Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಧಿತ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು:...

ಬಂಧಿತ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು: ಪೊಲೀಸ್ ಇಲಾಖೆಯ ಕ್ರಮಕ್ಕೆ ಸಾರ್ವಜನಿಕರ ಅಸಮಾಧಾನ

ಸುರತ್ಕಲ್ ಸಮೀಪ ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಲ್ಲೆ ಯತ್ನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Sept 2021 2:06 PM IST
share
ಬಂಧಿತ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು: ಪೊಲೀಸ್ ಇಲಾಖೆಯ ಕ್ರಮಕ್ಕೆ ಸಾರ್ವಜನಿಕರ ಅಸಮಾಧಾನ

ಮಂಗಳೂರು, ಸೆ.28: ರಾ.ಹೆ.66ರ ಸುರತ್ಕಲ್-ಎನ್‌ಐಟಿಕೆ ಸಮೀಪದ ಟೋಲ್‌ಗೇಟ್ ಬಳಿ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ದಾಂಧಲೆ ನಡೆಸಿದ ಐವರು ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು ನೀಡಲಾಗಿದೆ. ಈ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ.

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಕೇರಳದ ಕೊಲ್ಲಂ ನಿವಾಸಿ ಸವಿಯೋ ಟಿ. ಆಲ್ಫೋನ್ಸೋ (20) ತನ್ನ ಸಹಪಾಠಿಗಳಾದ ವಿಜಯ್ ಮತ್ತು ಶಮೀಲಾ ಎಂಬವರೊಂದಿಗೆ ಸೆ.26ರಂದು ತನ್ನ ಜೀಪಿನಲ್ಲಿ ಮಲ್ಪೆ ಮತ್ತು ಮಣಿಪಾಲಕ್ಕೆ ತೆರಳಿ ಅದೇ ದಿನ ಸಂಜೆ ಸುಮಾರು 6:25ರ ವೇಳೆಗೆ ಮರಳಿ ಬರುತ್ತಿದ್ದಾಗ ಸುರತ್ಕಲ್-ಎನ್‌ಐಟಿಕೆ ಟೋಲ್‌ಗೇಟ್ ಬಳಿ ತಡೆದು ನಿಲ್ಲಿಸಿದ ದುಷ್ಕರ್ಮಿಗಳ ತಂಡವು ಜೀಪಿನಲ್ಲಿದ್ದವರ ಹೆಸರು, ವಿಳಾಸ ಕೇಳಿ  ಹಲ್ಲೆ ನಡೆಸಿ ಅವಾಚ್ಯ ಶಬ್ದದಿಂದ ಬೈದು ದಾಂಧಲೆ ಸೃಷ್ಟಿಸಿತ್ತು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು. ಈ ಸಂದರ್ಭ ಪೊಲೀಸ್ ಇನ್‌ಸ್ಪೆಕ್ಟರ್ ಶರೀಫ್ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸದಂತೆ ತಡೆಯಲು ಪ್ರಯತ್ನಿಸಿದ್ದರು. ಪ್ರಕರಣದ ಬಗ್ಗೆ ಹಲ್ಲೆಗೊಳಗಾದ ವಿದ್ಯಾರ್ಥಿ ಸವಿಯೋ ಟಿ. ಆಲ್ಫೋನ್ಸೋ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ವೈರಲ್ ಆಗುತ್ತಲೇ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆಯು ಸೋಮವಾರ ರಾತ್ರಿ ಬಜರಂಗ ದಳದ ಜಿಲ್ಲಾ ಪ್ರಮುಖ ಪ್ರೀತಂ ಶೆಟ್ಟಿ, ಬಜರಂಗ ದಳ ಸುರತ್ಕಲ್ ಪ್ರಖಂಡ ಪ್ರಮುಖ ಅರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರನ್ನು ಬಂಧಿಸಿತ್ತು.

*ಠಾಣೆಯಲ್ಲೇ ಜಾಮೀನು: ಬಂಧಿತ ಆರೋಪಿಗಳ ವಿರುದ್ಧ ಐಪಿಎಸ್ ಸೆಕ್ಷನ್ 341, 323, 504ರಡಿ ಪ್ರಕರಣ ದಾಖಲಿಸಿ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆಗೊಳಿಸಿದ್ದಾರೆ.


