Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಶಿಕ್ಷಣದಲ್ಲಿ ಕನ್ನಡ ಅನುಷ್ಠಾನ...

‘ಶಿಕ್ಷಣದಲ್ಲಿ ಕನ್ನಡ ಅನುಷ್ಠಾನ ಅಭಿಯಾನ’ಕ್ಕೆ ಚಾಲನೆ ನೀಡಿದ ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ27 Sept 2021 11:32 PM IST
share
‘ಶಿಕ್ಷಣದಲ್ಲಿ ಕನ್ನಡ ಅನುಷ್ಠಾನ ಅಭಿಯಾನ’ಕ್ಕೆ ಚಾಲನೆ ನೀಡಿದ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಸೆ.27: ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷದ ಅಭಿಯಾನಗಳ ಸರಣಿ ಬಾರಿಸು ಕನ್ನಡ ಡಿಂಡಿಮವದ ಕೊನೆಯ ಅಭಿಯಾನ ‘ಶಿಕ್ಷಣದಲ್ಲಿ ಕನ್ನಡ  ಅನುಷ್ಠಾನ ಅಭಿಯಾನ–ಕಡ್ಡಾಯ ಕನ್ನಡ ಕಲಿಕಾ ಅಧಿನಿಯಮ–2015 ರ  ಅನುಷ್ಠಾನ ಕಾರ್ಯಕ್ರಮಕ್ಕೆ ಜಾಲಸಂಪರ್ಕ ಸಭೆಯ ಮೂಲಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಚಾಲನೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ಕಾರ್ಯವನ್ನು ಮೆಚ್ಚಿ, ಇಂದಿನ ಶಿಕ್ಷಣ ವಲಯದಲ್ಲಿ ಆಗುತ್ತಿರುವ ವ್ಯಾಪಕ ಬದಲಾವಣೆ, ಪೋಷಕರ ಮನಸ್ಥಿತಿ, ಶಿಕ್ಷಣ ಸಂಸ್ಥೆಗಳ ಪ್ರತಿಷ್ಠೆಯು ಭವಿಷ್ಯದ ಕನ್ನಡಿಗರ ನಿಜವಾದ ಜ್ಞಾನಾರ್ಜನೆಯನ್ನು ಕಸಿಯುತ್ತಿದೆ ಎಂದು ಹೇಳಿದ ಅವರು, ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಉಪ ನಿರ್ದೇಶಕರಿಗೆ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ  ಅನುಷ್ಠಾನಕ್ಕೆ ಆದೇಶ ಹೊರಡಿಸುವುದಾಗಿ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಬದುಕಿನ ಭಾಷೆಯಾಗಿದ್ದು, 2015ರಲ್ಲೇ ಕಡ್ಡಾಯ ಕನ್ನಡ ಕಲಿಕಾ ಅಧಿನಿಯಮವನ್ನು ಹೊರತಂದಿದ್ದರೂ ಅದರ ಅನುಷ್ಠಾನದ ವಿಷಯದಲ್ಲಿ ಉಂಟಾಗುತ್ತಿರುವ ತೊಡಕುಗಳು ಕನ್ನಡದ ನಾಳೆಗಳಿಗೆ ಧಕ್ಕೆ ಉಂಟು ಮಾಡುತ್ತಿವೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ರಾಜ್ಯಭಾಷಾ ಶಿಕ್ಷಣ ಅಥವಾ ಪ್ರಾಥಮಿಕ ಶಿಕ್ಷಣದ ಕುರಿತು ಆಯಾ ಸ್ಥಳೀಯ ಸರಕಾರಗಳು ಯೋಜಿಸಿ, ನಿರ್ಧರಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಕರ್ನಾಟಕದಲ್ಲಿ ಕನ್ನಡವೇ ಸರ್ವಕ್ಷೇತ್ರಗಳಲ್ಲೂ ಬದುಕಿನ ಭಾಷೆಯಾಗಬೇಕು ಎಂಬುದು ಪ್ರತಿಯೊಬ್ಬ ಕನ್ನಡಿಗನ ನಿಲುವಾಗಿರುವುದರಿಂದ ಸರಕಾರ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ಹಕ್ಕೊತ್ತಾಯ ಸಲ್ಲಿಸುವ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇಂದು ಚಾಲನೆ ನೀಡಿರುವ ಈ ಅಭಿಯಾನ ಇನ್ನು ಮೂರು ದಿನಗಳ ಕಾಲ ರಾಜ್ಯವ್ಯಾಪಿಯಾಗಿ ಸಾಗುತ್ತಿದ್ದು, ಕನ್ನಡ ಜಾಗೃತಿ ಸಮಿತಿ ಸದಸ್ಯರು, ಕನ್ನಡ ಕಾಯಕಪಡೆಯ ಸದಸ್ಯರು, ಎಲ್ಲಾ ಜಿಲ್ಲೆಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಆಯಾ ಜಿಲ್ಲೆಯಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಹಕ್ಕೊತ್ತಾಯ ಮನವಿ ಸಲ್ಲಿಸಿ ಕಡ್ಡಾಯ ಕನ್ನಡ ಅನುಷ್ಠಾನ ಅಧಿನಿಯಮ 2015ರ ಪ್ರತಿಯನ್ನು ಸಲ್ಲಿಸಿ ಭವಿಷ್ಯದ ಕನ್ನಡಿಗರ ಏಳಿಗೆಗಾಗಿ ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸಲು ಮನವಿ ಮಾಡುವ ಉದ್ದೇಶ ಹೊಂದಿದೆ.

ಜಾಲಸಂಪರ್ಕ ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್.ವಿಶಾಲ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರು ಹಾಗೂ ಎಲ್ಲ ಜಿಲ್ಲೆಗಳ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X