Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದತ್ತ ಪೀಠ ವಿಚಾರದಲ್ಲಿ ಹಿಂದುಗಳ...

ದತ್ತ ಪೀಠ ವಿಚಾರದಲ್ಲಿ ಹಿಂದುಗಳ ನಂಬಿಕೆಗೆ ಪೂರಕವಾದ ಹೈಕೋರ್ಟ್ ತೀರ್ಪು: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ28 Sept 2021 6:33 PM IST
share
ದತ್ತ ಪೀಠ ವಿಚಾರದಲ್ಲಿ ಹಿಂದುಗಳ ನಂಬಿಕೆಗೆ ಪೂರಕವಾದ ಹೈಕೋರ್ಟ್ ತೀರ್ಪು: ಸಿ.ಟಿ.ರವಿ

ಬೆಂಗಳೂರು, ಸೆ.28: ಚಿಕ್ಕಮಗಳೂರು ಜಿಲ್ಲೆಯ ‘ಬಾಬಾ ಬುಡನ್‍ಗಿರಿ’ ಶ್ರೀ ಗುರು ದತ್ತಾತ್ರೇಯ ಪೀಠದ ಪೂಜೆಗೆ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018ರ ಮಾರ್ಚ್ 19ರಂದು ಆದೇಶ ಹೊರಡಿಸಿದ್ದರು. ಮೌಲ್ವಿ ನೇಮಕ ಆದೇಶ ರದ್ದು ಮಾಡಿ ಇಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಮಹತ್ವದ ತೀರ್ಪನ್ನು ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

ಮೌಲ್ವಿ ನೇಮಿಸುವ ಕುರಿತ ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ರದ್ದು ಮಾಡಿರುವ ಹೈಕೋರ್ಟ್ ತೀರ್ಪಿನಿಂದ ಹಿಂದೂಗಳೆಲ್ಲರಿಗೂ ಅತ್ಯಂತ ಸಂತೋಷ ಉಂಟಾಗಿದೆ. ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠವನ್ನು ನಂಬುವ ಎಲ್ಲರಿಗೂ ಶುಭ ವಿಚಾರ ಬಂದಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ. ಯಾವತ್ತೂ ಸತ್ಯಕ್ಕೆ ಜಯ ಖಚಿತ ಎಂಬುದು ಇದರಿಂದ ದೃಢಪಟ್ಟಿದೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನ್ಯಾಯಪೀಠದಿಂದ ಈ ಆದೇಶ ಬಂದಿದ್ದು, ಸಮಸ್ತ ಹಿಂದುಗಳ ಧಾರ್ಮಿಕ ಭಾವನೆಗಳ ಗೌರವವನ್ನು ಎತ್ತಿಹಿಡಿದಂತಾಗಿದೆ.  ಸಚಿವ ಸಂಪುಟ ಉಪ ಸಮಿತಿ ನೇಮಕ ಮಾಡಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್, ಹಂಪಿ ಕನ್ನಡ ವಿವಿಯ ರಹಮತ್ ತರೀಕೆರೆ, ಇತಿಹಾಸ ತಜ್ಞ ಷ.ಷಟ್ಟರ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯೇ ಕಾನೂನು ಬಾಹಿರವಾಗಿತ್ತು.  ನಾಗಮೋಹನ್ ದಾಸ್ ಸಮಿತಿ ವರದಿಯನ್ನು ವಜಾಗೊಳಿಸಿ ವಿಶ್ವಹಿಂದೂ ಪರಿಷತ್ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ ಎಂದು ಅವರು ಹೇಳಿದ್ದಾರೆ.

ದತ್ತಾತ್ರೇಯ ಪೀಠಕ್ಕೆ ಮೌಲ್ವಿಯನ್ನು ನೇಮಿಸಿದ್ದು ಸಮರ್ಪಕ ಕ್ರಮವಾಗಿರಲಿಲ್ಲ. ಹೀಗಾಗಿ ಈ ನೇಮಕವನ್ನು  ಪ್ರಶ್ನಿಸಿದ ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿಗೆ ಹೈಕೋರ್ಟ್‍ನಿಂದ ಇಂದು ನ್ಯಾಯ ಸಿಕ್ಕಿದೆ. ಇದರಿಂದ ನ್ಯಾಯಾಂಗದ ಮೇಲಿನ ವಿಶ್ವಾಸ ಇನ್ನಷ್ಟು ವೃದ್ಧಿಸಿದೆ. ಈ ತೀರ್ಪನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ಸಿ.ಟಿ.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X