*ರವಿವಾರ ನಡೆದ ಘಟನೆ ಬಗ್ಗೆ ನಾನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ಜೊತೆ ಮಾತನಾಡಿದ್ದೇನೆ. ಇನ್ಸ್‌ಪೆಕ್ಟರ್ ಶರೀಫ್ ಆ ದಾರಿಯಾಗಿ ಹೋಗುವ ಸಂದರ್ಭ ಈ ಘಟನೆಯನ್ನು ನೋಡಿ ತಡೆದಿದ್ದಾರೆ. ಆರೋಪಿಗಳು ವಾಹನವನ್ನು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಇಂತಹ ಕಾನೂನು ಕೈಗೆತ್ತಿಕೊಳ್ಳುವ ಘಟನೆಗಳು ನಡೆಯಬಾರದು. ಇದರಿಂದ ನಗರಕ್ಕೂ ಕೆಟ್ಟ ಹೆಸರು ಬರುತ್ತದೆ.

*ಶಶಿಕಮಾರ್

ಪೊಲೀಸ್ ಕಮಿಷನರ್, ಮಂಗಳೂರು.


*ನಾನು ನನ್ನ ಕರ್ತವ್ಯ ನಿಭಾಯಿಸಿದೆ

ನಾನು ಸದ್ಯ ಸುರತ್ಕಲ್ ಠಾಣೆಯ ಇನ್‌ಸ್ಪೆಕ್ಟರ್ ಅಲ್ಲ. ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಆಗಿರುವೆ. ರವಿವಾರ ಸಂಜೆ ನಾನು ಸುರತ್ಕಲ್ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ತಂಡವೊಂದು ಜೀಪನ್ನು ತಡೆದು ನಿಲ್ಲಿಸಿರುವುದು ಮತ್ತು ಜನರು ಗುಂಪು ಸೇರಿರುವುದನ್ನು ಕಂಡೆ. ತಕ್ಷಣ ನಾನು ಅಲ್ಲಿಗೆ ತೆರಳಿ ಹಲ್ಲೆ ನಡೆಸದಂತೆ ತಡೆಯಲು ಪ್ರಯತ್ನಿಸಿದೆ. ಒಬ್ಬ ಪೊಲೀಸ್ ಅಧಿಕಾರಿಯಾಗಿ ನಾನು ನನ್ನ ಕರ್ತವ್ಯ ನಿಭಾಯಿಸಿದೆ. ಆ ಬಳಿಕ ಸುರತ್ಕಲ್ ಪೊಲೀಸರು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶರೀಫ್

ಇನ್‌ಸ್ಪೆಕ್ಟರ್, ಮಂಗಳೂರು ಉತ್ತರ ಸಂಚಾರಿ ಠಾಣೆ


ಸೆಕ್ಷನ್ ಬದಲಿಸಿ ಆರೋಪಿಗಳನ್ನು ಮತ್ತೆ ಬಂಧಿಸಿ

ದ.ಕ. ಜಿಲ್ಲೆಯಲ್ಲಿ ಮತೀಯ ಶಕ್ತಿಗಳ ಇಂತಹ ಗೂಂಡಾಗಿರಿ ಇದೇನು ಹೊಸತಲ್ಲ. ಈ ಹಿಂದೆಯೂ ಅನೇಕ ಗೂಂಡಾಗಿರಿ ನಡೆದಿದೆ. ಆದರೆ ಮೊನ್ನೆ ಸುರತ್ಕಲ್‌ನಲ್ಲಿ ನಡೆದ ಘಟನೆಯು ಪೊಲೀಸ್ ಅಧಿಕಾರಿಯೊಬ್ಬರ ಸಮ್ಮುಖದಲ್ಲೇ ನಡೆದಿದೆ. ಹಾಗಾಗಿ ಪೊಲೀಸರು ಗೂಂಡಾಗಿರಿ ನಡೆಸಿದವರನ್ನು ತಕ್ಷಣ ಬಂಧಿಸಬೇಕಿತ್ತು. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಆರೋಪಿಗಳನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದು ಅಚ್ಚರಿದಾಯಕ ಮತ್ತು ನಾಚಿಕೆಗೇಡಿನ ಸಂಗತಿ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಮತ್ತು ಪೊಲೀಸ್ ಇಲಾಖೆಯು ದುರ್ಬಲವಾಗಿರುವುದಕ್ಕೆ ಈ ಘಟನೆಯು ಸ್ಪಷ್ಟ ಸಾಕ್ಷಿಯಾಗಿದೆ. ಮತೀಯ ಶಕ್ತಿಗಳ ಮುಂದೆ ಪೊಲೀಸ್ ಇಲಾಖೆಯು ಮಂಡಿಯೂರಿದೆಯೇ ಎಂಬ ಸಂಶಯವೂ ನನಗೆ ಕಾಡುತ್ತಿದೆ. ತಕ್ಷಣ ಪೊಲೀಸ್ ಇಲಾಖೆಯು ಆರೋಪಿಗಳ ವಿರುದ್ಧ ದಾಖಲಿಸಿರುವ ದುರ್ಬಲ ಸೆಕ್ಷನ್‌ನ್ನು ಬದಲಾಯಿಸಿ ಜಾಮೀನು ಸಿಗದಂತಹ ಕಠಿಣ ಸೆಕ್ಷನ್ ದಾಖಲಿಸಬೇಕು ಮತ್ತು ಆರೋಪಿಗಳನ್ನು ಮತ್ತೆ ಬಂಧಿಸಬೇಕು.

