"ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು ಆರೆಸ್ಸೆಸ್ ನಾಯಕರಿಗೆ ಗುತ್ತಿಗೆ ಕೊಟ್ಟವರಾರು?": ಸಿದ್ದರಾಮಯ್ಯ ಪ್ರಶ್ನೆ
"ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಆರೆಸೆಸ್ಸ್ ಸಂಸ್ಕೃತಿಯೇ?"

ಸಿದ್ದರಾಮಯ್ಯ (File Photo)
ಬೆಂಗಳೂರು: ಆರೆಸ್ಸೆಸ್ ಎಂದರೆ ಏನು?, ಅದರ ಜೊತೆ ಬಿಜೆಪಿ ಸಂಬಂಧ ಏನು? ಆರೆಸ್ಸೆಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಪ್ರಶ್ನಿಸಿದ್ದಾರೆ.
ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಆರೆಸ್ಸೆಸ್ ಎಂದ ಕೂಡಲೇ ಉರಿದುಬೀಳುವ ಸಿ.ಟಿ. ರವಿ ಅವರೇ, ಆರೆಸ್ಸೆಸ್ ಎಂದರೆ ಏನು? ಅದರ ಜೊತೆ ಬಿಜೆಪಿ ಸಂಬಂಧ ಏನು? ಆರೆಸ್ಸೆಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನು ಉತ್ಪಾದಿಸಿ ಕೊಡುವ ಕಾರ್ಖಾನೆಯೇ?" ಎಂದು ಪ್ರಶ್ನಿಸಿದ್ದಾರೆ.
"ಆರೆಸ್ಸೆಸ್ ಎನ್ನುವುದು ಹಿಂದುಗಳ ಸಂಘಟನೆ ಎಂದು ನೀವು ಹೇಳುವುದಾದಾರೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬೇರೆ ಪಕ್ಷದವರು ಹಿಂದೂಗಳಲ್ಲವೇ? ದೆಹಲಿಯಲ್ಲಿ 10 ತಿಂಗಳಿಂದ ಬೀದಿಯಲ್ಲಿರುವವರು ಹಿಂದುಗಳಲ್ಲವೇ? ವಾರದ ಹಿಂದೆ ಉತ್ತರಪ್ರದೇಶದಲ್ಲಿ ಅತ್ಯಾಚಾರಕ್ಕೀಡಾದ ದಲಿತ ಯುವತಿ ಹಿಂದು ಅಲ್ಲವೇ?" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
"ಆರೆಸ್ಸೆಸ್ ಸಾಂಸ್ಕೃತಿಕ ಸಂಘಟನೆ ಎಂದಾದರೆ ಅದರ ಸಂಸ್ಕೃತಿಯ ವ್ಯಾಖ್ಯಾನವೇನು? ನಿನ್ನೆ ತಾನೆ ಮಂಗಳೂರಿನಲ್ಲಿ ಅಮಾಯಕ ವಿದ್ಯಾರ್ಥಿ-ವಿದ್ಯಾರ್ಥಿನಿಗಳ ಮೇಲೆ ನಿಮ್ಮ ಪರಿವಾರದ ಗೂಂಡಾಗಳು ನಡೆಸಿದ ದೌರ್ಜನ್ಯ ಕೂಡಾ ಈ ಸಂಸ್ಕೃತಿಯಲ್ಲಿ ಸೇರಿದೆಯೇ?" ಎಂದು ಅವರು ಪ್ರಶ್ನಿಸಿದ್ದಾರೆ.
"ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು ಆರೆಸ್ಸೆಸ್ ನಾಯಕರಿಗೆ ಗುತ್ತಿಗೆ ಕೊಟ್ಟವರಾರು? ಆರೆಸ್ಸೆಸ್ ನಾಯಕರೇನು ಜನರಿಂದ ಚುನಾಯಿತರಾದ ನಾಯಕರೇ? ಅವರು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು? ನಿಮ್ಮ ಎರಡು ಸಂಘಟನೆಗಳ ನಡುವೆ ಮುಖ ಯಾವುದು? ಮುಖವಾಡ ಯಾವುದು?"
