Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಆರ್‌ಝಡ್ ಅಧಿಸೂಚನೆ-2019ರಲ್ಲಿ...

ಸಿಆರ್‌ಝಡ್ ಅಧಿಸೂಚನೆ-2019ರಲ್ಲಿ ಹೆಚ್ಚಿನ ಚಟುವಟಿಕೆಗೆ ಅವಕಾಶ: ಡಿಸಿ ಕೂರ್ಮಾ ರಾವ್

ವಾರ್ತಾಭಾರತಿವಾರ್ತಾಭಾರತಿ28 Sept 2021 7:49 PM IST
share
ಸಿಆರ್‌ಝಡ್ ಅಧಿಸೂಚನೆ-2019ರಲ್ಲಿ ಹೆಚ್ಚಿನ ಚಟುವಟಿಕೆಗೆ ಅವಕಾಶ: ಡಿಸಿ ಕೂರ್ಮಾ ರಾವ್

ಉಡುಪಿ, ಸೆ.28: ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ-2019ರಲ್ಲಿ ಅಭಿವೃಧ್ದಿ ಚಟುವಟಿಕೆಗಳನ್ನು ಕೈಗೊಳ್ಳಲು ಹೆಚ್ಚಿನ ರಿಯಾಯಿತಿ ಗಳು ದೊರೆಯಲಿದ್ದು, ಈ ಕುರಿತು ತಯಾರಿಸಿದ ಕರಡು ಯೋಜನೆಯ ಕುರಿತಂತೆ ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹೇಳಿದ್ದಾರೆ.

ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಂಗಳ ವಾರ ನಡೆದ ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ-2019ರ ಪ್ರಕಾರ ತಯಾರಿಸಿದ ಕರಡು ಕರಾವಳಿ ವಲಯ ನಿರ್ವಹಣಾ ಯೋಜನೆಯ ಸಾರ್ವಜನಿಕ ಅಹವಾಲು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಡು ಯೋಜನೆಯಲ್ಲಿ, ಉಬ್ಬರ-ಇಳಿತದ ಪ್ರಭಾವಕ್ಕೆ ಒಳಗಾದ ಜಲನಿಕಾಯಗಳ ಭರತರೇಖೆಯಿಂದ 100ಮೀ.ವರೆಗೆ ಇದ್ದ ಸಿಆರ್‌ಝಡ್ ಪ್ರದೇಶವನ್ನು 50ಮೀ.ಗೆ ಕಡಿತಗೊಳಿಸಲಾಗಿದೆ. ಕುದ್ರು ದ್ವೀಪಗಳಿಗೆ 100ಮೀ. ವರೆಗೆ ಇದ್ದ ಸಿಆರ್‌ಝಡ್ ಪ್ರದೇಶವನ್ನು 20 ಮೀ.ಗೆ ಕಡಿಮೆಗೊಳಿಸಿದೆ. ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಅಥವಾ ಸ್ಥಳೀಯ ನಗರಾಭಿವೃಧ್ದಿ ಯೋಜನಾ ಪ್ರಾಧಿಕಾರಕ್ಕೆ ಸೇರಿಸಿ ಘೋಷಣೆಯಾದ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ರಿಂದ 2ಕ್ಕೆ ಬದಲಾಯಿಸಲಾಗಿದೆ ಎಂದರು.

2011ರ ಜನಗಣತಿ ಆಧಾರದ ಮೇಲೆ ಚದರ ಕಿ.ಮೀ.ಗೆ 2161ಕ್ಕಿಂತ ಹೆಚ್ಚಿನ ಜನಸಂಖ್ಯೆಯುಳ್ಳ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ಎ ಎಂದು ವಿಂಗಡಿಸಿ, ಅಭಿವೃದ್ದಿ ನಿಷಿದ್ದ ಪ್ರದೇಶದ ವ್ಯಾಪ್ತಿಯನ್ನು ಸಮುದ್ರದ ಭರತ ರೇಖೆಯಿಂದ 50ಮೀ.ಗೆ ಸೀಮಿತಗೊಳಿಸಲಾಗಿದೆ ಎಂದರು.

ಕರಡು ನಕಾಶೆಯಲ್ಲಿ ಜಿಲ್ಲೆಯ ಕೋಟೆ, ಮಟ್ಟು, ಪಾಂಗಾಳ, ಬಡಾ, ಬೈಂದೂರು, ಪಡುವರಿ, ಯಡ್ತರೆ, ತಗ್ಗರ್ಸೆ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ರಿಂದ 2ಕ್ಕೆ ಸೇರಿಸಿರುವುದರಿಂದ ಈ ಪ್ರದೇಶದಲ್ಲಿ ಅಭಿವೃದ್ದಿ ಚಟುವಟಿಕೆಗಳನ್ನು ನಡೆಸಲು ಹೆಚ್ಚಿನ ರಿಯಾಯತಿ ದೊರೆಯಲಿದೆ. ಗಂಗೊಳ್ಳಿ ಗ್ರಾಮವನ್ನು ಕರಾವಳಿ ನಿಯಂತ್ರಣ ಲಯ 3ಎ ಗೆ ಸೇರಿಸಲಾಗಿದೆ ಎಂದರು.