-ಮುನೀರ್ ಕಾಟಿಪಳ್ಳ

ರಾಜ್ಯಾಧ್ಯಕ್ಷರು, ಡಿವೈಎಫ್‌ಐ


ಪೊಲೀಸ್ ಇಲಾಖೆಯಲ್ಲಿ ಈ ತಾರತಮ್ಯ ಯಾಕೆ?

ಮೊನ್ನೆ ಬೆಂಗಳೂರಿನಲ್ಲಿ ನಡೆದ ಅನೈತಿಕ ಪೋಲಿಸ್‌ಗಿರಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರ ವಿರುದ್ದ (ಸೆ. 153(ಎ), 506, 341, 34, 504, 323) ಜಾಮೀನುರಹಿತ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಾರೆ. ಹಾಗೇಯೆ ಕಳೆದ ತಿಂಗಳು ಕಾವೂರಿನಲ್ಲಿ ನಡೆದ ಹಲ್ಲೆ ಪ್ರಕರಣವೊಂದರಲ್ಲಿ ವಿಶೇಷ ಕಾಳಜಿ ವಹಿಸಿದ ಪೋಲಿಸರು ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದ ಇಬ್ಬರು ಯುವಕರನ್ನು ಸಂಘ ಪರಿವಾರದ ಒತ್ತಡಕ್ಕೆ ಮಣಿದು ಆಸ್ಪತ್ರೆಯ ಬೆಡ್‌ನಿಂದಲೇ ಬಂಧಿಸಿ ಅವರ ವಿರುದ್ದ ಕೊಲೆಯತ್ನ (ಸೆ.307) ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಾರೆ. ಬೆಂಗಳೂರಿನಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಇಂತಹ ಘಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮತ್ತು ಗೃಹಸಚಿವರು ಟ್ವೀಟ್ ಮಾಡಿದ್ದರು. ಆದರೆ ರವಿವಾರ ಸಂಜೆ ಪೋಲಿಸರ ಸಮ್ಮುಖದಲ್ಲೇ ಸುರತ್ಕಲ್‌ನಲ್ಲಿ ಸಂಘ ಪರಿವಾರದ ಗೂಂಡಾಗಳು ಅಮಾಯಕ ವಿದ್ಯಾರ್ಥಿಗಳ ಮೇಲೆ ನಡೆಸಿದ ಅನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಕೆಲವು ಆರೋಪಿಗಳನ್ನು ಬಂಧಿಸಿರುವ ಪೋಲಿಸರು ಆರೋಪಿಗಳ ವಿರುದ್ದ (ಸೆ.341, 504, 506) ಠಾಣೆಯಲ್ಲೇ ಜಾಮೀನು ಸಿಗುವಂತಹ ಸೆಕ್ಷನ್‌ಗಳನ್ನು ಹಾಕಿದ್ದಾರೆ. ಮೂರೂ ಪ್ರಕರಣಗಳು ಒಂದೇ ಸ್ವರೂಪದ್ದಾಗಿದ್ದರೂ ಪೊಲೀಸ್ ಇಲಾಖೆಯು ಈ ರೀತಿಯ ತಾರತಮ್ಯದ ನೀತಿ ಅನುಸರಿಸಲು ಕಾರಣ ಏನು? ಪೊಲೀಸ್ ಅಧಿಕಾರಿಯೊಬ್ಬರ ಸಮ್ಮುಖದಲ್ಲೇ ಕೃತ್ಯ ನಡೆಸಿದ ಸಂಘ ಪರಿವಾರದ ಗೂಂಡಾಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಯಾಕೆ ವಿಫಲವಾಯಿತು? ಯಾರ ಒತ್ತಡಕ್ಕೆ ಪೊಲೀಸ್ ಇಲಾಖೆ ಮಣಿಯುತ್ತಿದೆ? ಆರೋಪಿಗಳ ಧರ್ಮದ ಆಧಾರವಾಗಿ ಪ್ರಕರಣ ದಾಖಲಿಸಲಾಗುತ್ತಿದೆಯೇ? ಸಂಘಪರಿವಾರದ ಗೂಂಡಾಗಿರಿಗೆ ಪೊಲೀಸ್ ಇಲಾಖೆಯೂ ಸಾಥ್ ನೀಡುತ್ತಿದೆಯೇ?

ಶಾಹುಲ್ ಎಸ್.ಎಚ್.

ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ದ.ಕ. ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X