ಎಂದು ಅವರು ಸಿಟಿ ರವಿ ಅವರನ್ನು ಪ್ರಶ್ನಿಸಿದ್ದಾರೆ.
"ನಾನು ಮತ್ತು ನನ್ನಂತಹ ಕೋಟ್ಯಂತರ ಜನ ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ. ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
"ಸಿಟಿ ರವಿ ಅವರೇ, ನಿಮ್ಮನ್ನು ರೈತನ ಮಗ ಎನ್ನುತ್ತೀರಿ, ನಾನು ಉಡುವ ರೈತ ಮಕ್ಕಳ ಪಂಚೆಯನ್ನು ಗೇಲಿ ಮಾಡುತ್ತೀರಿ. ನಿಮ್ಮ ತಂದೆ ಕೂಡಾ ಪಂಚೆ ಉಡುವವರು ಎಂದು ಅಂದುಕೊಳ್ತೀನಿ. ನಿಮ್ಮಂತಹ ಮಗನ ಬಗ್ಗೆ ಅವರೇನು ಅಂದುಕೊಳ್ಳಬಹುದು ಯೋಚಿಸಿದ್ದೀರಾ? ಈ ರೀತಿ ನಾಲಿಗೆ ಸಡಿಲ ಬಿಟ್ಟು ಮನೆಗೆ ಹೋಗುವಾಗ ಹುಷಾರಾಗಿರಿ" ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊನೆಯದಾಗಿ ಸಿಟಿ ರವಿ ಅವರೇ, ಅವರೇ? ಕಣ್ಣಿಗೆ ಪೊರೆ ಬಂದವರು ಕತ್ತಲಲ್ಲಿ ಕಾರು ಚಲಾಯಿಸಬಾರದು, ಅಪಘಾತವಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಾರೆ. ಪೊರೆ ಬಂದಿದ್ದರೆ ಕ್ಯಾಟಾರಕ್ಟ್ ಮಾಡಿಸಿಕೊಳ್ಳಿ. ಸಾರ್ವಜನಿಕರ ಜೀವ ಮುಖ್ಯ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆರ್ ಎಸ್ ಎಸ್ ಎಂದ ಕೂಡಲೇ ಉರಿದುಬೀಳುವ @CTRavi_BJP ಅವರೇ,
— Siddaramaiah (@siddaramaiah) September 28, 2021
ಆರ್ ಎಸ್ ಎಸ್ ಎಂದರೆ ಏನು?
ಅದರ ಜೊತೆ@BJP4India
ಸಂಬಂಧ ಏನು?
ಆರ್ ಎಸ್ ಎಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನು
ಉತ್ಪಾದಿಸಿ ಕೊಡುವ ಕಾರ್ಖಾನೆಯೇ?
1/7
ಆರ್ ಎಸ್ ಎಸ್
— Siddaramaiah (@siddaramaiah) September 28, 2021
ಎನ್ನುವುದು ಹಿಂದುಗಳ ಸಂಘಟನೆ ಎಂದು ನೀವು ಹೇಳುವುದಾದಾರೆ @BJP4Karnataka ಯಲ್ಲಿರುವವರು ಮಾತ್ರ ಹಿಂದೂಗಳೇ?
ಬೇರೆ ಪಕ್ಷದವರು ಹಿಂದೂಗಳಲ್ಲವೇ?
ದೆಹಲಿಯಲ್ಲಿ 10 ತಿಂಗಳಿಂದ ಬೀದಿಯಲ್ಲಿರುವವರು ಹಿಂದುಗಳಲ್ಲವೇ?
ವಾರದ ಹಿಂದೆ ಉತ್ತರಪ್ರದೇಶದಲ್ಲಿ ಅತ್ಯಾಚಾರಕ್ಕೀಡಾದ ದಲಿತ ಯುವತಿ ಹಿಂದು ಅಲ್ಲವೇ?
