ಮಂಗಳೂರು: ರಸ್ತೆ ಅಪಘಾತಕ್ಕೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಬಲಿ

ಮಂಗಳೂರು, ಸೆ.28: ನಂತೂರು - ಪಂಪ್ ವೆಲ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರಿನಲ್ಲಿ ಮಂಗಳವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂದು ಗುರುತಿಸಲಾಗಿದೆ.
ಇವರು ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದರು ಎಂಬ ಮಾಹಿತಿ ಲಭಿಸಿದೆ. ಮಾನಸ್ ನಂತೂರಿನಿಂದ ಪಂಪ್ ವೆಲ್ ನತ್ತ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಢಿಕ್ಕಿಯಾಗಿ ಪರಾರಿಯಾಗಿದೆ ಎನ್ನಲಾಗಿದೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story





