Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎನ್‍ಇಪಿ ಅಡಿ ವಿದ್ಯಾರ್ಥಿ ಕೇಂದ್ರಿತ...

ಎನ್‍ಇಪಿ ಅಡಿ ವಿದ್ಯಾರ್ಥಿ ಕೇಂದ್ರಿತ ಬೋಧನಾ ಕ್ರಮ ರೂಪಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ28 Sept 2021 7:37 PM IST
share
ಎನ್‍ಇಪಿ ಅಡಿ ವಿದ್ಯಾರ್ಥಿ ಕೇಂದ್ರಿತ ಬೋಧನಾ ಕ್ರಮ ರೂಪಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿ ರೂಪಿಸಲಾಗುವ ಪಠ್ಯಕ್ರಮ, ಬೋಧನಾ ವಿಧಾನಗಳನ್ನು ವಿದ್ಯಾರ್ಥಿ ಕೇಂದ್ರಿತವಾಗಿ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ರೂಪಿಸಲಾದ ಕಾರ್ಯಪಡೆಯ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಅವರು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮುಗ್ಧತೆ ಮತ್ತು ಕುತೂಹಲಗಳೆಂಬ ಪರಸ್ಪರ ವಿರುದ್ಧ ಗುಣಗಳನ್ನು ಮಕ್ಕಳು ಹೊಂದಿರುತ್ತಾರೆ. ಇದು ಪ್ರಾಯಕ್ಕೆ ಬರುವವರೆಗೂ ಮಕ್ಕಳಲ್ಲಿ ಇರುತ್ತದೆ. ಇದಕ್ಕೆ ಪೂರಕವಾದ ಶಿಕ್ಷಣ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಮಗೆ ಶಿಕ್ಷಣದ ಬಗ್ಗೆ, ಮಕ್ಕಳ ಬಗ್ಗೆ ಚಿಂತನೆ ನಡೆಸಲು ಅವಕಾಶ ದೊರೆತಿದೆ. ಇದರಡಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದ ಅವರು, ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಕರ್ನಾಟಕದ ಭವಿಷ್ಯವನ್ನು ಬರೆಯುತ್ತಿವೆ ಎಂಬುದನ್ನು ಮನದಟ್ಟು ಮಾಡಿಕೊಂಡು ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು. 

ನೂತನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಸಂವಾದಕ್ಕೆ ಅವಕಾಶ ಕಲ್ಪಿಸಬೇಕು. ಕಲಿಕೆ ಸುಲಲಿತವಾಗಿ ಆಗಬೇಕು. ಮಕ್ಕಳು ಆಟವಾಡುತ್ತ ಕಲಿಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳ ಗ್ರಹಣ ಅತಿ ಹೆಚ್ಚಾಗಿರುತ್ತದೆ. ಈ ಅವಧಿಯಲ್ಲಿ ನಾವು ಅವರ ಮೇಲೆ ಮಾಹಿತಿಯ ಹೊರೆ ಹೊರಿಸದೆ ಉತ್ತಮ ಆಲೋಚನಾ ವಿಧಾನವನ್ನು ಕಲಿಸಿಕೊಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ವಿವಿಧ ವಯೋಮಾನದಲ್ಲಿ ಮಕ್ಕಳ ಕಲಿಕೆಯ ಮಟ್ಟ ನಿಗದಿ ಪಡಿಸುವ ಕುರಿತು ಮತ್ತು ಬೋಧನಾ ವಿಧಾನಗಳ ಕುರಿತು ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಮುಖ್ಯಮಂತ್ರಿ, ಜೊತೆಗೆ 8ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ವಿವಿಧ ವೃತ್ತಿಗಳಿಗೆ ಸಿದ್ಧತೆ ಕುರಿತು ಮಾರ್ಗದರ್ಶ ನೀಡಬೇಕು ಎಂದರು.

ಈ ನೀತಿಯಡಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳನ್ನು ವಿಶೇಷ ಶೈಕ್ಷಣಿಕ ವಲಯ ಎಂದು ಗುರುತಿಸಿ, ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರೂ ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸುವಂತಾಗಬೇಕು ಹಾಗೂ ಶಿಕ್ಷಕರ ಮೌಲ್ಯಮಾಪನಕ್ಕೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ ಶಿಕ್ಷಣ ವ್ಯವಸ್ಥೆ ಇತರ ರಾಜ್ಯಗಳಿಗೆ ಹೋಲಿಸಿದರೆ, ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳಿಗೆ ಸಮೀಪದಲ್ಲಿದೆ. ಇವೆರಡರ ನಡುವಿನ ಅಂತರ ನಿವಾರಿಸುವ ಮೂಲಕ ಹೊಸ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತ ಕಾರ್ಯಪಡೆಯ ಅಧ್ಯಕ್ಷ ಮದನ್‍ಗೋಪಾಲ್, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X