2/7
ಆರ್ ಎಸ್ ಎಸ್ ಸಾಂಸ್ಕೃತಿಕ ಸಂಘಟನೆ ಎಂದಾದರೆ
— Siddaramaiah (@siddaramaiah) September 28, 2021
ಅದರ ಸಂಸ್ಕೃತಿಯ ವ್ಯಾಖ್ಯಾನವೇನು?
ನಿನ್ನೆ ತಾನೆ ಮಂಗಳೂರಿನಲ್ಲಿ ಅಮಾಯಕ ವಿದ್ಯಾರ್ಥಿ-ವಿದ್ಯಾರ್ಥಿನಿಗಳ ಮೇಲೆ ನಿಮ್ಮ ಪರಿವಾರದ ಗೂಂಡಾಗಳು ನಡೆಸಿದ ದೌರ್ಜನ್ಯ ಕೂಡಾ ಈ ಸಂಸ್ಕೃತಿಯಲ್ಲಿ ಸೇರಿದೆಯೇ?
3/7
ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು
— Siddaramaiah (@siddaramaiah) September 28, 2021
ಆರ್ ಎಸ್ ಎಸ್ ನಾಯಕರಿಗೆ ಗುತ್ತಿಗೆ ಕೊಟ್ಟವರಾರು?
ಆರ್ ಎಸ್ ಎಸ್ ನಾಯಕರೇನು
ಜನರಿಂದ ಚುನಾಯಿತರಾದ ನಾಯಕರೇ?
ಅವರು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು?
ನಿಮ್ಮ ಎರಡು ಸಂಘಟನೆಗಳ ನಡುವೆ ಮುಖ ಯಾವುದು? ಮುಖವಾಡ ಯಾವುದು?@CTRavi_BJP
4/7
ನಾನು ಮತ್ತು ನನ್ನಂತಹ ಕೋಟ್ಯಂತರ ಜನ
— Siddaramaiah (@siddaramaiah) September 28, 2021
ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು
ಕೊಟ್ಟ ಸಂವಿಧಾನದಿಂದ.
ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ.@CTRavi_BJP
5/7
.@CTRavi_BJP ಅವರೇ, ನಿಮ್ಮನ್ನು
— Siddaramaiah (@siddaramaiah) September 28, 2021
ರೈತನ ಮಗ ಎನ್ನುತ್ತೀರಿ,
ನಾನು ಉಡುವ
ರೈತ ಮಕ್ಕಳ ಪಂಚೆಯನ್ನು ಗೇಲಿ ಮಾಡುತ್ತೀರಿ.
ನಿಮ್ಮ ತಂದೆ ಕೂಡಾ ಪಂಚೆ ಉಡುವವರು ಎಂದು ಅಂದುಕೊಳ್ತೀನಿ.
ನಿಮ್ಮಂತಹ ಮಗನ ಬಗ್ಗೆ ಅವರೇನು ಅಂದುಕೊಳ್ಳಬಹುದು ಯೋಚಿಸಿದ್ದೀರಾ?
ಈ ರೀತಿ ನಾಲಿಗೆ
ಸಡಿಲ ಬಿಟ್ಟು ಮನೆಗೆ ಹೋಗುವಾಗ ಹುಷಾರಾಗಿರಿ.
6/7
ಕೊನೆಯದಾಗಿ @CTRavi_BJP ಅವರೇ?
— Siddaramaiah (@siddaramaiah) September 28, 2021
ಕಣ್ಣಿಗೆ ಪೊರೆ ಬಂದವರು ಕತ್ತಲಲ್ಲಿ ಕಾರು ಚಲಾಯಿಸಬಾರದು, ಅಪಘಾತವಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಾರೆ.
ಪೊರೆ ಬಂದಿದ್ದರೆ
ಕ್ಯಾಟಾರಕ್ಟ್ ಮಾಡಿಸಿಕೊಳ್ಳಿ. ಸಾರ್ವಜನಿಕರ ಜೀವ ಮುಖ್ಯ.
7/7







