Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕಲಿ ಕಾರ್ಮಿಕರ ನೋಂದಣಿ ರದ್ದುಗೊಳಿಸಿ:...

ನಕಲಿ ಕಾರ್ಮಿಕರ ನೋಂದಣಿ ರದ್ದುಗೊಳಿಸಿ: ರಾಮಲಿಂಗಾ ರೆಡ್ಡಿ

ಕಾರ್ಮಿಕ ಕಲ್ಯಾಣ ಮಂಡಳಿ ಅಕ್ರಮಗಳ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2021 11:40 PM IST
share
ನಕಲಿ ಕಾರ್ಮಿಕರ ನೋಂದಣಿ ರದ್ದುಗೊಳಿಸಿ: ರಾಮಲಿಂಗಾ ರೆಡ್ಡಿ

ಬೆಂಗಳೂರು, ಸೆ.27: ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಭಾರೀ ಅಕ್ರಮಗಳ ವಿರುದ್ಧ ತನಿಖೆ ನಡೆಸಬೇಕು. ಭ್ರಷ್ಟರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಪಿಸಿಸಿ ಕಾರ್ಮಿಕ ವಿಭಾಗ ಪದಾಧಿಕಾರಿಗಳು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಮುಂಭಾಗ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ಕಲ್ಯಾಣ ಮಂಡಳಿ ನೈಜ ಕಾರ್ಮಿಕರಿಂದ ದೂರವಾಗುತ್ತಿದ್ದು, ಕಾರ್ಮಿಕರಿಗೆ ಸೂಕ್ತ ಪರಿಹಾರ ಮತ್ತು ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಮಂಡಳಿಯಲ್ಲಿ ನಕಲಿ ಕಾರ್ಮಿಕರು ನುಸುಳುತ್ತಿದ್ದು, ಇದನ್ನು ತಡೆಯದಿದ್ದರೆ ಇಡೀ ಮಂಡಳಿ ದಿವಾಳಿಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಮಂಡಳಿಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು, ಕಾರ್ಮಿಕರ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿವೆ. ಸಂಕಷ್ಟದಲ್ಲಿರುವವರಿಗೆ ಸೂಕ್ತ ನೆರವು ನೀಡುತ್ತಿಲ್ಲ. ಕಟ್ಟಡ ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸಬೇಕಾದ ಮಂಡಳಿ ಗುತ್ತಿಗೆದಾರರು, ರಾಜಕಾರಣಿಗಳ ಮರ್ಜಿಯಂತೆ ಕೆಲಸ ಮಾಡುತ್ತಿದೆ. ಇದರಿಂದ ನೈಜ ಕಾರ್ಮಿಕರಿಗೆ ಪರಮ ಅನ್ಯಾಯವಾಗಿದೆ ಎಂದು ಘೋಷಣೆ ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, ಸಿ.ಎಸ್.ಸಿ ಸೆಂಟರ್ ಮಾಲಕರು ಕಟ್ಟಡ ಕಾರ್ಮಿಕರಲ್ಲದವರನ್ನು ನಕಲಿ ಮಾಲಕರ ಸಹಿಯೊಂದಿಗೆ ನೋಂದಣಿ ಮಾಡಿಸುತ್ತಿದ್ದು, ಇದರಿಂದ ಮಂಡಳಿಗೆ ನಕಲಿ ಫಲಾನುಭವಿಗಳು ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ತಕ್ಷಣ ಸಿ.ಎಸ್.ಸಿ ಸೆಂಟರ್‍ಗಳಲ್ಲಿ ನೋಂದಣಿ ನಿಲ್ಲಿಸಬೇಕು. ಇಲ್ಲಿ ಈಗಾಗಲೇ ನೀಡಿರುವ ನೋಂದಣಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಬೇಕು. ಕಾರ್ಮಿಕ ಕಚೇರಿ ಹಾಗೂ ಟ್ರೇಡ್ ಯೂನಿಯನ್ ಮುಖಾಂತರ ನೋಂದಣಿ ಪ್ರಕ್ರಿಯೆ ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ಪುಟ್ಟಸ್ವಾಮಿ ಮಾತನಾಡಿ, 2019ರ ಜನವರಿಯಿಂದ 2021ರ ಆಗಸ್ಟ್‍ವರೆಗೆ ಆಹಾರ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್, ಪ್ರತಿರಕ್ಷಣಾ ಕಿಟ್ ಹಾಗೂ ಹಿರಿಯ, ಕಾರ್ಮಿಕ ನಿರೀಕ್ಷಕರ ಕಚೇರಿಗಳಿಗೆ ನೀಡಿರುವ ಟಿ.ವಿ.ಗಳು ಹಾಗೂ ಮಂಡಳಿಗೆ ಖರೀದಿಸಿರುವ ವಾಹನಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಬೇಕು ಎಂದರು.