ಸಿಗಡಿ ಕೃಷಿಕ ಸಂಘದ ಕಾರ್ಯದರ್ಶಿ ಶ್ರೀಧರ ಹೆಗಡೆ ಹಾಗೂ ಹಂಗಳೂರು ಗ್ರಾಮದ ಸೀಗಡಿ ಕೃಷಿಕರು, ಸಿಗಡಿ ಬೆಳೆಯುವ ಪ್ರದೇಶವನ್ನು ವೈಮಾನಿಕ ಸಮೀಕ್ಷೆಯಲ್ಲಿ ಹೊಳೆ ಎಂದು ಪರಿಗಣಿಸಿದ್ದು, ಇದರಿಂದ ಸಿಗಡಿ ಕೃಷಿಗೆ ತೊಂದರೆಯಾಗಲಿದೆ. ಈ ಬಗ್ಗೆ ಪರಿಶೀಲಿಸುವಂತೆ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಸಿಗಡಿ ಕೃಷಿಗೆ ಯೋಜನೆಯಿಂದ ಯಾವುದೇ ತೊಂದರೆ ಇಲ್ಲ. ಹೊಸದಾಗಿ ಸಿಗಡಿ ಕೃಷಿ ಮಾಡುವವರು ಅನುಮತಿ ಪಡೆಯಬೇಕಾಗುತ್ತದೆ. ಈಗಾಗಲೇ ಮಾಡುತ್ತಿರುವವರು ನವೀಕರಣ ಮಾಡಬೇಕು. ಸಿಗಡಿ ಕೃಷಿಗೆ ಅನುಮತಿ ನೀಡಲಾಗುತ್ತದೆ. ಹೊಳೆ ಎಂದು ನಮೂದಿಸಿರುವುದನ್ನು ಸರಿಪಡಿಸಲಾಗುವುದು ಎಂದರು.

ಕುಂದಾಪುರ ತಾಲೂಕಿನ ಹೇರಿಕುದ್ರು, ಕನ್ನಡಕುದ್ರುಗಳಲ್ಲಿ ಹೊಳೆ ಮಧ್ಯೆ ಕಾಂಡ್ಲಾ ಗಿಡಗಳನ್ನು ನೆಟ್ಟಿರುವ ಕಾರಣ ನೀರು ಹರಿಯಲು ತೊಂದರೆಯಾಗಿ ಮರಳು ಶೇಖರಣೆಯಾಗಿದೆ. ಇದರಿಂದ ಹರಿಯುವ ನೀರು ಗ್ರಾಮಗಳಿಗೆ ಹಿಮ್ಮುಖವಾಗಿ ಬಂದು ಪ್ರವಾಹ ಪರಿಸ್ಥಿತಿ ಬರಲಿದ್ದು ಕೂಡಲೇ ಅಲ್ಲಿರುವ ಮರಳು ದಿಬ್ಬ ತೆರವುಗೊಳಿಸುವಂತೆ ಗ್ರಾಮಸ್ಥರು ಕೋರಿದರು.

ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್ ಮಾತನಾಡಿ, ಸಿಆರ್‌ಝಡ್‌ನಿಂದ ಮೀನುಗಾರರಿಗೆ ಯಾವುದೇ ತೊಂದರೆಯಾಗ ದಂತೆ ನಿಯಮಗಳನ್ನು ರೂಪಿಸಬೇಕು. ನಕ್ಷೆಯಲ್ಲಿ ಗಂಗೊಳ್ಳಿ, ಹಂಗಾರಕಟ್ಟೆ ಮತ್ತು ಹೆಜಮಾಡಿ ಪೋರ್ಟ್‌ಗನ್ನು ಗುರುತಿಸಬೇಕು ಎಂದರು.

ಸಾರ್ವಜನಿಕ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅಹವಾಲು ಗಳನ್ನು ರಾಜ್ಯಕ್ಕೆ ಕಳುಹಿಸಲಾಗುವುದು. ಅಲ್ಲಿಂದ ಅದು ಅಗತ್ಯ ಬದಲಾವಣೆ ಯಾಗಿ ಕೇಂದ್ರಕ್ಕೆ ಸಲ್ಲಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಆರ್‌ಝಡ್ ಪ್ರಾದೇಶಿಕ ನಿರ್ದೇಶಕ ಶ್ರೀಪತಿ ಬಿ.ಎಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X