ಮನಿಗೆ ತಿಳಿಸಿದ ಬಳಿಕ ವಿಷಯ ಬೆಳಕಿಗೆ ಬಂದಿತು ಹಾಗೂ ಆರೋಪಿಗಳ ವಿರುದ್ಧ ದೂರು ದಾಖಲಿಸಲಾಯಿತೆಂದು ಎಂದು ಪೊಲೀಸರು ತಿಳಿದ್ದಾರೆ.