ಮೊದಲ ಮತ್ತು ಎರಡನೇ ಅಲೆಯಲ್ಲಿ ಘೋಷಿಸಿದ ಪರಿಹಾರ ವಿತರಣೆಯಾಗಿಲ್ಲ. ಮದುವೆ ಧನ ಸಹಾಯವನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಬೇಕು, ತಾಯಿ ಲಕ್ಷ್ಮಿ ಬಾಂಡ್ ಅನ್ನು ರದ್ದುಗೊಳಿಸಬೇಕು ಹಾಗೂ ಹೆರಿಗೆ ಸೌಲಭ್ಯವನ್ನು ಮಹಿಳಾ ಫಲಾನುಭವಿಯ ಖಾತೆಗೆ ನೇರವಾಗಿ ಜಮಾ ಮಾಡಬೇಕು ಎಂದು ಅವರು ಹೇಳಿದರು.

ಪಿಂಚಣಿ ಸೌಲಭ್ಯವನ್ನು 5 ಸಾವಿರ ರೂ.ಗೆ ಹೆಚ್ಚಿಸುವ ಜತೆಗೆ ಕಚೇರಿಗಳಲ್ಲಿ ಪಿಂಚಣಿ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು. ಅಪಘಾತ ವಿಮೆ ಪರಿಹಾರವನ್ನು 10 ಲಕ್ಷ ರೂ.ಗೆ ಹೆಚ್ಚಿಸಬೇಕು. ಸ್ವಾಭಾವಿಕ ಮರಣದ ಧನ ಸಹಾಯವನ್ನು 5 ಲಕ್ಷ ರೂ.ಗಳಿಗೆ ಏರಿಕೆ ಮಾಡಬೇಕು. ವಸತಿ ಸೌಲಭ್ಯವನ್ನು 5 ಲಕ್ಷ ರೂ.ಗೆ ಹೆಚ್ಚಿಸಿ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಜಾರಿಗೊಳಿಸಬೇಕು. ಕಾರ್ಮಿಕರು ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿ ವರ್ಷಗಳು ಕಳೆದರು ಕಾರ್ಮಿಕರಿಗೆ ಧನ ಸಹಾಯವನ್ನು ಮಂಜೂರು ಮಾಡಿಲ್ಲ ಎಂದು ಅವರು ತಿಳಿಸಿದರು.

ಅರ್ಜಿ ಸಲ್ಲಿಸುವ ಸೇವಾ ಸಿಂಧು ವೆಬ್‍ಸೈಟ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ ಮಾತ್ರ ಸೆಸ್ ಹಣ ಬಳಕೆಯಾಗಬೇಕು. ಖಾಸಗಿ ವಾಹನ ಚಾಲಕರಿಗೆ ನೀಡುವ ಅಪಘಾತ ಪರಿಹಾರ ಮೊತ್ತವನ್ನು ಹತ್ತು ಲಕ್ಷ ರೂ.ಗೆ ಏರಿಕೆ ಮಾಡಬೇಕು. ಖಾಸಗಿ ವಾಣಿಜ್ಯ ವಾಹನಗಳಿಗೆ ಒಂದು ವರ್ಷದ ತೆರಿಗೆ ವಿನಾಯಿತಿ ನೀಡಬೇಕು ಎಂದು ಪುಟ್ಟಸ್ವಾಮಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಕೆಪಿಸಿಸಿ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಜಿ.ಆರ್.ದಿನೇಶ್, ಶ್ರೀಕಾಂತ್, ಬಾಲರಾಜ್ ಗೌಡ, ಉಪಾಧ್ಯಕ್ಷ ಕೆ.ಸಿ.ಹರಿಣಿ ಗೌಡ, ಜಿಲ್ಲಾಧ್ಯಕ್ಷ ಸತ್ಯನಾರಾಯಣ, ತ್ರಿಭುವನ್ ಗೌಡ, ಇಮ್ರಾನ್ ಖಾನ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X